Karnataka Election 2023; ಕುಕ್ಕೆಗೆ ಬಿಜೆಪಿ ಅಭ್ಯರ್ಥಿ, ಸಚಿವ V. Sunil Kumar ಭೇಟಿ
Team Udayavani, Apr 12, 2023, 10:51 AM IST
ಸುಬ್ರಹ್ಮಣ್ಯ: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.
ಬುಧವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಕ್ಕೆಯಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ವತಿಯಿಂದ ಸುನಿಲ್ ಕುಮಾರ್ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ವನಜಾ ವಿ.ಭಟ್, ಮನೋಜ್ ಕುಮಾರ್, ದೇವಸ್ಥಾನದ ಅಧಿಕಾರಿಗಳು, ಸಿಬ್ಬಂದಿಗಳು, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೊರಗಜ್ಜ ಕ್ಷೇತ್ರಕ್ಕೆ ಭೇಟಿ:
ಬಳಿಕ ಸುನಿಲ್ ಕುಮಾರ್ ಸುಬ್ರಹ್ಮಣ್ಯ ಸಮೀಪದ ದೇವರಗದ್ದೆ ಸ್ವಾಮಿ ಕೊರಗಜ್ಜ ದೈವದ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಕ್ಷೇತ್ರದವರು ಉಪಸ್ಥಿತರಿದ್ದರು. ನಾಮ ಪತ್ರ ಸಲ್ಲಿಕೆಗೆ ಮೊದಲು ಪುಣ್ಯ ಕ್ಷೇತ್ರಗಳ ಸಂದರ್ಶನ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.