ಮಸೀದಿ-ಮದ್ರಸ ವಕ್‌ ಅಧೀನಕ್ಕೆ ಸೇರಿಸಿ: ಜಮೀರ್‌ ಅಹ್ಮದ್‌ 

Team Udayavani, Oct 4, 2018, 12:18 PM IST

4-october-8.gif

ಸುಳ್ಯ : ಮಸೀದಿ-ಮದ್ರ‌ಸಗಳನ್ನು ವಕ್ಫ್ ಬೋರ್ಡ್‌ ಅಧೀನದಲ್ಲಿ ನೋಂದಾಯಿಸಿಕೊಂಡಲ್ಲಿ ಸರಕಾರದಿಂದ ಅನುದಾನ ಒದಗಿಸಲು ಸಾಧ್ಯವಿದೆ ಎಂದು ಅಲ್ಪಸಂಖ್ಯಾಕರ ಕಲ್ಯಾಣ, ವಕ್ಫ್ ಮತ್ತು ಹಜ್‌ ಖಾತೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.

ಜಟ್ಟಿಪಳ್ಳ ಅನ್ಸಾರಿಯಾ ಯತೀಂಖಾನದಲ್ಲಿ ಬುಧವಾರ ನಡೆದ ತಾಲೂಕು ಮಸೀದಿ-ಮದ್ರಸ ಪದಾಧಿಕಾರಿಗಳ ಮತ್ತು ಇಮಾಮರುಗಳ ವಕ್ಫ್ ಸಂಸ್ಥೆಗಳ ಮುತವಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಮಸೀದಿ, ಮದ್ರಸಗಳಿಗೆ ಗರಿಷ್ಠ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅದಕ್ಕೆ ಪೂರಕವಾಗಿ ಮಸೀದಿ, ಮದ್ರಸ ನೋಂದಾಯಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಕಣಚೂರು ಮೋನು, ಎಸ್‌. ಸಂಶುದ್ದಿನ್‌, ಟಿ.ಎಂ. ಶಹೀದ್‌, ಕೆ.ಎಂ. ಮುಸ್ತಾಫ‌, ಇಕ್ಬಾಲ್‌ ಎಲಿಮಲೆ, ಅನ್ಸಾರಿಯ ಅಧ್ಯಕ್ಷ ಅಬ್ದುಲ್‌ ಮಜೀದ್‌, ಆರ್‌.ಕೆ. ಮಹಮ್ಮದ್‌, ರಫೀಕ್‌ ಪಡು, ಸಿದ್ದಿಕ್‌ ಕೊಕ್ಕೊ, ಶರೀಫ್‌ ಕಂಠಿ, ಉಮ್ಮರ್‌ ಮುಸ್ಲಿಯಾರ್‌ ಮರ್ದಾಳ, ಆದಂ ಕಮ್ಮಡಿ, ಅಬ್ಟಾಸ್‌ ಕಟ್ಟೆಕ್ಕಾರ್‌ ಉಪಸ್ಥಿತರಿದ್ದರು. ಅನ್ಸಾರಿಯಾ ವತಿಯಿಂದ ಸಚಿವರನ್ನು ಸಮ್ಮಾನಿಸಲಾಯಿತು. ಸಭೆಯ ಬಳಿಕ ಅನ್ಸಾರಿಯಾ ಕೇಂದ್ರದ ಮಕ್ಕಳೊಂದಿಗೆ ಬೆರೆತು, ಅವರ ಯೋಗಕ್ಷೇಮ ವಿಚಾರಿಸಿದರು.

ಕಾಮಗಾರಿಗೆ ಶಂಕುಸ್ಥಾಪನೆ
ಸುಳ್ಯ ನಗರದ ಗಾಂಧಿನಗರ ಮಸೀದಿಗೆ ಭೇಟಿ ನೀಡಿ ಅಲ್ಲಿನ ನವೀಕೃತ ಮಸೀದಿ ಕಾಮಗಾರಿ ವೀಕ್ಷಿಸಿದರು. ಬಳಿಕ ಮೊಗರ್ಪಣೆ ದರ್ಗಾ ಶರೀಫ್ ಮುಂಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶಾದಿ ಮಹಲ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ಪೈಚಾರಿನಲ್ಲಿ ನೂತನ ಮದರಸ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಅನ್ಸಾರಿಯಾದಲ್ಲಿ ನಡೆದ ವಕ್ಫ್ ಸಂಸ್ಥೆಗಳ ಮುತವಲ್ಲಿ ಸಮಾವೇಶದಲ್ಲಿ ಪಾಲ್ಗೊಂಡರು. ಸಂಜೆ ವೇಳೆ ನಗರದಲ್ಲಿ ಉತ್ತಮ ಮಳೆಯಾದ ಕಾರಣ ಮೊಗರ್ಪಣೆ ಸಹಿತ ಕೆಲವೆಡೆ ನಿಗದಿಯಾಗಿದ್ದ ಸಭಾ ಕಾರ್ಯಕ್ರಮ ಮೊಟಕುಗೊಂಡಿತ್ತು.

ಭರಪೂರ ಅನುದಾನ ಘೋಷಣೆ
ಮೊಗರ್ಪಣೆ ಮಸೀದಿ ಮುಂಭಾಗದಲ್ಲಿ ನಿರ್ಮಾಣಗೊಳ್ಳುವ ಶಾದಿ ಮಹಲ್‌ಗೆ 1 ಕೋಟಿ ರೂ., ಮೊಗರ್ಪಣೆ ಮದರಸಕ್ಕೆ 10 ಲಕ್ಷ ರೂ., ಅಂಬೆಟಡ್ಕ ಅನಘಿ  ಜುಮಾ ಮಸೀದಿಗೆ 5 ಲಕ್ಷ ರೂ., ಮಸೀದಿ ಆಧುನೀಕರಣಕ್ಕೆ 10 ಲಕ್ಷ ರೂ., ಅನ್ಸಾರಿಯ ಯತಿಂಖಾನ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 40 ಲಕ್ಷ ರೂ., ಗಾಂಧಿನಗರ ನವೀಕೃತ ಮಸೀದಿಗೆ 20 ಲಕ್ಷ ರೂ., ಪೈಚಾರು ಮದರಸ ಕಟ್ಟಡಕ್ಕೆ 20 ಲಕ್ಷ ರೂ. ಅನುದಾನ ನೀಡುವುದಾಗಿ ಸಚಿವರು ಘೋಷಿಸಿದರು.

ಕ್ರೀಡಾಪಟುವಿಗೆ ಆರ್ಥಿಕ ನೆರವು
ಅಂಗವಿಕಲರ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಿದ ಸುಹೈಲ್‌ ಅವರಿಗೆ ಸಚಿವ ಜಮೀರ್‌ ಅಹಮ್ಮದ್‌ ಅವರು 25 ಸಾವಿರ ರೂ. ಆರ್ಥಿಕ ನೆರವು ನೀಡಿದರು.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.