ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ
ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಕಾರ್ಯಾಚರಣೆ
Team Udayavani, May 18, 2022, 9:46 PM IST
ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಕಕ್ಕಿಂಜೆಯಿಂದ ಮೂಡಿಗೆರೆ ಕಡೆಗೆ ಸಾಗಾಟ ಮಾಡುತ್ತಿದ್ದ ವೇಳೆ ಚಾರ್ಮಾಡಿಯ ಚೆಕ್‌ಪೋಸ್ಟ್‌ನಲ್ಲಿ ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡ ಘಟನೆ ಮೇ 18ರಂದು ನಡೆದಿದೆ.
ಆರೋಪಿ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ವಿನಯ್ (23) ಮತ್ತು ಇತರರನ್ನು ಬಂಧಿಸಿ 33 ಕ್ವಿಂಟಾಲ್ ಅಕ್ಕಿ ಸಹಿತ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ.
ಬುಧವಾರ ಮುಂಜಾನೆ 3 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಕಷ್ಣಕಾಂತ ಪಾಟೀಲ್ ಮತ್ತು ಸಿಬಂದಿ ರೌಂಡ್ಸ್ ಕರ್ತವ್ಯದಲ್ಲಿ ಇರುವ ಸಮಯ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಚಾರ್ಮಾಡಿ ಪೊಲೀಸ್ ಚೆಕ್ ಪೋಸ್ಟ್ ಬಳಿ ವಾಹನವನ್ನು ತಪಾಸಣೆ ಮಾಡಿದಾಗ ಉಜಿರೆ ಕಡೆಯಿಂದ ಮೂಡಿಗೆರೆ ಕಡೆಗೆ ಹೋಗುವ ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ಕಿ ಸಾಗಾಟ ಮಾಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಬೆಳ್ತಂಗಡಿ ತಾಲೂಕು ಆಹಾರ ನೀರೀಕ್ಷಕರನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದಾಗ ಅಕ್ರಮ ಸಾಗಾಟ ಎಂಬುದು ಖಚಿತಗೊಂಡಿದೆ. ಅಕ್ಕಿಯು 2022ನೇ ಮೇ ತಿಂಗಳ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಣೆಗಾಗಿ ನ್ಯಾಯಬೆಲೆ ಅಂಗಡಿಯ ಸರಬರಾಜಿಗೆ ನೀಡಿರುವ ಅಕ್ಕಿಗೆ ಹೋಲಿಕೆ ಇರುವುದು ಕಂಡುಬಂದಿದೆ.
ಇದನ್ನೂ ಓದಿ:ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ವಾಹನದಲ್ಲಿ 59 ಪ್ಲಾಸ್ಟಿಕ್ ಗೋಣಿಚೀಲಗಳಲ್ಲಿ ತಲಾ 50 ಕೆ.ಜಿ.ಯ ಅಕ್ಕಿ ಬ್ಯಾಗ್ ಮತ್ತು 14 ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ತಲಾ 25 ಕೆ.ಜಿ. ತುಂಬಿದ ಅಕ್ಕಿ ಸೇರಿ ಒಟ್ಟು 33 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ 49,500 ರೂ. ಹಾಗೂ ಸಾಗಾಟಕ್ಕೆ ಬಳಸಿದ ವಾಹನದ ಮೌಲ್ಯ 5 ಲಕ್ಷ ರೂ. ಆಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆಹಾರ ನಿರೀಕ್ಷಕ ವಿಶ್ವ ಕೆ. ಅವರ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 40-2022 ಕಲಂ: 3 ಮತ್ತು 7 ಅವಶ್ಯಕ ವಸ್ತುಗಳ ಕಾಯ್ದೆ 1955 ಜತೆಗೆ 34 ಐಪಿಸಿ ನಡಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.