Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
ಸ್ವರ್ಣ ಪಲ್ಲಕ್ಕಿಯಲ್ಲಿ ಮಂಜುನಾಥ ಸ್ವಾಮಿ ವಿರಾಜಮಾನ
Team Udayavani, Nov 29, 2024, 12:33 AM IST
ಬೆಳ್ತಂಗಡಿ: ಲಕ್ಷದೀಪೋತ್ಸವದ ಎರಡನೇ ದಿನವಾದ ಬುಧವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಕೆರೆಕಟ್ಟೆ ಉತ್ಸವವು ವಿಜೃಂಭಣೆಯಿಂದ ನೆರವೇರಿತು.
ಭಗವಾನ್ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ವಿವಿಧ ವೈದಿಕ ಕ್ರಮಗಳೊಂದಿಗೆ ಉತ್ಸವ ಮೂರ್ತಿಯನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ವಿರಾಜಮಾನಗೊಳಿಸಿ ದೇವಾಲಯಕ್ಕೆ 16 ಪ್ರದಕ್ಷಿಣೆ ಬರಲಾಯಿತು. ಸಂಗೀತ, ಚೆಂಡೆ, ಶಂಖ ಸಹಿತ ಸರ್ವವಾದ್ಯಗಳ ಪ್ರದಕ್ಷಿಣೆ ಸೇವೆಯನ್ನು ಮಂಜುನಾಥನಿಗೆ ಸಲ್ಲಿಸಲಾಯಿತು.
ಬಳಿಕ ದೇವಾಲಯದ ಹೊರಾಂಗಣದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವರನ್ನು ವಿಹಾರಕ್ಕೆ ಕೊಂಡೊಯ್ಯಲಾಯಿತು. ಭಕ್ತರ ಭಕ್ತಿಯ ಉದ್ಘೋಷದೊಂದಿಗೆ ಮಂಗಳವಾದ್ಯಗಳ ಸಹಿತ ದೇವರನ್ನು ಕೆರೆಕಟ್ಟೆಗೆ ಕರೆತಂದು 5 ಪ್ರದಕ್ಷಿಣೆ ಹಾಕಿ ಪೂಜೆ ಸಲ್ಲಿಸಲಾಯಿತು. ದೇವಾಲಯದ ಆನೆಗಳಾದ ಲಕ್ಷಿ$¾à, ಶಿವಾನಿ ಮತ್ತು ಬಸವ ಭೀಷ್ಮನು ಭಕ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದಿತು. ಕೆರೆಕಟ್ಟೆಯಲ್ಲಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಬೆಳ್ಳಿರಥದಲ್ಲಿ ಕುಳ್ಳಿರಿಸಿ ದೇವಾಲಯಕ್ಕೆ ಒಂದು ಸುತ್ತು ಬರಲಾಯಿತು. ನೆರೆದಿದ್ದ ಭಕ್ತರು ಮಂಜುನಾಥನ ಸ್ವಾಮಿಯ ರಥ ಎಳೆದು ಕೃತಾರ್ಥರಾದರು. ದೇವರು ದೇವಾಲಯ ಪ್ರವೇಶಿಸುವ ಮೂಲಕ ಉತ್ಸವ ಸಂಪನ್ನಗೊಂಡಿತು.
ಶುಕ್ರವಾರ ಸರ್ವಧರ್ಮ ಸಮ್ಮೇಳನ
ನ.29 (ಇಂದು) ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನವನ್ನು ಗೃಹ ಸಚಿವ ಡಾ| ಜಿ. ಪರಮೇಶ್ವರ ಉದ್ಘಾಟಿಸುವರು. ಬೆಂಗಳೂರಿನ ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಡಾ| ಜಿ.ಬಿ. ಹರೀಶ್, ಡಾ| ಜೋಸೆಫ್, ಎನ್.ಎಂ. ಮತ್ತು ಬಿಜಾಪುರದ ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಧಾರ್ಮಿಕ ಉಪನ್ಯಾಸ ನೀಡುವರು.
ನ.30ರಂದು ಸಾಹಿತ್ಯ ಸಮ್ಮೇಳನ
ಸಾಹಿತ್ಯ ಸಮ್ಮೇಳನದ 92 ನೇ ಅಧಿವೇಶನವನ್ನು ನಾಳೆ ನ.30ರಂದು ಸಂಜೆ 5ಕ್ಕೆ ಬಹುಶ್ರುತ ವಿದ್ವಾಂಸ ಶತಾವಧಾನಿ ಆರ್.ಗಣೇಶ್ ಉದ್ಘಾಟಿಸುವರು. ಖ್ಯಾತ ಲೇಖಕ ಉಡುಪಿಯ ಪಾದೆಕಲ್ಲು ವಿಷ್ಣು ಭಟ್ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ| ಪ್ರಮೀಳಾ ಮಾಧವ, ಮೈಸೂರಿನ ಡಾ| ಬಿ.ವಿ. ವಸಂತಕುಮಾರ್ ಮತ್ತು ಪ್ರೊ| ಮೊರಬದ ಮಲ್ಲಿಕಾರ್ಜುನ ಉಪನ್ಯಾಸ ನೀಡುವರು.
ರಾಜೇಶ್ ಕೃಷ್ಣನ್ ಸಂಗೀತ ಸಂಜೆ
ಅಮೃತವರ್ಷಿಣಿ ವೇದಿಕೆಯಲ್ಲಿ ರಾತ್ರಿ 8.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಸಂಜೆ ನೆರವೇರಲಿದೆ.
ಲಕ್ಷದೀಪೋತ್ಸವ ಸಂಪನ್ನ
ನ.30ರಂದು ರಾತ್ರಿ 12 ಗಂಟೆ ಬಳಿಕ (ಗೌರಿಮಾರುಕಟ್ಟೆ ಉತ್ಸವ) ನಡೆಯಲಿದ್ದು, ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತರು ಆಗಮಿಸಿ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಈ ವೇಳೆ ನೂರಾರು ಜಾನಪದ ಕಲಾವಿದರ ಕಲಾಸೇವೆ ಇರಲಿದ್ದು ಕೊಂಬು, ಕಹಳೆ, ಜಾಗಟೆ, ಶಂಖ, ಸಣ್ಣಾಟ ಮೊದಲಾದ ಜಾನಪದ ಕಲಾವಿದರು ರಾತ್ರಿ ಪೂರ್ತಿ ಜಾಗರಣೆಯೊಂದಿಗೆ ಶ್ರೀ ಸ್ವಾಮಿಗೆ ಕಲಾಸೇವೆ ಅರ್ಪಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.