ಕಾವಳಮೂಡೂರು: ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಹೊಯ್ ಕೈ
Team Udayavani, Jul 14, 2021, 1:36 PM IST
ಪುಂಜಾಲಕಟ್ಟೆ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯ್ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದಿದೆ.
ಘಟನೆಯ ವಿವರ: ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಂಘದ ಆವರಣದಲ್ಲಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು.
ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಕ್ಕದಲ್ಲಿರುವ ಕಾವಳಮೂಡೂರು ಗ್ರಾ.ಪಂ. ಮುಂಭಾಗದಲ್ಲಿ ಗ್ರಾ.ಪಂ.ನಿಂದ ನೀರು ಹಾಗೂ ಮನೆ ತೆರಿಗೆ ಯನ್ನು ಏಕಾಏಕಿ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ಗೆ ಮುಂದಾಗಿದ್ದರು.
ಈ ಹಂತದಲಲ್ಲಿ ಅರ್.ಟಿ.ಐ .ಕಾರ್ಯಕರ್ತ ಪದ್ಮನಾಭ ಮಯ್ಯ ಪ್ರತಿಭಟನೆ ಯಲ್ಲಿ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ನೂಕಾಟ, ಪರಸ್ಪರ ತಳ್ಳಾಟ ನಡೆಯಿತು.
ಇದನ್ನೂ ಓದಿ: ಕೊಟ್ಟ ಹಣ, ಬಂಗಾರ ಕೇಳಿದಕ್ಕೆ ಸ್ನೇಹಿತನ ಅಪಹರಣ, ಕೊಲೆ
ಇದೇ ವೇಳೆ ಆರ್.ಟಿ.ಐ.ಕಾರ್ಯಕರ್ತ ಪದ್ಮನಾಭ ಮಯ್ಯ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ರೂಪ ಬದಲಾಯಿತು. ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿದರು.
ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಎಸ್.ಐ.ಸೌಮ್ಯಾ ಅವರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಉಭಯ ಪಕ್ಷದ ನಾಯಕ ರ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯಿತು.
ಈ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯಕರ್ತರ ನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದರು.
ಆರ್.ಟಿ.ಐ ಕಾರ್ಯಕರ್ತ ಪದ್ಮನಾಭ ಮಯ್ಯ ಅವರು ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದರೆ, ಕಾಂಗ್ರೆಸ್ ಕಾರ್ಯ ಕರ್ತರಾದ ಸದಾನಂದ ಶೆಟ್ಟಿ, ಬಿ.ಆರ್.ಅಂಚನ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.
ಪುಂಜಾಲಕಟ್ಟೆ ಪೋಲೀಸರು ಆಸ್ಪತ್ರೆಯಲ್ಲಿ ದಾಖಲಾದವರ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.ಸುದ್ದಿ ತಿಳಿದು ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕಾಗಮಿಸಿ ಕಾವಳಮೂಡೂರು ಸೊಸೈಟಿ ಆಧ್ಯಕ್ಷ ಪದ್ಮಶೇಖರ್ ಜೈನ್ , ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ ಬಜ ಅವರಿಂದ ಮಾಹಿತಿ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.