ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ, ದೂರು
Team Udayavani, May 16, 2023, 6:35 AM IST
ಬೆಳ್ತಂಗಡಿ: ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡವು ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ನಡೆದಿದ್ದು ಹಲ್ಲೆಗೊಳಗಾದ ವ್ಯಕ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೆರಾಡಿ ಪಾಡಿ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ (42) ಹಲ್ಲೆಗೊಳಗಾದವರು.
ವಿಜಯೋತ್ಸವ ಮೆರವಣಿಗೆಯ ವೇಳೆ ದಯಾನಂದ ಪೂಜಾರಿ ಅವ ರನ್ನು ಬಲವಂತವಾಗಿ ವಿಜಯೋತ್ಸವ ದಲ್ಲಿ ಪಾಲ್ಗೊಳ್ಳುವಂತೆ ಎಳೆದೊಯ್ದು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಆಸ್ಪತ್ರೆಯ ಎದುರು ಜಮಾಯಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ದಯಾನಂದ ಪೂಜಾರಿ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಘಟನೆಯ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.