ಅಡಿಕೆ ಹಳದಿ ರೋಗಕ್ಕೆ ಶಾಶ್ವತ ಪರಿಹಾರದ ಬೇಡಿಕೆ
Team Udayavani, Aug 23, 2021, 4:30 AM IST
ಪುತ್ತೂರು: ಸುಳ್ಯ, ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳ ಅಡಿಕೆ ತೋಟಗಳಿಗೆ ಬಾಧಿಸಿರುವ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕ್ರಮ ಗಗನಕುಸುಮವೇ ಆಗಿದೆ. ಆದರೆ ಇದೇ ಕೃಷಿ ಕ್ಷೇತ್ರದ ಶೋಭಾ ಕರಂದ್ಲಾಜೆ ಇದೀಗ ಕೇಂದ್ರ ಕೃಷಿ ಮಂತ್ರಿಯಾಗಿರುವುದರಿಂದ ಇದಕ್ಕೊಂದು ಸ್ಪಂದನೆ ದೊರೆಯುವ ನಿರೀಕ್ಷೆ ಬೆಳೆಗಾರರದ್ದು.
ಸುಳ್ಯ ತಾಲೂಕಿನ ಸಂಪಾಜೆ ಪರಿಸರದಲ್ಲಿ 47 ವರ್ಷಗಳ ಹಿಂದೆ ಅಡಿಕೆ ಕೃಷಿಗೆ ಕಾಣಿಸಿಕೊಂಡ ಹಳದಿ ಎಲೆ ರೋಗ ಹಬ್ಬುತ್ತಿದ್ದು, ರೋಗ ನಿಯಂತ್ರಣಕ್ಕೆ ಪರಿಹಾರ ಸಿಗದ ಕಾರಣ ಕೃಷಿ ಕುಟುಂಬಗಳು ತತ್ತರಿ ಸಿವೆ. ಸಂಪಾಜೆ, ಚೆಂಬು, ಪೆರಾಜೆ ಮೊದಲಾದ ಗ್ರಾಮಗಳಲ್ಲಿ ಅಡಿಕೆ ಕೃಷಿ ಶೇ. 90ರಷ್ಟು ನಾಶವಾಗಿದ್ದು, ಪರ್ಯಾಯ ಬೆಳೆಯತ್ತ ಜನರು ಮುಖ ಮಾಡುವ ಅನಿವಾರ್ಯ ಸೃಷ್ಟಿಯಾಗಿದೆ. ಹಳದಿ ರೋಗದಿಂದಾಗಿ ಅಡಿಕೆಯನ್ನು ನಂಬಿರುವ ಕುಟುಂಬಗಳು ಬೀದಿಗೆ ಬೀಳುವ ಅಪಾಯದಲ್ಲಿವೆ.
ಉತ್ತರ ಸಿಕ್ಕಿಲ್ಲ:
47 ವರ್ಷದ ಹಿಂದೆ ಆರಂಭಗೊಂಡ ಈ ಹಳದಿ ರೋಗ ಅಡಿಕೆಗೆ ತಗಲಿರುವ ಲಕ್ಷಣ ಕಾಣಿಸುಕೊಳ್ಳುವುದು ನಾಶದ ಅಂಚಿನಲ್ಲಿ. ಆರಂಭಿಕ ರೋಗ ಲಕ್ಷಣ ಬಿಟ್ಟುಕೊಡದ ಕಾರಣ, ಇದಕ್ಕೆ ಪರಿಹಾರ ಏನು ಎಂಬ ಬಗ್ಗೆ ಉತ್ತರ ಸಿಕ್ಕಿಲ್ಲ.
ಅಡಿಕೆ ಹಣ್ಣಾಗದಿರುವುದು, ಹಣ್ಣಾದ ಅಡಿಕೆ ಗುಣಮಟ್ಟ ಇಲ್ಲದಿರುವುದು, ಫಸಲು ಕಡಿಮೆ ಆಗು ವುದು, ಕ್ರಮೇಣ ಎಲೆಯು ಹಳದಿ ಬಣ್ಣಕ್ಕೆ ತಿರುಗಿ ಅಡಿಕೆ ಗಿಡ ನಶಿಸುವುದು ಇದರ ಲಕ್ಷಣ. ರೋಗ ಸಾಂಕ್ರಾಮಿಕವಾಗಿದ್ದು, ಒಂದು ಗಿಡಕ್ಕೆ ತಗಲಿತೆಂದರೆ ಪರಿಸರದ ಗಿಡಗಳಿಗೂ ವ್ಯಾಪ್ತಿಸುತ್ತದೆ.
ಸಂಪಾಜೆ, ಅರಂತೋಡು, ತೊಡಿಕಾನ, ಆಲೆಟ್ಟಿ, ಮರ್ಕಂಜ, ಮಡಪ್ಪಾಡಿ, ಕಲ್ಮಕಾರುಗಳಲ್ಲಿ ಕಾಣಿಸಿಕೊಂಡಿರುವ ಹಳದಿ ರೋಗ, ಈಗ ನೆರೆಯ ಗ್ರಾಮಗಳಲ್ಲಿಯೂ ಗೋಚರಿಸಿದೆ. ಅಂದಾಜಿನ ಪ್ರಕಾರ ಒಟ್ಟು 5 ಸಾವಿರ ಎಕ್ರೆ ತೋಟ ನಾಶವಾಗಿದೆ. ಪುತ್ತೂರು ತಾಲೂಕಿನ ಕೆಲವು ಗ್ರಾಮಗಳ ತೋಟಗಳಲ್ಲಿ ಹಳದಿ ರೋಗದ ಲಕ್ಷಣ ಕಂಡು ಬಂದಿದೆ. ರೋಗ ಏನು ಅನ್ನುವ ಬಗ್ಗೆ ಇನ್ನು ಖಚಿತ ಉತ್ತರ ಬಂದಿಲ್ಲ. ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅವರಿಂದಲೂ ರೋಗ ಅಥವಾ ನಿಯಂತ್ರಣಕ್ಕೆ ಬೇಕಾದ ಔಷಧ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಕಾಂಡದಲ್ಲಿ ಬೇರು ಹುಳ ರೋಗ ಕಾಣಿಸಿಕೊಂಡ ಸಂದರ್ಭದಲ್ಲಿ ಮೈಸೂರಿನಿಂದ ವಿಜ್ಞಾನಿಗಳು ಬಂದು ಪರಿಶೀಲಿಸಿ¨ªಾರೆ. ಅವರಿಂದಲೂ ಉತ್ತರ ಸಿಗಲಿಲ್ಲ.
ಬೆಳೆಯೂ ಇಲ್ಲ, ಪರಿಹಾರವೂ ಇಲ್ಲ :
ಹಳೆ ಅಡಿಕೆ ಮರ ಕಡಿದು ಹೊಸ ಗಿಡ ನಾಟಿ ಮಾಡಿದರೂ ಅದರಿಂದ ಪ್ರಯೋಜನ ಸಿಕ್ಕಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಅಡಿಕೆ ಗಿಡ ಬೆಳವಣಿಗೆ ಕಂಡಿಲ್ಲ. ಇನ್ನು ಈ ರೋಗದಿಂದ ಕೃಷಿ ನಾಶಗೊಂಡಿದ್ದಕ್ಕೆ ಪರಿಹಾರ ಕೊಡಿ ಎಂದು ರೈತರು ವಿವಿಧ ಇಲಾಖೆ, ಸರಕಾರಗಳಿಗೆ ಬೇಡಿಕೆ ಇಟ್ಟಿದ್ದರೂ ಪರಿಹಾರ ಸಿಕ್ಕಿಲ್ಲ. ಇದರ ಮಧ್ಯೆ ಜೀವನ ನಿರ್ವಹಣೆಗಾಗಿ ಕೆಲವು ರೈತರು, ಪರ್ಯಾಯ ಬೆಳೆಯತ್ತ ಚಿಂತನೆ ನಡೆಸಿ, ತಾಳೆಬೆಳೆಯನ್ನು ನಾಟಿ ಮಾಡಿದ್ದಾರೆ.
ಸಚಿವೆ ಮೇಲಿದೆ ನಿರೀಕ್ಷೆ : ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 3 ಸಾವಿರ ಹೆಕ್ಟೇರಿಗಿಂತಲೂ ಅಧಿಕ ತೋಟ ಹಳದಿ ರೋಗದಿಂದ ನಾಶ ಹೊಂದಿದ್ದು, ರೈತರಿಗೆ ಎಕ್ರೆಗೆ 10 ಲಕ್ಷ ರೂ. ಪರಿಹಾರ ನೀಡಬೇಕು. 25 ಕೋ.ರೂ.ಪ್ಯಾಕೇಜ್ ಘೋಷಿಸಬೇಕು ಎಂಬಿತ್ಯಾದಿ ಬೇಡಿಕೆಗಳಿದ್ದು ಕೇಂದ್ರ ಕೃಷಿ ಸಚಿವೆ ಸುಳ್ಯ, ಪುತ್ತೂರು ಭಾಗದ ಕೃಷಿಕರ ಧ್ವನಿಯಾಗಿ ಇದಕ್ಕೊಂದು ಪರಿಹಾರ ಒದಗಿಸುತ್ತಾರೋ ಎಂದು ರೈತರು ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!
ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.