ದ.ಕ.: ಇತ್ತೀಚಿನ ವರ್ಷಗಳಲ್ಲಿ ನಡೆದ ಹತ್ಯೆಗಳು: ಪ್ರಶಾಂತ, ಶರತ್, ದೀಪಕ್, ಪ್ರವೀಣ್?
Team Udayavani, Jul 28, 2022, 7:16 AM IST
ಸುಳ್ಯ: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರನ್ನು ದುಷ್ಕರ್ಮಿಗಳು ಕೊಲೆಗೈದ ಹಿನ್ನೆಲೆಯಲ್ಲಿ ಭುಗಿಲೆದ್ದ ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣಗಳಿವೆ.
ಬುಧವಾರ ಆ ಆಕ್ರೋಶದ ವಿಶ್ವರೂಪ ದರ್ಶನವಾದದ್ದು ಜನಪ್ರತಿನಿಧಿಗಳಿಗೆ. ಸಂಸದ ನಳಿನ್ ಕುಮಾರ್ ಕಟೀಲು, ಸಚಿವರಾದ ಸುನಿಲ್ ಕುಮಾರ್, ಅಂಗಾರ ಹಾಗೂ ಶಾಸಕ ಸಂಜೀವ್ ಮಠಂದೂರು ಅವರಿಗೆ. “ಅಂದು ಪ್ರಶಾಂತ, ಶರತ್, ದೀಪಕ್..ಇಂದು ಪ್ರವೀಣ. ಇದಕ್ಕೆ ಕೊನೆಯೇ ಇಲ್ಲವೇ?’ ಎಂದು ಆಕ್ರೋಶದಿಂದ ಜನಪ್ರತಿನಿಧಿಗಳಿಗೆ ದಿಗ್ಬಂಧನ ವಿಧಿಸಿ ಪ್ರಶ್ನಿಸಿದರು. ಇದಕ್ಕೆ ಎಲ್ಲರೂ ಉತ್ತರ ನೀಡದೇ ಮೌನಕ್ಕೆ ಶರಣಾದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಾಗ್ಗೆ ಹಿಂದೂ ಕಾರ್ಯಕರ್ತರ ಮೇಲೆ ಕೊಲೆ ಯತ್ನ ನಡೆದರೂ ಸರಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಸ್ಥಳೀಯ ಜನಪ್ರತಿನಿಧಿಗಳೂ ಒತ್ತಡ ಹೇರುತ್ತಿಲ್ಲ ಎಂಬುದು ಹಿಂದೂ ಸಮುದಾಯದ ಆಕ್ರೋಶಕ್ಕೆ ಮೂಲ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಪ್ರಮುಖ ಹತ್ಯೆಗಳು.
ಪ್ರಶಾಂತ್ ಪೂಜಾರಿ
9-10-2015 ರಂದು ಬೆಳಗ್ಗೆ 7ರ ವೇಳೆಗೆ ಮೂಡುಬಿದಿರೆಯಲ್ಲಿ ಬಜರಂಗದಳ ಮುಖಂಡ ಪ್ರಶಾಂತ ಪೂಜಾರಿ ಅವರ ಹತ್ಯೆ. ಮೂಡು ಬಿದಿರೆ ಬಸ್ ನಿಲ್ದಾಣ ಬಳಿ ಹೂವಿನ ವ್ಯಾಪಾರ ಮಾಡುವ ವೇಳೆ ದುಷ್ಕರ್ಮಿಗ ಳು ಮುಂಜಾನೆ ತಲ ವಾರು ದಾಳಿ ನಡೆಸಿ ಹತ್ಯೆ ನಡೆಸಿದ್ದರು.
ಶರತ್ ಮಡಿವಾಳ
ಬೆಂಜನಪದವಿನ ಅಶ್ರಫ್ ಕಲಾಯಿ ಎಂಬ ಎಸ್‌ಡಿಪಿಐ ನಾಯಕನ ಹತ್ಯೆಗೆ ಪ್ರತೀಕಾರವಾಗಿ ಎಂಬಂತೆ 2017ರ ಜುಲೈನಲ್ಲಿ ಬಿ.ಸಿ.ರೋಡಿನಲ್ಲಿ ಕೆಲವು ದುಷ್ಕರ್ಮಿಗಳು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ನಾಲ್ಕು ದಿನ ಬಳಿಕ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ದೀಪಕ್ ರಾವ್
2018ರ ಜನವರಿಯಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಅವರನ್ನು ಸುರತ್ಕಲ್‌ನ ಕಾಟಿಪಳ್ಳದಲ್ಲಿ ಕೆಲವು ದುಷ್ಕರ್ಮಿಗಳು ತಲವಾರುಗಳಿಂದ ಹತ್ಯೆ ನಡೆಸಿದ್ದರು. ಈ ಮೂರೂ ಪ್ರಕರಣ ಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಜೈಲಿನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.