ಬ್ಲ್ಯಾಕ್ ಫಂಗಸ್ ವೈರಸ್ ಗೆ ಬೆಳ್ತಂಗಡಿಯ ವ್ಯಕ್ತಿ ಬಲಿ
Team Udayavani, May 28, 2021, 10:12 AM IST
ಬೆಳ್ತಂಗಡಿ: ಕೊರೊನಾದ ಬಳಿಕ ಮತ್ತಷ್ಟು ಆತಂಕ ಹುಟ್ಟಿಸಿದ್ದ ಬ್ಲಾಕ್ ಫಂಗಸ್ ಗೆ ಬೆಳ್ತಂಗಡಿಯ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಬ್ಲ್ಯಾಕ್ ಫಂಗಸ್ ವೈರಸ್ಗೆ ಬಲಿಯಾದ ವ್ಯಕ್ತಿ.
ಇವರಿಗೆ ಕಣ್ಣು ಮತ್ತು ಕಿಡ್ನಿ ಸಮಸ್ಯೆ ಇದ್ದುದರಿಂದ ಕೆಲ ದಿನಗಳಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿತ್ತು.
ಇದನ್ನೂ ಓದಿ: 44 ದಿನಗಳಲ್ಲಿ ಅತೀ ಕಡಿಮೆ ಪ್ರಕರಣ ಪತ್ತೆ: 24ಗಂಟೆಗಳಲ್ಲಿ 1.86 ಲಕ್ಷ ಕೋವಿಡ್ ಪ್ರಕರಣ ವರದಿ
ಈ ವೇಳೆ ಬ್ಲ್ಯಾಕ್ ಫಂಗಸ್ ಗೋಚರಿಸಿದ್ದು ಕಣ್ಣಿನ ಆಪರೇಷನ್ ನಡೆಸಿದ ವೈದ್ಯರು ಬದುಕಿ ಉಳಿಯುವುದು ಕಷ್ಟ ಎಂದಿದ್ದರು. ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೇ 27ರಂದು ಮೃತಪಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿ ಬ್ಲಾಕ್ ಫಂಗಸ್ ಗೆ ಮೊದಲ ಬಲಿಯಾಗಿದೆ. ಲಾಕ್ ಡೌನ್ ನಿಂದ ಕೊರೊನಾ ಸಂಖ್ಯೆ ಇಳಿಮುಖವಾಗಿತ್ತಿದ್ದು, ಆದರೆ ಬ್ಲಾಕ್ ಫಂಗಸ್ ಗೆ ತುತ್ತಾಗಿರುವುದರಿಂದ ಆತಂತ ಹುಟ್ಟಿಸಿದೆ.
ಇದನ್ನೂ ಓದಿ: ಭದ್ರತಾ ಪಡೆ ಇರುವಂತೆ ಶಾಸಕನ ಮೇಲೆ ಗುಂಡಿನ ದಾಳಿ: ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.