Jal Jeevan ಮಿಷನ್‌ ಯೋಜನೆಯಲ್ಲಿ ಭ್ರಷ್ಟಾಚಾರ: ಆರೋಪ

ನಿಡ್ಪಳ್ಳಿ ಗ್ರಾಮ ಪಂಚಾಯತ್‌ ಗ್ರಾಮ ಸಭೆ: ನಳ್ಳಿ ಅಳವಡಿಸಿದರೂ ಇನ್ನೂ ಬಾರದ ನೀರು

Team Udayavani, Aug 27, 2024, 3:00 PM IST

Nidpalli ಗ್ರಾಮ ಪಂಚಾಯತ್‌ ಗ್ರಾಮ ಸಭೆ: ನಳ್ಳಿ ಅಳವಡಿಸಿದರೂ ಇನ್ನೂ ಬಾರದ ನೀರು

ಬೆಟ್ಟಂಪಾಡಿ: ಜಲಜೀವನ್‌ ಮಿಷನ್‌ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ.ಅಸಮರ್ಪಕ ಕಾಮಗಾರಿ ನಡೆಸಿ ಅರ್ಧದಲ್ಲಿ ಬಿಟ್ಟು ಹೋದ ಎಂಜಿನಿಯರ್‌ವಿರುದ್ಧ ಕಠಿನಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ ಘಟನೆ ನಿಡ್ಪಳ್ಳಿ ಗ್ರಾಮ ಪಂಚಾಯತ್‌ ಗ್ರಾಮಸಭೆಯಲ್ಲಿ ನಡೆಯಿತು.

ಗ್ರಾಮ ಸಭೆ ಪಂಚಾಯತ್‌ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್‌ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ಪ್ರಕಾಶ್‌ ಬೋರ್ಕರ್‌ ಮಾತನಾಡಿ, ಸಭೆಗೆ ಜಿಲ್ಲಾ ಪಂಚಾಯತ್‌ ಎಂಜಿನಿಯರ್‌ ಬರಬೇಕಿತ್ತು. ಅವರು ಬರದೆ ಸಭೆ ಮುಗಿಸಲು ಬಿಡುವುದಿಲ್ಲ ಎಂದಾಗ ಸತ್ಯನಾರಾಯಣ ರೈ , ಹರೀಶ್‌ ಕುಮಾರ್‌, ನಾರಾಯಣ ನಾಯ್ಕ ಅವರು ಮಾತನಾಡಿ, ಕೇವಲ ನಳ್ಳಿ ಹಾಕಿ ಹೋಗಿದ್ದಾರೆ. ನೀರು ಬರುತ್ತಿಲ್ಲ. ಅದೂ ಎಲ್ಲೆಲ್ಲೊ ಹಾಕಿದ್ದಾರೆ ಎಂದರು. ಎಂಜಿನಿಯರ್‌ ಅವರನ್ನು ಅಮಾನತು ಮಾಡಬೇಕು ಎಂದು ಪ್ರಕಾಶ್‌ ಬೋರ್ಕರ್‌ ಮತ್ತಿತರರು ಆಗ್ರಹಿಸಿದರು.ಅಧ್ಯಕ್ಷರು ಮಾತನಾಡಿ ಸಮರ್ಪಕವಾಗಿ ಕಾಮಗಾರಿ ಮಾಡದೆ ಬಿಲ್ಲು ಮಂಜೂರು ಮಾಡದಂತೆ ಇಲಾಖೆಗೆ ಪತ್ರ ಬರೆಯುವ ಎಂದರು. ಜತೆಗೆ ಎಂಜಿನಿಯರ್‌ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಪತ್ರ ಬರೆಯುವ ಬಗ್ಗೆ ನಿರ್ಣಯಿಸಲಾಯಿತು. ಎಂಜಿನಿಯರ್‌ ಅವರನ್ನು ದೂರವಾಣಿ ಮೂಲಕ ಸತ್ಯನಾರಾಯಣ ರೈ ವಿಚಾರಿಸಿದ ಘಟನೆಯೂ ನಡೆಯಿತು.

ಆರೋಗ್ಯ ಕಾರ್ಯಕರ್ತೆ ಎ.ವಿ.ಕುಸುಮಾವತಿ, ಉಪವಲಯ ಅರಣ್ಯಾಧಿಕಾರಿ ಮದನ್‌.ಬಿ.ಕೆ, ಹಿರಿಯ ಪಶು ವೈದ್ಯ ಪರೀಕ್ಷಕ ವೀರಪ್ಪ, ಗ್ರಾಮಾಂತರ ಪೊಲೀಸ್‌ ಠಾಣಾ ಎ.ಎಸ್‌ಐ ಮಹಮ್ಮದಾಲಿ, ಮೆಸ್ಕಾಂ ಕಿರಿಯ ಎಂಜಿನಿಯರ್‌ ಪುತ್ತು ಜೆ., ಕ್ಲಸ್ಟರ್‌ ಸಮೂಹ ಸಂಪನ್ಮೂಲ ವ್ಯಕ್ತಿ ಪರಮೇಶ್ವರಿ, ಗ್ರಾಮ ಆಡಳಿತ ಅಧಿಕಾರಿ ಸುನೀತಾ ಕುಮಾರಿ ಕೆ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಲಯ ಮೇಲ್ವಿಚಾರಕಿ ಎಸ್‌. ಸುಜಾತ, ಸಮಾಜ ಕಲ್ಯಾಣ ಇಲಾಖೆಯ ಲಕ್ಷ್ಮೀದೇವಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪವಿತ್ರ ನಂದ್ರಾಳ, ಎಫ್‌ ಎಲ್‌ಸಿ ಗೀತಾ ವಿಜಯನ್‌ ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಮಾರ್ಗದರ್ಶಿ ಅಧಿಕಾರಿಯಾಗಿದ್ದರು. ಅರಣ್ಯ ಇಲಾಖೆಯ ಸಿಬಂದಿ ಪ್ರಜ್ಞಾ.ಬಿ., ಸುರೇಶ್‌ ಬಾಬು, ಬ್ಯಾಂಕ್‌ ಆಫ್‌ ಬರೋಡಾ ಬೆಟ್ಟಂಪಾಡಿ ಶಾಖೆಯ ಮ್ಯಾನೇಜರ್‌ಅನೂಪ್‌ ಎಸ್‌.ನಾಯ್ಕ, ಪೊಲೀಸ್‌ ಸಿಬಂದಿ ಮಾರುತಿ ಕೆ., ಪಂಚಾಯತ್‌ ಉಪಾಧ್ಯಕ್ಷೆ ಸೀತಾ, ಸದಸ್ಯರಾದ ಬಾಲಚಂದ್ರ ನಾಯ್ಕ, ಸತೀಶ್‌ ಶೆಟ್ಟಿ, ನಂದಿನಿ ರೈ, ಗ್ರೆಟಾ ಡಿ’ಸೋಜಾ, ಗೀತಾ ಡಿ., ತುಳಸಿ, ಸಿಎಚ್‌ಒ ಲಕ್ಷ್ಮೀ ಮತ್ತಿತರರಿದ್ದರು. ಪಿಡಿಒ ಸಂಧ್ಯಾಲಕ್ಷ್ಮೀ ಸ್ವಾಗತಿಸಿ ವಂದಿಸಿದರು. ಸಿಬಂದಿ ರೇವತಿ, ಸಂಶೀನಾ ವರದಿ ವಾಚಿಸಿದರು. ವಿನೀತ್‌ ಕುಮಾರ್‌ ವಾರ್ಡ್‌ ಸಭೆಯಲ್ಲಿ ಬಂದ ಬೇಡಿಕೆಯ ಪಟ್ಟಿ ವಾಚಿಸಿದರು.

ರಸ್ತೆ ಅಭಿವೃದ್ಧಿ ಅನುದಾನ ಏನಾಯಿತು ?
ಚೂರಿಪದವು ಶಾಲಾ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಶಾಸಕರ ಅನುದಾನ 10 ಲಕ್ಷ ರೂ. ಮತ್ತು ಸಮಾಜ ಕಲ್ಯಾಣ ಇಲಾಖೆಯ ಅನುದಾನ 10 ಲಕ್ಷ ರೂ. ಹೀಗೆ ಒಟ್ಟು 20 ಲಕ್ಷ ರೂ. ನಲ್ಲಿ ಕಾಂಕ್ರೀಟ್‌ ಮಾಡಲು ಅನುದಾನ ಬಿಡುಗಡೆ ಆಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಅಲ್ಲಿ ಕೇವಲ 10 ಲಕ್ಷ ರೂ. ನ ಶಾಸಕರ ಅನುದಾನದಲ್ಲಿ ಕಾಂಕ್ರೀಟ್‌ ಆಗಿದೆ ಎಂದು ಅಲ್ಲಿ ಫಲಕ ಹಾಕಿರುತ್ತದೆ. ಹಾಗಿದ್ದರೆ ಸಮಾಜ ಕಲ್ಯಾಣ ಇಲಾಖೆಯ ಅನುದಾನ ಏನಾಯಿತು ಎಂದು ಕೆ.ಎನ್‌.ಪಾಟಾಳಿ ಪ್ರಶ್ನಿಸಿದರು.ಅವರಿಗೆ ಸರಿಯಾದ ಉತ್ತರ ಸಿಗಲಿಲ್ಲ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.