ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಹತ್ತು ಅಡಿ ಆಳಕ್ಕೆ ಬಿದ್ದ ಕಾರು: ಅಪಾಯದಿಂದ ಪಾರು
Team Udayavani, Mar 23, 2022, 3:23 PM IST
ಬಂಟ್ವಾಳ: ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಮಾರುತಿ ಅಲ್ಟೋ ಕಾರು ರಸ್ತೆ ಬಿಟ್ಟು ಸುಮಾರು ಹತ್ತು ಅಡಿ ಆಳಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಈ ಘಟನೆಯಲ್ಲಿ ಐದು ವರ್ಷದ ಬಾಲಕ ಸುವಿದ್ ಎಂಬಾತನಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು ಬೈಪಾಸ್ ಕೆಂಪುಗುಡ್ಡೆ ಕ್ರಾಸ್ ನ ಎದುರುಗಡೆ ರಸ್ತೆಯ ಬದಿಯಲ್ಲಿ ಇದ್ದ ವಿದ್ಯುತ್ ತಂತಿ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ಬಳಿಕ ಆಳೆತ್ತರದ ಗುಂಡಿಗೆ ಪಲ್ಟಿಯಾಗಿ ಬಿದ್ದಿದೆ.
ಅಲ್ಲಿಪಾದೆ ನಿವಾಸಿ ಗಿರೀಶ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಇಬ್ಬರು ಮಕ್ಕಳು ಸಹಿತ ಪಟ್ಟು ನಾಲ್ಕು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೋಲೀಸರು ತಿಳಿಸಿದ್ದಾರೆ.
ಅಲ್ಲಿಪಾದೆಯಿಂದ ಬಿಸಿರೋಡು ಕಡೆಗೆ ಬರುವ ವೇಳೆ ಈ ಅಪಘಾತ ನಡೆದಿದ್ದು, ಘಟನೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದು, ಸ್ಪಷ್ಟವಾದ ಮಾಹಿತಿ ಇನ್ನಷ್ಟೆ ತಿಳಿಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.