ಧರ್ಮಾಧಿಕಾರಿಗಳ ಸ್ವಾಗತಕ್ಕೆ ಸಿದ್ಧವಾದ ಧರ್ಮಸ್ಥಳ ಕ್ಷೇತ್ರ: ಚಾರ್ಮಾಡಿಯಿಂದ ವಾಹನ ಜಾಥಾ
Team Udayavani, Jul 9, 2022, 7:23 AM IST
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರು ಕುಡುಮ (ಧರ್ಮಸ್ಥಳ) ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿರುವ ಸಮಯದಲ್ಲಿ ಬೆಂಗಳೂರಿನ ಕಾರ್ಯಕ್ರಮದ ನಿಮಿತ್ತ ಪ್ರವಾಸದಲ್ಲಿದ್ದ ಹೆಗ್ಗಡೆ ಅವರು ಜು. 9ರಂದು ಸಂಜೆ ಕ್ಷೇತ್ರಕ್ಕೆ ಆಗಮಿಸುವರು. ಅವರನ್ನು ಸ್ವಾಗತಿಸಲು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಿಂದ ಸ್ವಾಗತಕ್ಕೆ ಅಭಿಮಾನಿಗಳು ಸಿದ್ಧತೆ ಕೈಗೊಂಡಿದ್ದಾರೆ.
ಸಂಜೆ 5ಕ್ಕೆ ಸರಿಯಾಗಿ ಚಾರ್ಮಾಡಿಯಿಂದ ವಾಹನ ಜಾಥಾದ ಮೂಲಕ ಶ್ರೀ ಕ್ಷೇತ್ರದ ವರೆಗೆ ಭವ್ಯ ಮೆರವಣಿಗೆಯಲ್ಲಿ ಕರೆತರಲಾಗುವುದು.
ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಬಳಿಕ ಮುಖ್ಯಮಂತ್ರಿಗಳು ಸಹಿತ ನಾಡಿನೆಲ್ಲೆಡೆಯಿಂದ ಗಣ್ಯಾತಿಗಣ್ಯರಿಂದ, ಭಕ್ತರಿಂದ, ಅಭಿಮಾನಿಗಳಿಂದ ಅಭಿನಂದನೆಯ ಮಹಾಪೂರ ಹರಿದುಬಂದಿತ್ತು. ಇದೀಗ ಕ್ಷೇತ್ರದ ಜನತೆ ಶುಭ ಹಾರೈಸಲು ಕಾತರರಾಗಿದ್ದಾರೆ. ವಾಹನ ಜಾಥಾದಲ್ಲಿ ತಾಲೂಕಿನ ಅಭಿಮಾನಿ, ಭಕ್ತರೆಲ್ಲ ಭಾಗಿಯಾಗಬೇಕೆಂದು ಶಾಸಕರು ವಿನಂತಿಸಿದ್ದಾರೆ.
ಧರ್ಮಾಧಿಕಾರಿಗಳಿಗೆ ದೇವರ ಸೇವೆಯೊಂದಿಗೆ ದೇಶಸೇವೆಗೈಯುವ ಶಾಸನಬದ್ಧ ಗೌರವಯುತ ಸ್ಥಾನಮಾನ ಪ್ರಾಪ್ತಿಯಾಗಿರುವ ಸಂತಸವನ್ನು ಗೌರವಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಗ್ಗಡೆ ಕುಟುಂಬ ವರ್ಗ ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.