ಕೃಷಿಕನ ಬಾಳು ಹಸನಾದರೆ ದೇಶಾಭಿವೃದ್ಧಿ ಸಾಧ್ಯ
ಕಡಬ ಹೋಬಳಿ ಸಮಗ್ರ ಕೃಷಿ ಅಭಿಯಾನ ಉದ್ಘಾಟಿಸಿ ಪಿ.ಪಿ. ವರ್ಗೀಸ್
Team Udayavani, Aug 27, 2019, 5:48 AM IST
ಕಡಬ: ನಮ್ಮ ದೇಶ ಕೃಷಿ ಪ್ರಧಾನವಾದ ದೇಶ. ದೇಶದ ಬೆನ್ನೆಲುಬಾಗಿರುವ ಕೃಷಿಕನ ಬಾಳು ಹಸನಾದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕಡಬ ಜಿ.ಪಂ. ಕ್ಷೇತ್ರದ ಸದಸ್ಯ ಪಿ.ಪಿ. ವರ್ಗೀಸ್ ಅಭಿಪ್ರಾಯಪಟ್ಟರು.
ಅವರು ದ.ಕ. ಜಿ.ಪಂ. ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ಆಯೋಜಿ ಸಲಾಗಿರುವ ಕಡಬ ಹೋಬಳಿ ಸಮಗ್ರ ಕೃಷಿ ಅಭಿಯಾನ ಕಾರ್ಯ ಕ್ರಮವನ್ನು ಕಡಬದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಉದ್ಘಾಟನೆ ಮಾಡಿ ಮಾತನಾಡಿದರು.
ಯುವ ಸಮುದಾಯ ಆಸಕ್ತಿ ವಹಿಸಲಿ
ಸರಕಾರಗಳು ಕೃಷಿಗೆ ಸಾಕಷ್ಟು ಒತ್ತು ನೀಡುವ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ ಧಾರಣೆ ಕುಸಿತ, ಪ್ರಾಕೃತಿಕ ವಿಕೋಪಗಳಿಂದ ಕೃಷಿ ಹಾನಿ, ಕಾರ್ಮಿಕರ ಸಮಸ್ಯೆ ಮುಂತಾದ ಕಾರಣಗಳಿಂದಾಗಿ ಕೃಷಿಕರಿಗೆ ಸಂಕಷ್ಟ ತಪ್ಪಿಲ್ಲ. ಸರಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಉಪಯೋಗಿಸಿ ಆಧುನಿಕ ಯಂತ್ರೋಪಕರಣಗಳನ್ನು ಬಳಸಿಕೊಂಡು ವೈಜ್ಞಾನಿಕ ರೀತಿಯಲ್ಲಿ ವ್ಯವಸ್ಥಿತ ಕೃಷಿ ಮಾಡಿದಾಗ ಕೃಷಿಕರು ಉತ್ತಮ ಫಲಸನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯ. ಯುವ ಸಮುದಾಯ ಹೆಚ್ಚಿನ ಆಸಕ್ತಿ ವಹಿಸಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸರಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕಿದೆ ಎಂದರು.
ಕೃಷಿಕರ ಬಳಿಗೆ ಇಲಾಖೆ
ತಾಲೂಕು ಪಂಚಾಯತ್ ಸದಸ್ಯ ಫಝಲ್ ಕೋಡಿಂಬಾಳ ಮಾತನಾಡಿ, ಸರಕಾರವು ಕೃಷಿ ಇಲಾಖೆಯ ಮೂಲಕ ಗ್ರಾಮಗಳಿಗೆ ತೆರಳಿ ಕೃಷಿಕರ ಬಳಿಗೆ ಬರುತ್ತಿದೆ. ಈ ಅವಕಾಶಗಳನ್ನು ನಾವು ಸಮರ್ಪಕವಾಗಿ ಬಳಸಿಕೊಂಡು ಕೃಷಿಯ ಬಗೆಗಿನ ಹೊಸ ಹೊಸ ಸಂಶೋಧನೆಗಳ ಪ್ರಯೋಜನ ಪಡೆದು ಲಾಭದಾಯ ಕೃಷಿ ಮಾಡಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದರು.
ತಾ.ಪಂ. ಸದಸ್ಯ ಗಣೇಶ್ ಕೈಕುರೆ ಮಣ್ಣು ಪರೀಕ್ಷೆಯ ಕಾರ್ಡ್‌ಗಳನ್ನು ವಿತರಿಸಿ ಶುಭಹಾರೈಸಿದರು. ಎಪಿಎಂಸಿ ನಿರ್ದೇಶಕ ಕೊರಗಪ್ಪ ಅವರು ಸರಕಾರದ ಸಬ್ಸಿಡಿಯ ಕೃಷಿ ಯಂತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು.
ಕಡಬ ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ ಅಧ್ಯಕ್ಷತೆ ವಹಿಸಿದ್ದರು. ಕಡಬ ಗ್ರಾ.ಪಂ. ಸದಸ್ಯರಾದ ಕೆ.ಎಂ. ಹನೀಫ್ ಹಾಗೂ ಅಶ್ರಫ್ ಶೇಡಿಗುಂಡಿ ಶುಭ ಹಾರೈಸಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ| ರಶ್ಮಿ, ತೋಟಗಾರಿಕ ಇಲಾಖೆಯ ಉಪ ನಿರ್ದೇಶಕಿ ರೇಖಾ, ಗ್ರಾ.ಪಂ. ಉಪಾಧ್ಯಕ್ಷೆ ಜ್ಯೋತಿ ಡಿ. ಕೋಲ್ಪೆ, ಸದಸ್ಯರಾದ ರೇವತಿ, ಶಾಲಿನಿ ಸತೀಶ್, ನೀಲಾವತಿ ಶಿವರಾಂ, ಮಾಧವ ಕೊಪ್ಪ, ಆದಂ ಕುಂಡೋಳಿ, ಸುಶೀಲಾ, ಇಂದಿರಾ ಕೃಷ್ಣಪ್ಪ, ಸರೋಜಿನಿ ಆಚಾರ್ಯ, ನೇತ್ರಾ, ಎ.ಎಸ್. ಶರೀಫ್ ಉಪಸ್ಥಿತರಿದ್ದರು.
ತಾಂತ್ರಿಕ ಕೃಷಿ ಅಧಿಕಾರಿ ಪದ್ಮನಾಭ ಶೆಟ್ಟಿ ಸ್ವಾಗತಿಸಿ, ಸಹಾಯಕ ಕೃಷಿ ನಿರ್ದೇಶಕ ರಂಜನ್ ಶೆಣೈ ಪ್ರಸ್ತಾವನೆ ಗೈದರು. ರಾಕೇಶ್ ರೈ ಕೆಡೆಂಜಿ ನಿರೂಪಿಸಿ, ಕಡಬ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ತಿಮ್ಮಪ್ಪ ಗೌಡ ವಂದಿಸಿ ದರು. ಬಳಿಕ ಕೃಷಿಕರೊಂದಿಗೆ ಸಂವಾದ ಜರಗಿತು. ಡಾ| ರಶ್ಮಿ, ತೋಟಗಾರಿಕ ಇಲಾಖೆಯ ಉಪನಿರ್ದೇಶಕಿ ರೇಖಾ, ಪಶು ಸಂಗೋಪನ ಇಲಾಖೆಯ ಡಾ| ಅಜಿತ್, ಕೃಷಿ ಅಧಿಕಾರಿ ಯಶಸ್ ಮಂಜುನಾಥ್ ಮಾಹಿತಿ ನೀಡಿದರು.
ರೈತರಿಗೆ ಗುರುತಿನ ಚೀಟಿ
ಪುತ್ತೂರು ಉಪ ವಿಭಾಗದ ಉಪ ಕೃಷಿ ನಿರ್ದೇಶಕ ಡಾ| ಶಿವಶಂಕರ್ ದಾನೆಗೊಂಡರ್ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಿ ಕೃಷಿಕರ ಆರ್ಥಿಕ ಸ್ಥಿತಿ ಸುಧಾರಿಸಬೇಕೆನ್ನುವುದು ಸರಕಾರದ ಗುರಿ. ಕೃಷಿ ಭೂಮಿಯ ಮಣ್ಣು ಪರೀಕ್ಷೆ, ಪ್ರೋತ್ಸಾಹ ಧನಗಳು, ವೈಜ್ಞಾನಿಕ ನೆರವು, ಕಡಿಮೆ ಬಾಡಿಗೆ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡುತ್ತಿದ್ದು, ಕೃಷಿಕರು ಅವುಗಳ ಸದುಪಯೋಗ ಪಡೆಯಬೇಕು. ಸರಕಾರದ ಸವಲತ್ತುಗಳಿಗಾಗಿ ಕೃಷಿಕರು ಪದೇ ಪದೇ ದಾಖಲೆಗಳನ್ನು ಕೃಷಿ ಕಚೇರಿಗಳಿಗೆ ಸಲ್ಲಿಸುವುದನ್ನು ತಪ್ಪಿಸುವ ಸಲುವಾಗಿ ಸರಕಾರವು ರೈತರಿಗೆ ಗುರುತಿನ ಚೀಟಿಗಳನ್ನು ನೀಡುವ ಉದ್ದೇಶ ಇರಿಸಿಕೊಂಡಿದ್ದು, ಅದಕ್ಕಾಗಿ ಮಾಹಿತಿಗಳನ್ನು ದಾಖಲಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.