BJP ಕೋರ್‌ ಕಮಿಟಿ ಸಭೆ; ಯಾವುದೇ ನಿರ್ಧಾರಕ್ಕೆ ಬಾರದ ಮುಖಂಡರು!

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರ ಆಯ್ಕೆಗೆ ಅಸಮಾಧಾನ ಹಿನ್ನೆಲೆ

Team Udayavani, Feb 6, 2024, 11:38 PM IST

bjpBJP ಕೋರ್‌ ಕಮಿಟಿ ಸಭೆ; ಯಾವುದೇ ನಿರ್ಧಾರಕ್ಕೆ ಬಾರದ ಮುಖಂಡರು!

ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ನೇತೃತ್ವದಲ್ಲಿ ಸುಳ್ಯದಲ್ಲಿ ನಡೆದ ಕೋರ್‌ ಕಮಿಟಿ ಸಭೆ ಯಾವುದೇ ನಿರ್ಧಾರಕ್ಕೆ ಬಾರದೇ ಮುಕ್ತಾಯಗೊಂಡಿದೆ.

ಸಭೆಯಲ್ಲಿ ಪಕ್ಷ ಸಂಘಟನೆ, ಮುಂದಿನ ಲೋಕಸಭೆ ಚುನಾವಣೆ ತಯಾರಿ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಸುಳ್ಯ ಮಂಡಲದಲ್ಲಿ ಯಾವುದೇ ಅಸಮಾಧಾನ, ಗೊಂದಲ ಇಲ್ಲ ಎಂದು ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಮಂಗಳವಾರ ದಿನಪೂರ್ತಿ ಮ್ಯಾರಥಾನ್‌ ಸಭೆ ನಡೆದಿದೆ. ಕೋರ್‌ಕಮಿಟಿ ಸದಸ್ಯರು ಹಾಗೂ ಜಿಲ್ಲಾ ಮುಖಂಡರು ಮಧ್ಯೆ ತೀವ್ರ ಚರ್ಚೆ ನಡೆಯಿತು. ಕೋರ್‌ ಕಮಿಟಿ ಸದಸ್ಯರು ತಮ್ಮ ನಿಲುವನ್ನು ಬದಲಾ ಯಿ ಸದೆ ಪಟ್ಟು ಹಿಡಿದು ಚರ್ಚೆ ನಡೆಸಿದರು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದಲ್ಲಿ ಪ್ರಜಾಪ್ರಭುತ್ವ ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಬೇಕು. ಕೋರ್‌ಕಮಿಟಿ, ಮಂಡಲ ಸಮಿತಿ ಹಾಗೂ ಕಾರ್ಯಕರ್ತರ ತೀರ್ಮಾನಕ್ಕೆ ಬೆಲೆ ನೀಡಬೇಕು ಎಂದು ಸದಸ್ಯರು ಜಿಲ್ಲಾ ಪ್ರಮುಖರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನದ ಬಳಿಕ ನೂತನ ಅಧ್ಯಕ್ಷ ವೆಂಕಟ್‌ ವಳಲಂಬೆ ಸಭೆ ಯಲ್ಲಿ ಭಾಗವಹಿಸಿದ್ದರು. ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಒಟ್ಟಾಗಿ ಕೆಲಸ ಮಾಡಲಾಗುವುದು ಎಂದು ಅಧ್ಯಕ್ಷ ವೆಂಕಟ್‌ ವಳಲಂಬೆ ಹೇಳಿದರು.

ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್‌ ಶೆಟ್ಟಿ, ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಕೋರ್‌ಕಮಿಟಿ ಸದಸ್ಯರಾದ ಹರೀಶ್‌ ಕಂಜಿಪಿಲಿ, ಎಸ್‌.ಎನ್‌. ಮನ್ಮಥ, ಎ.ವಿ. ತೀರ್ಥರಾಮ, ವೆಂಕಟ್‌ ದಂಬೆಕೋಡಿ, ಸುಬೋಧ್‌ ಶೆಟ್ಟಿ ಮೇನಾಲ, ರಾಕೇಶ್‌ ರೈ ಕೆಡೆಂಜಿ, ಕೃಷ್ಣ ಶೆಟ್ಟಿ ಕಡಬ ಭಾಗವಹಿಸಿದ್ದರು.

ಟಾಪ್ ನ್ಯೂಸ್

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.