ಬಾಲವನ ಮಕ್ಕಳ ಬೇಸಗೆ ಶಿಬಿರ ಸಮಾಪನ


Team Udayavani, Jun 1, 2018, 4:30 PM IST

1june-8.jpg

ಪರ್ಲಡ್ಕ : ಬೌದ್ಧಿಕ ಮತ್ತು ಭೌತಿಕ ಬೆಳವಣಿಗೆಯಾಗುವ ಬೇಸಗೆ ಶಿಬಿರಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಬೇಕು ಎಂದು ರಂಗ ಕಲಾವಿದ ಹಾಗೂ ಪತ್ರಕರ್ತ ಸಂಶುದ್ದೀನ್‌ ಸಂಪ್ಯ ಹೇಳಿದರು. ಪರ್ಲಡ್ಕ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ಮೇ 22ರಿಂದ 5ರಿಂದ 16 ವರ್ಷದೊಳಗಿನ ಮಕ್ಕಳಿಗೆ ಆಯೋಜಿಸಲಾದ ಉಚಿತ ಬೇಸಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶಿಬಿರದಲ್ಲಿ ಎಷ್ಟು ಮಕ್ಕಳಿದ್ದಾರೆ ಎಂಬ ಸಂಖ್ಯೆ ಮುಖ್ಯವಲ್ಲ. ಎಷ್ಟು ಮಕ್ಕಳು ಶಿಬಿರದಲ್ಲಿ ಅರಿವು ಪಡೆದುಕೊಂಡಿದ್ದಾರೆ ಎಂಬುದು ಮುಖ್ಯವಾಗುತ್ತದೆ. ಹಿಂದೆ ಸೀಮಿತ ಶಿಬಿರಗಳಿದ್ದವು. ಆದರೆ ಇಂದು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಹಲವಾರು ಶಿಬಿರಗಳು ನಡೆಯುತ್ತಿವೆ. ಇದರಿಂದ ಮಕ್ಕಳಿಗೆ ಸಾಕಷ್ಟು ಅವಕಾಶಗಳಿವೆ. ಇದನ್ನು ಬಳಸಿಕೊಳ್ಳುವ ವಿವೇಚನೆ ಮುಖ್ಯವಾಗಿ ಮಕ್ಕಳ ಪೋಷಕರಲ್ಲಿ ಇರಬೇಕು ಎಂದರು.

ಮಕ್ಕಳಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭೆ, ಕೌಶಲ್ಯಗಳಿರುತ್ತವೆ. ಆದರೆ ಅವುಗಳನ್ನು ಅನಾವರಣಗೊಳಿಸಲು ಕ್ಲಪ್ತ ಸಮಯಕ್ಕೆ ವೇದಿಕೆಗಳು ಸಿಗುತ್ತಿಲ್ಲ. ಇವುಗಳನ್ನು ಅನಾವರಣಗೊಳಿಸಲು ಇಂತಹ ಶಿಬಿರಗಳು ಪೂರಕವಾಗಿವೆ. ಪಠ್ಯೇತರ ಚಟುವಟಿಕೆಗಳಲ್ಲೂ ಬೆರೆಯಲು ಮಕ್ಕಳನ್ನು ಹೆತ್ತವರು ಪ್ರೋತ್ಸಾಹಿಸಬೇಕು. ಆಗ ಮಕ್ಕಳಲ್ಲಿ ವಿಶೇಷವಾದ ಬದಲಾವಣೆ ಕಾಣಲು ಸಾಧ್ಯವಿದೆ ಎಂದು ಸಂಶುದ್ದೀನ್‌ ಅಭಿಪ್ರಾಯಪಟ್ಟರು.

ಡಾ| ಕಾರಂತರಿಗೆ ಗೌರವ
ಮುಖ್ಯ ಅತಿಥಿ ಪತ್ರಕರ್ತ ಮೌನೇಶ್‌ ವಿಶ್ವಕರ್ಮ ಮಾತನಾಡಿ, ಬಾಲವನದಲ್ಲಿ ಶಿಬಿರ ನಡೆಸುವುದು ಎಂದರೆ ಡಾ| ಶಿವರಾಮ ಕಾರಂತರಿಗೆ ನಾವು ಕೊಡುವ ಅಪೂರ್ವ ಗೌರವ. ಇಲ್ಲಿ ಯಾವ ಕಾರ್ಯಕ್ರಮಗಳಿದ್ದರೂ, ಹಿಂದೆ ಮುಂದೆ ನೋಡದೆ ಬರುತ್ತೇವೆ. ಈ ಪರಿಸರವೇ ಮಕ್ಕಳನ್ನು ಕ್ರೀಯಾಶೀಲರನ್ನಾಗಿ ಮಾಡುವ ಒಂದು ವಿಶಿಷ್ಟ ಕಲಾತಾಣ. ಈ ಶಿಬಿರ ಮಕ್ಕಳಲ್ಲಿ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಪುತ್ತೂರು ಅಸಹಾಯಕರ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ನಯನಾ ರೈ, ಯೋಗ ತರಬೇತುದಾರ ಸುಬ್ರಹ್ಮಣ್ಯಂ ಭಟ್‌, ಸಂಪನ್ಮೂಲ ವ್ಯಕ್ತಿಗಳಾದ ಪದ್ಮನಾಭ, ರೋಹಿಣಿ ರಾಘವ ಆಚಾರ್ಯ ಶಿಬಿರದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಶಿಶು ಅಭಿವೃದ್ಧಿ ಅಧಿಕಾರಿ ಶಾಂತಿ ಟಿ. ಹೆಗ್ಡೆ ಸ್ವಾಗತಿಸಿದರು. ಮೇಲ್ವಿಚಾರಕಿ ಆರತಿ ವಂದಿಸಿದರು. ಮೇಲ್ವಿಚಾರಕಿ ಜಲಜಾಕ್ಷಿ ನಿರೂಪಿಸಿದರು. ಮಕ್ಕಳು ತಯಾರಿಸಿದ ಕುಶಲತೆಯನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ಪುಣ್ಯ ಮಣ್ಣು 
ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ| ಶಿವರಾಮ ಕಾರಂತ ಬಾಲವನ ಸಮಿತಿಯ ಸದಸ್ಯೆ ಗೌರಿ ಬನ್ನೂರು, ಡಾ| ಶಿವರಾಮ ಕಾರಂತರ ಈ ಪುಣ್ಯ ಮಣ್ಣಿನಲ್ಲಿ ಮಕ್ಕಳು ಕಲಾವಿದರಾಗಿ ರೂಪುಗೊಳ್ಳುವುದು ಉತ್ತಮ ಬೆಳವಣಿಗೆ. ಈ ಕಾರಣದಿಂದ ಇಂತಹ ಶಿಬಿರಗಳು ಸಾರ್ಥಕತೆ ಪಡೆಯುತ್ತವೆ. ಇಲ್ಲಿ ಕಲಿತ ಕಲೆಯನ್ನು ನೀವು ಅರಳಿಸುವ ಪ್ರಯತ್ನ ಮಾಡಿದರೆ ಮುಂದೆ ನೀವು ಕೂಡಾ ಸಂಪನ್ಮೂಲ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದು ಮಕ್ಕಳಿಗೆ ತಿಳಿಸಿದರು.

ಟಾಪ್ ನ್ಯೂಸ್

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.