Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ
ನದಿಗೆ ಹಾರಿ ಸವಾರನನ್ನು ರಕ್ಷಿಸಿದ ಸ್ಥಳೀಯ ಯುವಕರು
Team Udayavani, Sep 30, 2023, 2:51 PM IST
ವಿಟ್ಲ: ಬೈಕ್ ಸೇತುವೆಗೆ ಢಿಕ್ಕಿಯಾಗಿ ಸವಾರ 40 ಅಡಿ ಆಳದ ನದಿಗೆ ಬಿದ್ದಿದ್ದು, ಸ್ಥಳೀಯ ಯುವಕರು ರಕ್ಷಿಸಿದ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕಪ್ರವೀಣ ಹರ್ಷವರ್ಧನ ಭಟ್(55) ಅವರು ಕಾರ್ಯನಿಮಿತ್ತ ಶನಿವಾರ ಬೆಳಗ್ಗೆ 4 ಗಂಟೆಗೆ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು. ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಢಿಕ್ಕಿ ಹೊಡೆದು ಸವಾರ ಹರ್ಷವರ್ಧನ 40 ಅಡಿ ಆಳದ ನದಿಗೆ ಬಿದ್ದಿದ್ದಾರೆ.
ಈ ಅಪಘಾತವನ್ನು ಸ್ಥಳೀಯರು ನೋಡಿ ಹುಡುಕಾಡಲು ಆರಂಭಿಸಿದ್ದರು. ಐವತ್ತು ಮೀಟರ್ ದೂರದಲ್ಲಿ ಹೊಳೆ ಮಧ್ಯೆ ನೀರಿನಲ್ಲಿ ಒಬ್ಬ ವ್ಯಕ್ತಿ ಜೋರಾಗಿ ಕೂಗಾಡುತ್ತಿರುವ ಶಬ್ದ ಕೇಳಿತು. ತತ್ ಕ್ಷಣ ನದಿಗೆ ಹಾರಿದ ಯುವಕರು ವ್ಯಕ್ತಿಯನ್ನು ಮೇಲಕ್ಕೆತ್ತಿ ಬದುಕಿಸಿದ್ದಾರೆ.
ಬಳಿಕ ಗಾಯಾಳುವನ್ನು ಉಪಚರಿಸಿದ ಮುಸಲ್ಮಾನ ಬಾಂಧವ ಯುವಕರು ಆಟೋ ಮೂಲಕ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದು, ಯುವಕರ ಕಾರ್ಯಕ್ಕೆ ಪಾಕಪ್ರವೀಣ ಹರ್ಷವರ್ಧನ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.