ಬಂಟ್ವಾಳ: ತಲೆ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು
Team Udayavani, Oct 24, 2022, 7:46 PM IST
ಬಂಟ್ವಾಳ: ಮಂಚಿ ಗ್ರಾಮದ ವಿದ್ಯಾರ್ಥಿನಿಯೋರ್ವಳು ಕಳೆದ ಕೆಲವು ದಿನಗಳಿಂದ ತಲೆನೋವಿನಿಂದ ಬಳಲುತ್ತಿದ್ದು, ಆಕೆಯನ್ನು ಬಂಟ್ವಾಳ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ವೈದ್ಯರ ಬಳಿ ಪರೀಕ್ಷೆ ಮಾಡಿಸಿ ಔಷಧ ಪಡೆದುಕೊಂಡಿದ್ದರು.
ಆದರೆ ಅ. 23ರಂದು ಸಂಜೆ 7ರ ಸುಮಾರಿಗೆ ತಲೆನೋವು ಉಲ್ಬಣಿಸಿ ವಾಂತಿ ಮಾಡಿಕೊಂಡಿದ್ದಳು. ಕೊನೆಗೆ ತಲೆನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆ 4ರ ವೇಳೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿ ಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು.
ಈ ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ಏನು ಎನ್ನುವುದು ಇನ್ನೂ ಕೂಡ ತಿಳಿದುಬಂದಿಲ್ಲ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.