Cattle smuggling: ವೇಣೂರು; ಜಾನುವಾರು ಅಕ್ರಮ ಸಾಗಾಟ
Team Udayavani, Mar 30, 2024, 9:42 PM IST
ಬೆಳ್ತಂಗಡಿ: ಬಜಿರೆ ಗ್ರಾಮದ ಬಾಡಾರು ಶಾಂತಿರೊಟ್ಟು ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಘಟನೆ ಮಾ.30ರಂದು ನಡೆದಿದೆ.
ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ವೇಣೂರು- ನೈನಾಡು ಸಾರ್ವಜನಿಕ ರಸ್ತೆಯಲ್ಲಿ ಸಂಜೆ 5ಗಂಟೆ ಸುಮಾರಿಗೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಮಯ ನೈನಾಡು ಕಡೆಯಿಂದ ವೇಣೂರು ಕಡೆಗೆ ಗೂಡ್ಸ್ ವಾಹನ ತಡೆದಾಗ ಚಾಲಕ ವಾಹನವನ್ನು ನಿಲ್ಲಿಸದೆ ವೇಣೂರು ಕಡೆಗೆ ಚಲಾಯಿಸಿದ್ದ. ಪೊಲೀಸರು ಹಿಂಬಾಲಿಸಿ 4 ಕಿ.ಮೀ. ದೂರ ಶಾಂತಿರೊಟ್ಟು ಎಂಬಲ್ಲಿ ವಾಹನ ಅಡ್ಡಹಾಕಿದಾಗ ಚಾಲಕ ಹಾಗೂ ಇನ್ನೋರ್ವ ಓಡಿ ಹೋಗಿದ್ದಾರೆ.
ವಾಹನವನ್ನು ಪರಿಶೀಲಿಸಿದಾಗ 1 ಎತ್ತು ಹಾಗೂ 3 ಹಸು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕೆ.ಎ.21 ಬಿ.1902 ಸಂಖ್ಯೆಯ ನೋಂದಾಯಿತ ವಾಹನವನ್ನು ಸ್ವಾದೀನಪಡಿಸಲಾಗಿದೆ. ಜಾನುವಾರುಗಳ ಒಟ್ಟು ಅಂದಾಜು ಮೌಲ್ಯ 80,000 ರೂ. ಹಾಗೂ ವಾಹನದ ಅಂದಾಜು ಮೌಲ್ಯ 2,00,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಠಾಣೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.