Heavy rain: ಚೆಲ್ಯಡ್ಕ ಸೇತುವೆ ಮುಳುಗಡೆ, ವಾಹನ ಸಂಚಾರ ಸ್ಥಗಿತ
Team Udayavani, Jul 6, 2023, 9:56 AM IST
ಬೆಟ್ಟಂಪಾಡಿ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರ ಗುರುವಾರ ಮುಂಜಾನೆ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.
ಪ್ರಥಮ ಬಾರಿಗೆ ಮುಳುಗಡೆ
ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ. ಲೋಕೋಪಯೋಗಿ ಇಲಾಖೆಯ ಮೂಲಕ ಸರ್ವಋತು ಸೇತುವೆ ನಿರ್ಮಾಣ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದರೂ, ಮನವಿ ಸಲ್ಲಿಸಿದರೂ ಜನಪ್ರತಿನಿಧಿಗಳು ಅಧಿಕಾರಿಗಳಲ್ಲಿ ಇಚ್ಛಾ ಶಕ್ತಿಯ ಕೊರತೆ ಎದ್ದು ಕಾಣುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.