Life sentence: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟ
Team Udayavani, Oct 19, 2024, 10:10 PM IST
ಸುಳ್ಯ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿ ಅವರನ್ನು ವಾಹನ ಅಪಘಾತ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಹರಿಪ್ರಸಾದ್ ಮತ್ತು ಜಯನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಡಗು ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಬಾಲಚಂದ್ರ ಅವರನ್ನು 2019 ಮಾ.19ರಂದು ಆಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆಸಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಅವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು. ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ ಸಂಪತ್‌ನನ್ನು ಸುಳ್ಯದ ಶಾಂತಿನಗರದಲ್ಲಿ ಕೊಲೆ ಮಾಡಲಾಗಿತ್ತು. ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ಅ.16 ರಂದು ಕೊಡಗು ನ್ಯಾಯಾಲಯ ಘೋಷಿಸಿ, ಶಿಕ್ಷೆಯ ತೀರ್ಪನ್ನು ಅ.19ಕ್ಕೆ ಕಾದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.