Charmadi: ಹಲ್ಲೆ-ಆರೋಪ: ಬಸ್‌ ತಡೆದ ವಿದ್ಯಾರ್ಥಿಗಳು

Team Udayavani, Jun 19, 2023, 6:41 AM IST

Charmadi: ಹಲ್ಲೆ-ಆರೋಪ: ಬಸ್‌ ತಡೆದ ವಿದ್ಯಾರ್ಥಿಗಳು

ಬೆಳ್ತಂಗಡಿ: ಬಸ್‌ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್‌ ಒಳಗೆ ದೂಡಿ ಹಲ್ಲೆ ನಡೆಸಿದ ಎಂದು ಆರೋಪಿಸಿ ಬಸ್‌ ಅನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ಗಲಾಟೆ ನಡೆಸಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಈ ಬಗ್ಗೆ ಬಸ್ಸಿನ ನಿರ್ವಾಹಕ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಿಂದ ಮೂಡಿಗೆರೆಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್‌ಗೆ ಉಜಿರೆಯಲ್ಲಿ ವಿದ್ಯಾರ್ಥಿಗಳು ಹತ್ತುವ ವೇಳೆ ನಿರ್ವಾಹಕ ದೂಡಿ ಹಲ್ಲೆ ನಡೆಸಿರುವುದಾಗಿ ಹೇಳಿರುವ ವಿದ್ಯಾರ್ಥಿಗಳು ನಿರ್ವಾಹಕನ ಜತೆ ಗಲಾಟೆ ನಡೆಸಿದ್ದಾರೆ. ಬಳಿಕ ಈ ಬಗ್ಗೆ ಚಾರ್ಮಾಡಿಯವರಿಗೆ ಕರೆ ಮಾಡಿ ಹೇಳಿದ್ದು, ಬಸ್‌ ಚಾರ್ಮಾಡಿ ಚೆಕ್‌ಪೋಸ್ಟ್‌ಗೆ ತಲುಪುವ ಸಮಯದಲ್ಲಿ ಸ್ಥಳೀಯರು ಜಮಾಯಿಸಿ ಬಸ್‌ ಅನ್ನು ನಿಲ್ಲಿಸಿ ಗಲಾಟೆ ಆರಂಭಿಸಿದ್ದಾರೆ.

ಈ ಸಮಯ ಚೆಕ್‌ಪೋಸ್ಟ್‌ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಸಿಬಂದಿ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಆದರೆ ಬಸ್‌ನಲ್ಲಿದ್ದ ಪ್ರಯಾಣಿಕ ವಿದ್ಯಾರ್ಥಿಗಳು ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಲ್ಲದೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಯನ್ನು ಸ್ಥಳಿಯರು ಮೊಬೈಲ್‌ನಲ್ಲಿ ಚಿತ್ರಕರಿಸಿದ್ದು, ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಧರ್ಮಸ್ಥಳ ಪಿಎಸ್‌ಐ ಅನಿಲ್‌ ಕುಮಾರ್‌ ಮತ್ತು ತಂಡದವರು ಸ್ಥಳಕ್ಕೆ ಆಗಮಿಸಿ ಬಸ್‌ ಸಿಬಂದಿ, ವಿದ್ಯಾರ್ಥಿಗಳು ಹಾಗೂ ಸ್ಥಳೀಯರ ಜತೆ ಮಾತನಾಡಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಚಾರ್ಮಾಡಿಯಿಂದ ಒಂದೂವರೆ ಗಂಟೆಯಷ್ಟು ಕಾಲ ತಡವಾಗಿ ಬಸ್‌ ಮೂಡಿಗೆರೆಯತ್ತ ಪ್ರಯಾಣ ಬೆಳೆಸಿತು.

ಪ್ರಕರಣ ದಾಖಲು
ಘಟನೆಯ ಬಗ್ಗೆ ಬಸ್‌ ನಿರ್ವಾಹಕ ಶಿವಕುಮಾರ್‌ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.