ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಾದ್ಯಂತ ಲಸಿಕಾ ಕೇಂದ್ರ ತೆರೆಯಲು ಸಹಕಾರ


Team Udayavani, May 3, 2021, 6:44 AM IST

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಾದ್ಯಂತ ಲಸಿಕಾ ಕೇಂದ್ರ ತೆರೆಯಲು ಸಹಕಾರ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಆದೇಶದಂತೆ ಎಲ್ಲರಿಗೂ ಲಸಿಕೆ ವಿತರಿಸುವ ನಿಟ್ಟಿನಲ್ಲಿ ಸರಕಾರದ ಜತೆ ಕೈಜೋಡಿಸಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದ ಎಲ್ಲ ಗ್ರಾಮಗಳಲ್ಲಿ ಹೊಂದಿರುವ ಗ್ರಾಹಕ ಸೇವಾ ಕೇಂದ್ರಗಳನ್ನು ಪ್ರಸಕ್ತ ಆಯಾ ಗ್ರಾಮದ ಜನರಿಗೆ ಲಸಿಕೆ ನೀಡಲು ತಾತ್ಕಾಲಿಕವಾಗಿ ಬಿಟ್ಟುಕೊಡಲಾಗುತ್ತದೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ತಿಳಿಸಿದ್ದಾರೆ.

ಲಸಿಕೆ ನೀಡಲು ಬೇಕಾದ ವ್ಯವಸ್ಥೆ ಮತ್ತು ನೋಡಿಕೊಳ್ಳಲು ಸ್ವಯಂ ಸೇವಕರನ್ನು ಒದಗಿಸುವುದಾಗಿ ಸರಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯದಲ್ಲಿ ಲಸಿಕೆಗಳು ಲಭ್ಯವಾದೊಡನೆ ಗ್ರಾಮೀಣ ಪ್ರದೇಶಗಳಿಗೆ ಅದನ್ನು ಸಾಗಿಸಲು ಬೇಕಾದ ವಾಹನದ ವ್ಯವಸ್ಥೆ ಒದಗಿಸಲು ಯೋಜನೆಯು ಸಿದ್ಧವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ ಎಂದವರು ಹೇಳಿದರು.

ಸೋಂಕಿತರಿಗೆ ಉಚಿತ ವಾಹನ ಸೌಲಭ್ಯ :

ಹೆಗ್ಗಡೆಯವರ ಆದೇಶದಂತೆ ರಾಜ್ಯದ (ಬೆಂಗಳೂರು ನಗರ ಹೊರತುಪಡಿಸಿ) ಪ್ರತಿ ತಾಲೂಕಿಗೆ ತಲಾ 2ರಂತೆ ಒಟ್ಟು 350 ವಾಹನಗಳನ್ನು ಮೇ 3ರಿಂದಲೇ ಸೋಂಕಿತರಿಗೆ ಉಚಿತ ಸಂಚಾರಿ ವಾಹನ ವ್ಯವಸ್ಥೆಗೆ ಒದಗಿಸಲು ನಿರ್ಧರಿಸಲಾಗಿದೆ.

ಈ ವಾಹನಗಳು ಗ್ರಾಮೀಣ ಪ್ರದೇಶದ ಸೋಂಕಿತರು ಆಸ್ಪತ್ರೆಗೆ ತೆರಳಲು ಅಥವಾ ಆಸ್ಪತ್ರೆಯಿಂದ ಹಿಂದಿರುಗಲು ಲಭ್ಯವಾಗಲಿವೆ. ಬಡಜನರಿಗೆ ಈ ಸೌಲಭ್ಯ  ದೊರಕಲು ವ್ಯವಸ್ಥೆ ಮಾಡಲಾಗಿದ್ದು, ರೋಗಿಯ ಪ್ರಯಾಣಕ್ಕೆ ಮಾತ್ರ ಲಭ್ಯವಿರುವ ಈ ವಾಹನ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಲು ಆಯಾ ತಾಲೂಕಿನ ಯೋಜನಾಧಿಕಾರಿ ಮೊಬೈಲ್‌ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಗ್ರಾಹಕ ಸೇವಾ ಕೇಂದ್ರ ಚಟುವಟಿಕೆ ಸ್ಥಗಿತ :

ಲಾಕ್‌ಡೌನ್‌ ಪರಿಸ್ಥಿತಿಯನ್ನು ಗಮನ ದಲ್ಲಿರಿಸಿಕೊಂಡು ಸ್ವಸಹಾಯ ಸಂಘಗಳ ಸದಸ್ಯರಿಗೆ ತೊಂದರೆಯಾಗದಂತೆ ಮೇ 3ರಿಂದ ಮೇ 15ರ ವರೆಗೆ ಯೋಜನೆಯ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಮೇ 2ರಂದು ರವಿವಾರ ಕಾರ್ಯಕಾರಿ ಮಂಡಳಿ ಸಭೆ ಯಲ್ಲಿ ತೀರ್ಮಾನಿಸಿದಂತೆ ಯೋಜನೆಯ ಗ್ರಾಹಕ ಸೇವಾ ಕೇಂದ್ರಗಳು ಕರ್ತವ್ಯ ನಿರ್ವಹಿಸುತ್ತಿಲ್ಲ. ಜತೆಗೆ ಸದಸ್ಯರು ಹಣ ಸಂಗ್ರಹಣೆ ಮತ್ತು ಸಾಲದ ಕಂತು ಕಟ್ಟುವುದನ್ನು 2 ವಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.