ಬಂಟ್ವಾಳ: ಸಂಬಂಧಿಯಿಂದಲೇ ಲೈಂಗಿಕ ಕಿರುಕುಳ
Team Udayavani, Aug 21, 2022, 12:24 AM IST
ಬಂಟ್ವಾಳ: ಸಂಬಂಧಿಕರ ಮನೆಯಲ್ಲಿ ತಮ್ಮನೊಂದಿಗೆ ಆಶ್ರಯ ಪಡೆದಿದ್ದ ಯುವತಿಯೊಬ್ಬಳಿಗೆ ಅದೇ ಮನೆಯ ಸಂಬಂಧಿಕನೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಅಲ್ಲಿಪಾದೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತ ಯುವತಿ ಹಾಗೂ ಆಕೆಯ ತಮ್ಮನನ್ನು ಆ. 19ರಂದು ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಗಿದೆ.
ಯುವತಿ ಹಾಗೂ ಆಕೆಯ ತಮ್ಮ ಅಜ್ಜಿಯ ಜತೆ ವಾಸವಿದ್ದು, ಅಜ್ಜಿಯ ನಿಧನದ ಬಳಿಕ ಆರೋಪಿ ಸಂಬಂಧಿಯ ಮನೆಯಲ್ಲಿ ವಾಸವಿದ್ದರು. ಆರೋಪಿಯು ಯುವತಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆದರೆ ಆಕೆಯ ಆರೋಗ್ಯದಲ್ಲಿ ಕೊಂಚ ನ್ಯೂನ್ಯತೆ ಇದ್ದ ಹಿನ್ನೆಲೆಯಲ್ಲಿ ಈ ವಿಚಾರವನ್ನು ತಿಳಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಬಳಿಕ ಅಧಿಕಾರಿಗಳ ವಿಚಾರಣೆಯಿಂದ ಈ ಎಲ್ಲ ವಿಚಾರಗಳು ತಿಳಿದುಬಂದಿದೆ.
ಘಟನೆಯ ಕುರಿತು ಮಾಹಿತಿ ತಿಳಿದ ಸರಪಾಡಿ ಗ್ರಾ.ಪಂ. ಕಾವಲು ಸಮಿತಿಯವರು ಹಾಗೂ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯವರು ಇಬ್ಬರ ರಕ್ಷಣ ಕಾರ್ಯವನ್ನು ನಿರ್ವಹಿಸಿದ್ದಾರೆ. ಬಂಟ್ವಾಳ ಸಿಡಿಪಿಒ ಗಾಯತ್ರಿ ಬಾಯಿ ಎಚ್. ಅವರ ಮಾರ್ಗದರ್ಶನದಲ್ಲಿ ಮೇಲ್ವಿಚಾರಕಿ ಶೋಭಾ ಅವರು ಸಂತ್ರಸ್ತ ಯುವತಿಯನ್ನು ಮಂಗಳೂರು ಜಪ್ಪಿನಮೊಗರಿನ ಸ್ವಾಧರ ಕೇಂದ್ರ ಹಾಗೂ ಆಕೆಯ ತಮ್ಮ ಬಾಲಕನನ್ನು ಬೋಂದೆಲ್ನ ಬಾಲಕರ ಬಾಲಮಂದಿರಕ್ಕೆ ಸೇರಿಸಲಾಗಿದೆ ಎಂದು ಸಿಡಿಪಿಒ ಕಚೇರಿ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.