ಗುಡ್ಡದಲ್ಲಿ ಗುಂಡಿ ತೆಗೆಯುವಾಗ ಪ್ರಾಚೀನ ಗುಹೆ, ಪರಿಕರ ಪತ್ತೆ
Team Udayavani, Aug 27, 2022, 6:20 AM IST
ಸುಳ್ಯ: ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆಯಾಕಾರ ಪತ್ತೆಯಾಗಿ ಅದರಲ್ಲಿ ಪ್ರಾಚೀನ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ.
ಕಲ್ಲೆಂಬಿ ವಿಶ್ವನಾಥ ಗೌಡ ಅವರ ಜಮೀನಿನಲ್ಲಿ ಪರಿಕರಗಳು ಪತ್ತೆಯಾಗಿವೆ. ಅಡಿಕೆ ತೋಟ ಮಾಡುವ ಉದ್ದೇಶದಿಂದ ಗುಂಡಿ ತೆಗೆಯುವಾಗ ಈ ಘಟನೆ ಬೆಳಕಿಗೆ ಬಂದಿದೆ.
ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿವೆ. ವಿಶೇಷ ರೀತಿಯ ಗುಹೆಯಲ್ಲಿ ಎರಡು ಅಂತರದ ಕೋಣೆಗಳಿರುವಂತೆ ಕಂಡುಬಂದಿದೆ.
ಪರಿಕರ ಅಧ್ಯಯನ ಹಂತದಲ್ಲಿ ಹಿಂದಿನ ಕಾಲದಲ್ಲಿ ಉದ್ದೇಶಪೂರ್ವಕವಾಗಿ ಸಣ್ಣ ಮಾದರಿಯ ಗುಹೆ ತೋಡಿ ಪರಿಕರಗಳನ್ನು ಇದರಲ್ಲಿ ಹೂತು ಮುಚ್ಚಿರಬಹುದೇ ಎಂಬ ಮಾತು ಸ್ಥಳೀಯವಾಗಿದೆ.
ಇದನ್ನೂ ಓದಿ :ಕಾಂಗ್ರೆಸ್ ಗೆ ಗುಡ್ ಬೈ; ಜಮ್ಮು-ಕಾಶ್ಮೀರದಲ್ಲಿ ಆಜಾದ್ ಹೊಸ ಪಕ್ಷ ಸ್ಥಾಪನೆ: ವರದಿ
ಉಡುಪಿಯ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚ್ಯವಸ್ತು ಸಂಶೋಧಕ ಪ್ರೊ| ಟಿ. ಮುರುಗೇಶಿ ಅವರು ಸ್ಥಳಕ್ಕೆ ಆಗಮಿಸಿ ಪರಿಕರಗಳನ್ನು ಸಂಗ್ರಹಿಸಿ, ಅಧ್ಯಯನ ನಡೆಸುತ್ತಿದ್ದಾರೆ. ಈಗಾಗಲೇ ಪರಿಕರಗಳನ್ನು ತೊಳೆದು ಸ್ವಚ್ಛಗೊಳಿಸಿದ್ದೇವೆ.
2-3 ದಿನಗಳಲ್ಲಿ ಇದರ ಬಗ್ಗೆ ಮಾಹಿತಿ ನೀಡುವುದಾಗಿ ಅವರು ಉದಯವಾಣಿಗೆ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.