ಅಧ್ಯಕ್ಷೆಯಾಗಿ ದಮಯಂತಿ ಆಯ್ಕೆ

Team Udayavani, Jan 15, 2019, 9:26 AM IST

15-january-14.jpg

ವಿಟ್ಲ : ವಿಟ್ಲ ಪ.ಪಂ. ಎರಡನೇ ಅವಧಿಗೆ ಅಧ್ಯಕ್ಷೆಯಾಗಿ ಕಾಂಗ್ರೆಸ್‌ ಪಕ್ಷದ ದಮಯಂತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಬಹುಮತ ವಿದ್ದರೂ ಮೀಸಲಾತಿ ಅನ್ವಯ ಅಧ್ಯಕ್ಷರ ಪಟ್ಟ ಕಾಂಗ್ರೆಸ್‌ ಪಕ್ಷದ ಪಾಲಾಗಿದೆ. ಸೋಮವಾರ ವಿಟ್ಲ ಪ.ಪಂ.ನಲ್ಲಿ ಬಂಟ್ವಾಳ ತಹಶೀಲ್ದಾರ ಪುರಂದರ ಹೆಗ್ಡೆ ಅವರು ಚುನಾವಣೆ ಪ್ರಕ್ರಿಯೆ ನಡೆಸಿ, ದಮಯಂತಿ ಅವರನ್ನು ಅಧ್ಯಕ್ಷೆಯಾಗಿ ಘೋಷಣೆ ಮಾಡಿದರು.

ಕಳೆದ ಬಾರಿ ನೂತನವಾಗಿ ಅಸ್ತಿತ್ವಕ್ಕೆ ಬಂದ ವಿಟ್ಲ ಪ.ಪಂ. ಚುನಾವಣೆಯಲ್ಲಿ ಬಿಜೆಪಿ 12 ಹಾಗೂ ಕಾಂಗ್ರೆಸ್‌ 6 ಸ್ಥಾನಗಳಲ್ಲಿ ವಿಜಯ ಗಳಿಸಿದ್ದವು. ಪ್ರಥಮ ಅವಧಿಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಸದಸ್ಯ ಅರುಣ್‌ ಎಂ. ವಿಟ್ಲ ಆಯ್ಕೆಗೊಂಡಿದ್ದರು. 2 ವರ್ಷಗಳ ಬಳಿಕ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆದು, ಬಿಜೆಪಿ ಸದಸ್ಯ ಜಯಂತ ನಾಯ್ಕ ಆಯ್ಕೆಯಾಗಿದ್ದರು.

ಈ ಬಾರಿ ರಾಜ್ಯ ಸರಕಾರವು ಅಧ್ಯಕ್ಷ ಸ್ಥಾನಕ್ಕೆ ಎಸ್‌.ಸಿ. ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಬಿ ಮೀಸಲಾತಿ ಘೋಷಿಸಿತ್ತು. ಆದರೆ ಬಿಜೆಪಿ ಪಕ್ಷದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಸಿ. ಮಹಿಳೆ ಸದಸ್ಯರಿಲ್ಲದೇ ಇದ್ದುದರಿಂದ ಕಾಂಗ್ರೆಸ್‌ನ ದಮಯಂತಿ ಅವರಿಗೆ ಅವಕಾಶ ಲಭಿಸಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಇನ್ನೂ ಅಧಿಕೃತ ಪ್ರಕಟನೆ ಹೊರಬಿದ್ದಿಲ್ಲ.

ನಿರ್ಗಮನ ಅಧ್ಯಕ್ಷ ಅರುಣ್‌ ಎಂ. ವಿಟ್ಲ ಮಾತನಾಡಿ, ತನ್ನ ಅವಧಿಯಲ್ಲಿ ಎಲ್ಲರ ಸಹಕಾರದಲ್ಲಿ ವಿಟ್ಲವನ್ನು ಅಭಿವೃದ್ಧಿಪಡಿಸ ಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರೊಂ ದಿಗೆ ವಿಟ್ಲದ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ. ವಿಟ್ಲದ ಜನತೆ ಬಿಜೆಪಿಗೆ ಅಧಿಕಾರ ನೀಡಿ ದ್ದರೂ ಮೀಸಲಾತಿಯಿಂದ ಕಾಂಗ್ರೆಸ್‌ಗೆ ಅಧ್ಯಕ್ಷ ಸ್ಥಾನ ಲಭಿಸಿದೆ ಎಂದರು. ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್‌ನಿಂದ ಸಂಭ್ರಮ ಆಚರಿಸಲಾಯಿತು.

ಪ.ಪಂ. ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯೀ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಜಿಲ್ಲಾ ಯೋಜನ ಸಮಿತಿ ಸದಸ್ಯ ಅಶೋಕ್‌ ಕುಮಾರ್‌ ಶೆಟ್ಟಿ, ಮುಖ್ಯಾಧಿಕಾರಿ ಮಾಲಿನಿ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ದಿವಾಕರ, ಗ್ರಾಮಕರಣಿಕ ಪ್ರಕಾಶ್‌ ಚುನಾವಣೆಗೆ ಸಹಕರಿಸಿದರು.

ವಿಟ್ಲದ ಅಭಿವೃದ್ಧಿ 
ನೂತನ ಅಧ್ಯಕ್ಷೆ ದಮಯಂತಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಮೀಸಲಾತಿಯಿಂದ ಅಧ್ಯಕ್ಷ ಸ್ಥಾನ ಲಭ್ಯವಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿ ಎಲ್ಲ ಸದಸ್ಯರನ್ನು ಒಂದೇ ಮನೆಯ ಸದಸ್ಯರಂತೆ ಭಾವಿಸಿ ಮುನ್ನಡೆಸುತ್ತೇನೆ. ವಿಟ್ಲದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.