Belthangady ಧಾರವಾಡದಲ್ಲಿ ಕ್ಯಾನ್ಸರ್‌ ಘಟಕ, ಫಾರ್ಮಸಿ ಕಾಲೇಜು

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವ

Team Udayavani, Oct 24, 2023, 11:03 PM IST

Belthangady ಧಾರವಾಡದಲ್ಲಿ ಕ್ಯಾನ್ಸರ್‌ ಘಟಕ, ಫಾರ್ಮಸಿ ಕಾಲೇಜು

ಬೆಳ್ತಂಗಡಿ: ಮೈಸೂರಿನಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ಹೊಸ ವಸ್ತುಸಂಗ್ರಹಾಲಯ, ಉಡುಪಿಯಲ್ಲಿ ಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ ನಿರ್ಮಾಣ, ಧಾರವಾಡದಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದಲ್ಲಿ ಅ. 24ರಂದು ನೆರವೇರಿದ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಸಮಾರಂಭದಲ್ಲಿ ಅವರು ಮಾತನಾಡಿ ಹೊಸ ಯೋಜನೆಗಳನ್ನು ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಮೂರು ಹೊಸ ಕಲ್ಯಾಣ ಮಂಟಪಗಳನ್ನು ನಿರ್ಮಿಸಲಾಗುವುದು. ರಜತಾದ್ರಿ ವಸತಿಗೃಹಕ್ಕೆ 200 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುವುದು. ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ ಎಂದು ಹೆಗ್ಗಡೆಯವರು ಪ್ರಕಟಿಸಿದರು.

ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಎಲ್ಲ ಕೆಲಸಗಳು ವೇಗದ ಗತಿಯಲ್ಲಿ ನಡೆಯುತ್ತಿವೆ. ಸ್ಫೂರ್ತಿಯ ಚಿಲುಮೆಯಾದ ಶ್ರದ್ಧಾ ಅಮಿತ್‌, ಶ್ರೇಯಸ್‌ ಕುಮಾರ್‌, ನಿಶ್ಚಲ್‌, ಸಾಕೇತ ಶೆಟ್ಟಿ, ಶ್ರುತಾ ಜಿತೇಶ್‌ ಮತ್ತು ಮೈತ್ರಿ ನಂದೀಶ್‌ ಅವರು ಬಹಳ ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ, ಕಾರ್ಯಕರ್ತರು ಮತ್ತು ಸಿಬಂದಿಯ ನಿಷ್ಠೆ ಮತ್ತು ಕಾರ್ಯತತ್ಪರತೆಯಿಂದ ತನ್ನ ಎಲ್ಲ ಯೋಜನೆಗಳು ಮತ್ತು ಯೋಚನೆಗಳು ಯಶಸ್ವಿಯಾಗುತ್ತಿರುವುದಕ್ಕೆ ಸಂತೋಷ ಮತ್ತು ತೃಪ್ತಿ ವ್ಯಕ್ತಪಡಿಸಿದ ಹೆಗ್ಗಡೆಯವರು ಇದರ ಕೀರ್ತಿ ಮತ್ತು ಯಶಸ್ಸನ್ನು ಶ್ರೀ ಮಂಜುನಾಥ ಸ್ವಾಮಿ ಮತ್ತು ಧರ್ಮದೇವತೆಗಳ ಸಾನ್ನಿಧ್ಯಕ್ಕೆ ಅರ್ಪಿಸುವುದಾಗಿ ಹೇಳಿದರು.

ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಮತ್ತು ವಿಸ್ತರಣೆಯಲ್ಲಿ ಪ್ರೊ| ಎಸ್‌. ಪ್ರಭಾಕರ್‌ ಅವರ ಸಲಹೆ ಮತ್ತು ಸಹಕಾರವನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು.

ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ| ನ. ವಜ್ರಕುಮಾರ್‌, ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಮತ್ತು ಇತ್ತೀಚೆಗೆ ನಿಧನರಾದ ಕಟ್ಟಡ ಕಾಮಗಾರಿ ವಿಭಾಗದ ಗೋಪಾಲ್‌ ಮೆನನ್‌ ಅವರ ಸೇವೆಯನ್ನು ಸ್ಮರಿಸಿದ ಹೆಗ್ಗಡೆಯವರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಶಾಸಕ ಕೆ. ಹರೀಶ್‌ ಪೂಂಜ ಮಾತನಾಡಿ, ಹೆಗ್ಗಡೆಯವರ ಬಹುಮುಖೀ ಸಮಾಜಸೇವೆಯಿಂದಾಗಿ ಬೆಳ್ತಂಗಡಿ ತಾಲೂಕು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ. ಹೆಗ್ಗಡೆಯವರ ಎಲ್ಲ ಯೋಚನೆಗಳು ಹಾಗೂ ಯೋಜನೆಗಳು ಆದರ್ಶ ಮತ್ತು ಅನುಕರಣೀಯವಾಗಿವೆ ಎಂದು ಹೇಳಿ ಅಭಿನಂದಿಸಿದರು.

ವಿಧಾನಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌ ಮಾತನಾಡಿ ಹೆಗ್ಗಡೆಯವರು ದೃಢಸಂಕಲ್ಪದಿಂದ ಮಾಡುತ್ತಿರುವ ಸೇವಾಕಾರ್ಯಗಳು ಸಾರ್ವತ್ರಿಕ ಮಾನ್ಯತೆ ಮತ್ತು ಗೌರವ ಹೊಂದಿವೆ ಎಂದು ಹೆಗ್ಗಡೆಯವರು ಅಭಿನಂದಿಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌, ಅನಿತಾ ಸುರೇಂದ್ರ ಕುಮಾರ್‌, ಡಿ. ಹರ್ಷೇಂದ್ರ ಕುಮಾರ್‌. ಸುಪ್ರಿಯಾ ಹರ್ಷೇಂದ್ರ ಕುಮಾರ್‌. ಡಿ. ರಾಜೇಂದ್ರ ಕುಮಾರ್‌ಮತ್ತು ನೀತಾ ರಾಜೇಂದ್ರ ಕುಮಾರ್‌, ಶ್ರದ್ಧಾ ಅಮಿತ್‌ ಮತ್ತು ಅಮಿತ್‌ ಉಪಸ್ಥಿತರಿದ್ದರು. ಊರಿನ ನಾಗರಿಕರು, ಅಭಿಮಾನಿಗಳು ಮತ್ತು ಭಕ್ತರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ ನೆರವೇರಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮಾ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀನಾರಾಯಣ ರಾವ್‌ ವಂದಿಸಿದರು. ಎಸ್‌ಡಿಎಂ ಸನಿವಾಸ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸುನಿಲ್‌ ಪಂಡಿತ್‌ ಕಾರ್ಯಕ್ರಮ ನಿರ್ವಹಿಸಿದರು.

ಹೈನುಗಾರಿಕೆ ಅಭಿವೃದ್ಧಿ
ತಮ್ಮ ಸಂಸದರ ನಿಧಿಯಿಂದ 2.50 ಕೋಟಿ ರೂ. ಅನುದಾನವನ್ನು ಬೀದರ್‌ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ಹೆಗ್ಗಡೆಯವರು ತಿಳಿಸಿದರು. ಹಾಲು ಮತ್ತು ಹಣ್ಣು ನಿತ್ಯ ಆದಾಯ ಕೊಡುವ ಮೂಲಗಳಾಗಿದ್ದು ಇವುಗಳ ಉತ್ಪಾದನೆಗೆ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

15

Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.