Charmadi Ghat 490 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಗೆ ಸಮ್ಮತಿ

ಚಾರ್ಮಾಡಿ ಘಾಟಿ ರಸ್ತೆಗೆ ಶೀಘ್ರ ಕಾಯಕಲ್ಪ ನಿರೀಕ್ಷೆ

Team Udayavani, Oct 13, 2023, 11:27 PM IST

CharmadiCharmadi Ghat 490 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಗೆ ಸಮ್ಮತಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಗೆ ಕೊನೆಗೂ ಕಾಯಕಲ್ಪ ಸಿಗುವ ನಿರೀಕ್ಷೆಯಿದ್ದು 490 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸಮ್ಮತಿಸಿದೆ.

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಮಂಗಳೂರು-ತುಮಕೂರು ವಿಭಾಗದಲ್ಲಿ ಬರುವ ಚಾರ್ಮಾಡಿ ಘಾಟಿ ದ.ಕ. ಹಾಗೂ ಚಿಕ್ಕಮಗಳೂರು ವಿಭಾಗಕ್ಕೆ ಹೊಂದಿಕೊಂಡಂತೆ 25 ಕಿ.ಮೀ. ಹಾಗೂ ದ.ಕ. ವಿಭಾಗಕ್ಕೆ ಹೊಂದಿಕೊಂಡು 11.20 ಕಿ.ಮೀ. ರಸ್ತೆಯ ಅಭಿವೃದ್ಧಿ ಆಗಬೇಕಿದೆ. ಇದಕ್ಕಾಗಿ ಚಾರ್ಮಾಡಿ ಹಳ್ಳದಿಂದ ಘಾಟಿಯ 11ನೇ ತಿರುವಿನ ತನಕದ 11.2 ಕಿ.ಮೀ. ವ್ಯಾಪ್ತಿಯ ರಸ್ತೆಗೆ ಡಿಪಿಆರ್‌ (Detail Project Report) ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

2019ರ ಮಹಾಪ್ರವಾಹದ ವೇಳೆಯಲ್ಲಿ ಜರ್ಜರಿತವಾಗಿದ್ದ ಘಾಟಿಯಲ್ಲಿ ಹಲವು ತಿಂಗಳ ಕಾಲ ವಾಹನ ಸಂಚಾರಕ್ಕೆ ನಿರ್ಬಂಧ ಇತ್ತು. ಬಳಿಕ ಅನೇಕ ಹಂತದಲ್ಲಿ ಅಭಿವೃದ್ಧಿ ಕಾರ್ಯ ನಡೆಸಿದರೂ ಘನವಾಹನ ಸಂಚಾರಕ್ಕೆ ಈಗಲೂ ಯೋಗ್ಯವಾಗಿಲ್ಲ. 4 ಕಡೆಗಳಲ್ಲಿ ಏಕಮುಖವಾಗಿ ವಾಹನಗಳು ಸಂಚರಿಸುತ್ತಿವೆ. ಘಾಟಿಯ 11 ಕಡಿದಾದ ತಿರುವುಗಳಲ್ಲಿ ವಿಸ್ತರಣೆ ಅವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ದ.ಕ. ಹಾಗೂ ಚಿಕ್ಕಮಗಳೂರು ವಿಭಾಗದ ಸಂಸದರ ಮೇಲೆ ಜನಸಾಮಾನ್ಯರ ಒತ್ತಡವೂ ನಿರಂತರವಾಗಿತ್ತು.

3ನೇ ಹಂತದ ಕಾಮಗಾರಿ: ಈಗಾಗಲೇ ಪ್ರಾಥಮಿಕ ಹಂತದ ಸಮೀಕ್ಷೆ ನಡೆದಿದ್ದು ರಸ್ತೆಯು 10 ಮೀ. ವಿಸ್ತರಣೆ ಹೊಂದಿ ದ್ವಿಪಥವಾಗಲಿದೆ. ಪ್ರಥಮ ಹಂತದಲ್ಲಿ ಬಿ.ಸಿ.ರೋಡ್‌-ಪುಂಜಾಲಕಟ್ಟೆ ವರೆಗೆ ಪೂರ್ಣಗೊಂಡಿದೆ. ಎರಡನೇ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ 33 ಕಿ.ಮೀ. ವ್ಯಾಪ್ತಿ 720 ಕೋ.ರೂ. ವೆಚ್ಚದಲ್ಲಿ ದ್ವಿಪಥ ಕಾಮಗಾರಿ ಪ್ರಗತಿಯಲ್ಲಿದೆ. ಮೂರನೇ ಹಂತವಾಗಿ ಚಾರ್ಮಾಡಿ ಘಾಟಿ ಅಭಿವೃದ್ಧಿಗೆ ವಾರ್ಷಿಕ ಯೋಜನೆಯಡಿ ಅನುಮೋದನೆ ದೊರೆತಿದೆ. ಈ ಮೂಲಕ ಮಂಗಳೂರಿನಿಂದ ಚಾರ್ಮಾಡಿ ಘಾಟಿ ವರೆಗೆ ಸುಮಾರು 90 ಕಿ.ಮೀ. ರಸ್ತೆ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದುವ ನಿರೀಕ್ಷೆಯಿದೆ.

ಪ್ರಮುಖ ಪ್ರಯೋಜನಗಳು
-ಸಮಯ, ಇಂಧನ ಉಳಿತಾಯ
– ಶಿರಾಡಿಗೆ ಘಾಟಿಗೆ ಪರ್ಯಾಯ ರಸ್ತೆ
– ಚಿಕ್ಕಮಗಳೂರು ಮಂದಿಗೆ ವೈದ್ಯಕೀಯ ಸೇವೆ ಸುಲಭ
– ವಾಣಿಜ್ಯೋದ್ಯಮ, ವ್ಯಾಪಾರ, ವಹಿವಾಟು, ಸರಕು ಸಾಗಣೆ ಸುಲಲಿತ

ಪ್ರಸ್ತುತ ದೇಶದ 21 ರಾ.ಹೆ. ಅಭಿವೃದ್ಧಿ ಯೋಜನೆಗಳಲ್ಲಿ 588 ಕಿ.ಮೀ. ರಸ್ತೆ 7,745 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಇದರಲ್ಲಿ ಚಾರ್ಮಾಡಿ ಘಾಟಿಯೂ ಸೇರಿದೆ. ಈ ಬಗ್ಗೆ ಅ. 25ರೊಳಗೆ ಡಿಪಿಆರ್‌ ಪೂರ್ಣಗೊಳಿಸಿ ವರದಿ ಸಲ್ಲಿಸಲು ರಾಷ್ಟ್ರೀಯ ಹೆದ್ದಾರಿ ವಲಯಗಳಿಗೆ ಸೂಚಿಸಲಾಗಿದೆ.
– ಮೌಲಿಕ್‌ ಎ., ಕಾರ್ಯನಿರ್ವಾಹಕ ಎಂಜಿನಿಯರ್‌, ಯೋಜನಾ ವಿಭಾಗ,
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.