ಜಮೀನನ್ನು ಲೀಸಿಗೆ ಕೊಡುವಂತೆ ಕೊಲೆ ಬೆದರಿಕೆ; ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
Team Udayavani, Aug 6, 2023, 10:41 PM IST
ಸವಣೂರು: ಎರಡು ತಿಂಗಳ ಹಿಂದೆ ಕಡಬ ತಾಲೂಕಿನ ಸವಣೂರು ಗ್ರಾಮದ ಸೋಂಪಾಡಿ ನಿವಾಸಿ ನಾಗರತ್ನಮ್ಮ (81) ಅವರ ಪುಣ್ಯಪ್ಪಾಡಿಯಲ್ಲಿರುವ ಜಮೀನನ್ನು ಲೀಸಿಗೆ ಕೊಡುವಂತೆ ಕೊಲೆ ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ನೀಡಿದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ಪ್ರಕರಣ ದಾಖಲಿಸುವಂತೆ ಬೆಳ್ಳಾರೆ ಪೊಲೀಸ್ ಠಾಣೆಗೆ ಆದೇಶ ನೀಡಿದೆ.
ಪುಣcಪ್ಪಾಡಿಯಲ್ಲಿರುವ ತನ್ನ ಕೃಷಿ ಜಮೀನಿಗೆ ಮೇ 30ರಂದು ಕುರಿಯ ಗ್ರಾಮದ ದೇರ್ಕಜೆ ವೆಂಕಟ್ರಮಣ ಭಟ…, ಸವಣೂರು ಗ್ರಾಮದ ಪಣೆಮಜಲು ನಿವಾಸಿ ಜಾಫರ್, ಬಪ್ಪಳಿಗೆ ನಿವಾಸಿ ಸುಭಾಷ್ ರೈ ಅವರು ಅಕ್ರಮವಾಗಿ ಪ್ರವೇಶಿಸಿ ಈ ಜಮೀನನ್ನು ನಮಗೆ ಲೀಸಿಗೆ ಕೊಡಬೇಕೆಂದು ಬೆದರಿಕೆಯೊಡ್ಡಿದ್ದು, ಜಮೀನು ಕೊಡದಿದ್ದರೆ ನಿನ್ನ ಮಗಳನ್ನು ಕೊಲ್ಲುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದರು. ಆಗ ಹಿರಿಯ ನಾಗರಿಕೆಯ ಅಳಿಯ ಆಕ್ಷೇಪಿಸಿದಾಗ ಅವರಿಗೆ ಹಲ್ಲೆ ನಡೆಸಿ ಗೋಣಿಯಲ್ಲಿ ಕಟ್ಟಿಟ್ಟ ಸುಮಾರು 2 ಕ್ವಿಂಟಾಲ್ ಅಡಿಕೆಯನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಿರಿಯ ನಾಗರಿಕೆ ನಾಗರತ್ನಮ್ಮ ಪೊಲೀಸ್ ದೂರು ನೀಡಿದ್ದರು.
ಆದರೆ ಬೆಳ್ಳಾರೆ ಠಾಣೆ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಘಟನೆ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬೆಳ್ಳಾರೆ ಪೊಲೀಸ್ ಠಾಣೆಗೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.