D.K: 13 ಎಸೆಸೆಲ್ಸಿ ಪರೀಕ್ಷಾ ಕೇಂದ್ರ ರದ್ದು! ಗ್ರಾಮೀಣ ವಿದ್ಯಾರ್ಥಿಗಳಿಗೆ ಹೊಸ ಸಂಕಷ್ಟ


Team Udayavani, Mar 12, 2024, 7:20 AM IST

D.K: 13 ಎಸೆಸೆಲ್ಸಿ ಪರೀಕ್ಷಾ ಕೇಂದ್ರ ರದ್ದು! ಗ್ರಾಮೀಣ ವಿದ್ಯಾರ್ಥಿಗಳಿಗೆ ಹೊಸ ಸಂಕಷ್ಟ

ಪುತ್ತೂರು: ಎಸೆಸೆಲ್ಸಿ ಅಂತಿಮ ಪರೀಕ್ಷೆ ಮಾ. 25ರಿಂದ ಎ. 6ರ ತನಕ ನಡೆಯಲಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ರದ್ದುಪಡಿಸಿ ರುವುದರಿಂದ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಸಂಕಷ್ಟ ಅನುಭವಿಸಲಿದ್ದಾರೆ.

ಕೇಂದ್ರಗಳ ಧಾರಣ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯಾರ್ಥಿ ಸಂಖ್ಯೆ ಇಲ್ಲದಿರುವ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ ಇದರಿಂದ ಗ್ರಾಮಾಂತರ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ ಎಂಬುದು ಪೋಷಕರ ದೂರು.

ರದ್ದು, ಹೊಸ ಕೇಂದ್ರ ಎಷ್ಟು?
ಜಿಲ್ಲೆಯಲ್ಲಿ 2023ರಲ್ಲಿ 98 ಪರೀಕ್ಷಾ ಕೇಂದ್ರಗಳಿದ್ದವು. ಈ ಬಾರಿ 88ಕ್ಕೆ ಇಳಿದಿದೆ. ಬಂಟ್ವಾಳ ತಾಲೂಕಿನಲ್ಲಿ 1, ಪುತ್ತೂರು 2, ಬೆಳ್ತಂಗಡಿ 1, ಮಂಗಳೂರು ಉತ್ತರ 2, ಮಂಗಳೂರು ದಕ್ಷಿಣದಲ್ಲಿ 7 ಕೇಂದ್ರಗಳನ್ನು ರದ್ದುಪಡಿಸಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ 1, ಮಂಗಳೂರು ಉತ್ತರ 1, ಮಂಗಳೂರು ದಕ್ಷಿಣದಲ್ಲಿ 1 ಹೊಸ ಕೇಂದ್ರ ತೆರೆಯಲಾಗಿದೆ. ಒಟ್ಟು 13 ಕೇಂದ್ರ ರದ್ದುಪಡಿಸಿ 3 ಹೊಸ ಕೇಂದ್ರ ತೆರೆಯಲಾಗಿದೆ.

ಉಡುಪಿ ಯಥಾಸ್ಥಿತಿ
ಉಡುಪಿ ಜಿಲ್ಲೆಯಲ್ಲಿ 5 ವಲಯಗಳಿದ್ದು, 51 ಪರೀಕ್ಷಾ ಕೇಂದ್ರಗಳಿವೆ. ಬೈಂದೂರು-8, ಕುಂದಾಪುರ-8, ಕಾರ್ಕಳ-9, ಬ್ರಹ್ಮಾವರ-11, ಉಡುಪಿ-15 ಕೇಂದ್ರಗಳಿವೆ. ಕಳೆದ ಬಾರಿಗೆ ಹೋಲಿಸಿದರೆ ಯಾವುದೇ ಬದಲಾವಣೆ ಇಲ್ಲ ಎಂದು ಡಿಡಿಪಿಐ ಗಣಪತಿ ತಿಳಿಸಿದ್ದಾರೆ.

ರದ್ದು ಏಕೆ?
ಪರೀಕ್ಷಾ ಕೇಂದ್ರಗಳಲ್ಲಿ 250 ವಿದ್ಯಾರ್ಥಿ ಬಲ ಇರಬೇಕು ಅನ್ನುವುದು ಇಲಾಖೆಯ ನಿಯಮ. ಕನಿಷ್ಠ 180ರಿಂದ 200 ಆದರೂ ಬೇಕು. ಅದಕ್ಕಿಂತ ಕಡಿಮೆ ಸಂಖ್ಯೆ ಇರುವ ಕಾರಣ 13 ಕೇಂದ್ರಗಳ ರದ್ದತಿ ಅನಿವಾರ್ಯವಾಗಿತ್ತು ಅನ್ನುವುದು ಅಧಿಕಾರಿಗಳ ಹೇಳಿಕೆ. ರದ್ದಾದ ಕೇಂದ್ರಕ್ಕೆ ಒಳಪಟ್ಟಿರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೇಂದ್ರವನ್ನು ನಿಗದಿಪಡಿಸಲಾಗಿದೆ. ಹಿಂದೆ ಆರೇಳು ಕಿ.ಮೀ. ದೂರದಲ್ಲಿ ಇದ್ದ ಪರೀಕ್ಷಾ ಕೇಂದ್ರ ರದ್ದಾದ ಪರಿಣಾಮ ಇನ್ನು ಹತ್ತಾರು ಕಿ.ಮೀ. ದೂರ ತೆರಳಬೇಕಾದ ಸ್ಥಿತಿ ಈಗ ಸೃಷ್ಟಿಯಾಗಿದೆ.

ಪುತ್ತೂರು ತಾಲೂಕಿನ ಗ್ರಾಮಾಂತರ ಪ್ರದೇಶದ ಕುಂಬ್ರ ಕೆಪಿಎಸ್‌ನಲ್ಲಿ ಇದ್ದ ಪರೀಕ್ಷಾ ಕೇಂದ್ರವನ್ನು ರದ್ದು ಪಡಿಸಲಾಗಿದೆ. ಪರಿಸರದ ವಿದ್ಯಾರ್ಥಿಗಳು ಪುತ್ತೂರಿನ ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕಿದೆ. ಹೆಚ್ಚಿನ ಸಮಯವನ್ನು ಪ್ರಯಾಣದಲ್ಲೇ ಕಳೆಯುವ ಹಾಗಾಗಿದ್ದು, ಕುಂಬ್ರದಲ್ಲೇ ಕೇಂದ್ರ ಸ್ಥಾಪಿಸಬೇಕೆನ್ನುವುದು ನಮ್ಮೆಲ್ಲರ ವಿನಂತಿ.
– ಸಯ್ಯದ್‌ ಗಫೂರ್‌ ಸಾಹೇಬ್‌ ಪಾಲ್ತಾಡು
ಕಾರ್ಯಾಧ್ಯಕ್ಷ, ಸರಕಾರಿ ಪ್ರೌಢಶಾಲೆ ಮಣಿಕ್ಕರ

ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ರಾಜ್ಯಾದ್ಯಂತ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ತಗ್ಗಿಸಲಾಗಿದೆ. ದ.ಕ.ದಲ್ಲೂ 10 ಕೇಂದ್ರ ಕಡಿಮೆ ಆಗಿದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಇಲಾಖೆ ಪೂರಕ ಕ್ರಮ ಕೈಗೊಂಡಿದೆ.
– ವೆಂಕಟೇಶ್‌ ಸುಬ್ರಾಯ ಪಟಾYರ್‌,
ಡಿಡಿಪಿಐ, ದ.ಕ. ಜಿಲ್ಲೆ

ರದ್ದಾದ ಕೇಂದ್ರಗಳು
ಬಂಟ್ವಾಳ: ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯ ಪಾಣೆಮಂಗಳೂರು
ಬೆಳ್ತಂಗಡಿ: ಕಣಿಯೂರು ಪದು¾ಂಜ ಸರಕಾರಿ ಪ್ರೌಢಶಾಲೆ
ಪುತ್ತೂರು: ಸುದಾನ ಪ್ರೌಢಶಾಲೆ ಪುತ್ತೂರು, ಕುಂಬ್ರ ಕೆಪಿಎಸ್‌ ಪ್ರೌಢಶಾಲೆ
ಮಂಗಳೂರು ಉತ್ತರ: ಹಂಪನಕಟ್ಟೆ ಮಿಲಾಗ್ರಿಸ್‌ ಪ.ಪೂ. ಕಾಲೇಜು, ಗಣಪತಿ ಆಂಗ್ಲಮಾಧ್ಯಮ ಶಾಲೆ ಹಂಪನಕಟ್ಟೆ
ಮಂಗಳೂರು ದಕ್ಷಿಣ: ಸೈಂಟ್‌ ಆ್ಯಗ್ನೆಸ್‌ ಪ್ರೌಢಶಾಲೆ ಬೆಂದೂರುವೆಲ್‌, ಭಾರತ ಪ್ರೌಢ ಶಾಲೆ ಉಳ್ಳಾಲ, ಸರಕಾರಿ ಪ್ರೌಢಶಾಲೆ ದೇರಳಕಟ್ಟೆ, ಸ.ಪ.ಪೂ. ಕಾಲೇಜು ಮುತ್ತೂರು, ಸೇಕ್ರೆಡ್‌ ಹಾರ್ಡ್‌ ಪ್ರೌಢಶಾಲೆ ಕುಲಶೇಖರ, ಸೈಂಟ್‌ ಮೇರಿಸ್‌ ಪ್ರೌಢಶಾಲೆ ಪಳ್ನೀರು, ವಿದ್ಯಾಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಾಮಂಜೂರು

ಹೊಸ ಕೇಂದ್ರಗಳು
ಎಸ್‌ವಿಎಸ್‌ ಆಂಗ್ಲಮಾಧ್ಯಮ ಪ್ರೌಢಶಾಲೆ ಬಂಟ್ವಾಳ,
ಸೈಂಟ್‌ ಅಲೋಶಿಯಸ್‌ ಉರ್ವ, ಸರಕಾರಿ ಪ್ರೌಢಶಾಲೆ ಗುರುಪುರ

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Bantwal: ಬೀದಿ ಬದಿ ವ್ಯಾಪಾರ ಸ್ಥಳಾಂತರ

Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಛಲವಾದಿ ನಾರಾಯಣಸ್ವಾಮಿ ಕುಟುಂಬ ಭೇಟಿ

Uppinangady:ಪ್ರಿ ವೆಡ್ಡಿಂಗ್‌ ಶೂಟಿಂಗ್‌ಗೆ ತೆರಳುತ್ತಿದ್ದಾಗ ಅಪಘಾತ:ಭಾವಿ ವಧು-ವರರಿಗೆ ಗಾಯ

Uppinangady:ಪ್ರಿ ವೆಡ್ಡಿಂಗ್‌ ಶೂಟಿಂಗ್‌ಗೆ ತೆರಳುತ್ತಿದ್ದಾಗ ಅಪಘಾತ:ಭಾವಿ ವಧು-ವರರಿಗೆ ಗಾಯ

Sullia: ಬಿದ್ದು ಸಿಕ್ಕಿದ್ದ ಚಿನ್ನದ ಸರವನ್ನು ಹಿಂದಿರುಗಿಸಿದ ಬಸ್‌ ಮಾಲಕರು

Sullia: ಬಿದ್ದು ಸಿಕ್ಕಿದ್ದ ಚಿನ್ನದ ಸರವನ್ನು ಹಿಂದಿರುಗಿಸಿದ ಬಸ್‌ ಮಾಲಕರು

de

Bantwal: ಕೊಯಿಲ; ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.