ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ
Team Udayavani, Feb 7, 2021, 11:44 AM IST
ಬೆಳ್ತಂಗಡಿ: ರಾಜ್ಯ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆ ಆಪ್ತಕಾರ್ಯದರ್ಶಿ ಎ. ವೀ. ಶೆಟ್ಟಿ, ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಸ್ವಾಗತಿಸಿದರು.
ಇದನ್ನೂ ಓದಿ:ಪತ್ನಿ ವಿದ್ಯಾವಂತಳು ಎಂಬ ಕಾರಣಕ್ಕೆ ಆಕೆಗೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್
ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ., ತಾ. ಪಂ.ಇ.ಒ. ಕುಸುಮಾಧರ್ ಕೆ., ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಧರ್ಮಸ್ಥಳ ಭೇಟಿನೀಡಿದರು. ಸಚಿವರು ಧರ್ಮಸ್ಥಳದಲ್ಲಿ 15 ಕೋ.ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ಲೋಕಾರ್ಪಣೆ, ಚಾರ್ಮಾಡಿ ಅನಾರು ಸೇತುವೆ ಶಿಲಾನ್ಯಾಸ ಬಳಿಕ ಬೆಳ್ತಂಗಡಿ ಐ.ಬಿ.ಶಿಲಾನ್ಯಾಸ ನಡೆಸಲಿರುವರು.
ಬಳಿಕ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಸಚಿವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಭೋಜನದ ಬಳಿಕ ಕುಕ್ಕುಜೆ ಸೇತುವೆ ಶಿಲಾನ್ಯಾಸ ನೆರವೇರಿಸಿ ಮಂಗಳೂರಿಗೆ ಪಯಣ ಬೆಳೆಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.