ವಿಟ್ಲ: ಪೇಟೆಗೆ ಬರುವವರಿಗೆ ಕೋವಿಡ್ ಪರೀಕ್ಷೆ
Team Udayavani, Jun 17, 2021, 10:40 AM IST
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ನಾಗರಿಕರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಗುರುವಾರ ಬೆಳಗ್ಗೆ 10 ಗಂಟೆಯವರೆಗೆ ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ವಿಟ್ಲ ಪಟ್ಟಣ ಪಂಚಾಯತ್ ಕೋವಿಡ್ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೋವಿಡ್ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿದಿನ ಪೇಟೆಗೆ ಬರುವವರನ್ನು ವಿಟ್ಲ ಪೇಟೆಯ ಪ್ರವೇಶ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು, ಪಟ್ಟಣ ಪಂಚಾಯತ್ ಸಿಬಂದಿ, ವಿಟ್ಲ ಪೊಲೀಸರು ಜಂಟಿಯಾಗಿ ನಾಕಾಬಂದಿ ಅಳವಡಿಸಿದ್ದರು.
ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ 80 ಮಂದಿಯ ಸ್ವಾಬ್ ಪರೀಕ್ಷೆ ನಡೆಸಲಾಗಿದೆ. ವರದಿ ಬರಬೇಕಾಗಿದೆ. ಆದರೆ ಉಳಿದ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿಗಳಲ್ಲಿ ದೇಹದ ಟೆಂಪರೇಚರ್ ಪರೀಕ್ಷಿಸಲಾಗಿದೆ. ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಲಾಯಿತು. ಪೇಟೆಯ ನಾಲ್ಕು ಕಡೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಪಂಚಾಯತ್ ತಿಳಿಸಿದ್ದು, ಆದರೆ ಒಂದು ಕಡೆ ಮಾತ್ರ ತಪಾಸಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.