Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು
Team Udayavani, Jun 16, 2024, 12:11 AM IST
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರಾ ಗದ್ದೆಯಲ್ಲಿ ಮಗುವಿನ ಕೈಯಲ್ಲಿದ್ದ ಕರಿಮಣಿ ಮುತ್ತಿನ ಕೈ ಬಳೆಯನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿ 6 ಮಂದಿ ಆರೋಪಿಗಳ ಪೈಕಿ ಬಾಲಾಪರಾಧಿ ಸಹಿತ ನಾಲ್ವರಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ದರ್ಬೆ ಪಾಂಗಳಾಯಿ ನಿವಾಸಿ ಪದ್ಮಿನಿ ಸಿ ಅವರು ರಥೋತ್ಸವದಂದು ರಾತ್ರಿ ರಥಬೀದಿಯಲ್ಲಿ ಹೋಗುತ್ತಿದ್ದ ವೇಳೆ ಮಗುವಿನ ಎಡ ಕೈಯಲ್ಲಿದ್ದ ಕರಿಮಣಿ ಮುತ್ತಿನ ಕೈ ಬಳೆಯನ್ನು ಮಹಿಳೆಯೊಬ್ಬರು ಕತ್ತರಿಸಿ ಎಳೆದುಕೊಂಡಿರುವುದು ಗಮನಕ್ಕೆ ಬಂದು ತತಕ್ಷಣ ಆಕೆಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಆಕೆ ಓಡಲು ಯತ್ನಿಸಿದ್ದು ಕಳವುಗೈದಿದ್ದ ಬಳೆ ಕೆಳಗೆ ಬಿದ್ದಿತ್ತು.
ಆರೋಪಿ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆಕೆಗೆ ಪೊಲೀಸರು ಎಚ್ಚರಿಕೆ ನೀಡಿ ಬಿಟ್ಟಿದ್ದರೆಂಬ ಆರೋಪ ವ್ಯಕ್ತವಾಗಿತ್ತು. ಇದನ್ನು ದೂರುದಾರರು ಪ್ರಶ್ನಿಸಿದ್ದರಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. ಆಬಳಿಕದ ಬೆಳವಣಿಗೆಯಲ್ಲಿ ಪೊಲೀಸರು ದೂರುದಾರರ ಮನೆಗೆ ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳಾದ ರಾಧಾ, ದತ್ತಾತ್ರೆಯ, ಗಣೇಶ್, ಬೈರನಾಥ್, ವೈಶಾಲಿ ಮತ್ತು ಬಾಲಾಪರಾಧಿಯೊಬ್ಬನನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.