Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು
Team Udayavani, Jul 2, 2024, 9:06 PM IST
ಪತ್ನಿಗೆ ಚೂರಿಯಿಂದ ಹಲ್ಲೆ; ಪರಾರಿಯಾಗಿದ್ದ ಆರೋಪಿ ಪತಿಯ ಬಂಧನ
ಸುಳ್ಯ: ಪತಿ-ಪತ್ನಿ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ನಡೆದು ಪತಿಯೇ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನವೀನ್ ಕುಮಾರ್ ಬಂಧಿತ ಆರೋಪಿ.
ತನಿಖೆ ನಡೆಸಿದ ನ್ಯಾಯಾಲಯ ಆರೋಪಿ ನವೀನ್ ಕುಮಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವಿನೋಬ ನಗರದ ನವೀನ್ ಕುಮಾರ್ ಹಾಗೂ ಅವರ ಪತ್ನಿ ಅಶ್ವಿನಿ ಅವರ ಮಧ್ಯೆ ಜೂ.29ರಂದು ರಾತ್ರಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ನವೀನ್ ಅವರ ಪತ್ನಿ ಅಶ್ವಿನಿ ಅವರಿಗೆ ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಾಯಗೊಂಡ ಆಶ್ವಿನಿ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ಘಟನೆ ಬಗ್ಗೆ ಸುಳ್ಯ ಠಾಣೆಗೆ ದೂರು ನೀಡಲಾಗಿತ್ತು, ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಸುಳ್ಯ: ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಧೀಶರು ಆದೇಶ ನೀಡಿದ್ದಾರೆ.
ಸುಳ್ಯದ ಕಾಂತಮಂಗಲ ಶಾಲೆಯ ಜಗಲಿಯಲ್ಲಿ ಮಲಗಿದ್ದ ವೀರಾಜಪೇಟೆ ನಿವಾಸಿ ವಸಂತ ನಾಯ್ಕ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಎಡಮಂಗಲದ ಉದಯ ನಾಯ್ಕನನ್ನು ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.