Dharmasthala, ಕಡಿರುದ್ಯಾವರದಲ್ಲಿ ಕಾಡಾನೆ ಹಿಂಡು; ಅಪಾರ ಪ್ರಮಾಣದ ಅಡಿಕೆ ಗಿಡ, ಮರ ಧ್ವಂಸ


Team Udayavani, Dec 6, 2023, 11:27 PM IST

Dharmasthala, ಕಡಿರುದ್ಯಾವರದಲ್ಲಿ ಕಾಡಾನೆ ಹಿಂಡು; ಅಪಾರ ಪ್ರಮಾಣದ ಅಡಿಕೆ ಗಿಡ, ಮರ ಧ್ವಂಸ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಪಣಿಕ್ಕಲ್ಲು ಹಾಗೂ ಧರ್ಮಸ್ಥಳ ಗ್ರಾಮದ ಬೊಳಿಯಾರಿನ ತೋಟಕ್ಕೆ ಮಂಗಳವಾರ ತಡರಾತ್ರಿ ಕಾಡಾನೆಗಳು ದಾಳಿ ನಡೆಸಿ ಅನೇಕ ಅಡಿಕೆ ಗಿಡಗಳನ್ನು ಧ್ವಂಸಗೊಂಡಿವೆ.

ಪಣಿಕಲ್ಲಿನ ರಾಘವೇಂದ್ರ ಪಟವರ್ಧನ್‌ ಅವರ ತೋಟಕ್ಕೆ ರಾತ್ರಿ 12ರ ಬಳಿಕ ಕಾಡಾನೆಗಳು ಪ್ರವೇಶಿಸಿವೆ. ತತ್‌ಕ್ಷಣ ಮನೆಯವರ ಗಮನಕ್ಕೆ ಬಂದಿದ್ದು ಅವರು ಪರಿಸರದ ಮಂದಿಗೆ ವಿಚಾರ ತಿಳಿಸಿ ಪಟಾಕಿ ಸಿಡಿಸಿ ಹಿಂಡನ್ನು ಕಾಡಿಗೆ ಅಟ್ಟಲು ಪ್ರಯತ್ನಿಸಿದರು. ಅಷ್ಟರಲ್ಲೇ ಆನೆಗಳು ಹತ್ತಕ್ಕಿಂತ ಅಧಿಕ ಅಡಿಕೆ ಮರಗಳನ್ನು ಮುರಿದು ಹಾಕಿದ್ದವು.

ರಾಘವೇಂದ್ರ ಪಟವರ್ಧನ್‌ ಅವರ ತೋಟಕ್ಕೆ ಕಳೆದ ಒಂದು ತಿಂಗಳಲ್ಲಿ ಮೂರನೇ ಬಾರಿ ಕಾಡಾನೆಗಳು ದಾಳಿ ನಡೆಸಿದ್ದರಿಂದ 100ಕ್ಕಿಂತ ಅಧಿಕ ಅಡಿಕೆ ಮರ, ಹತ್ತಾರು ತೆಂಗಿನ ಮರ, ಬಾಳೆ ಕೃಷಿ ನಾಶವಾಗಿದೆ.

6ಕ್ಕಿಂತ ಅಧಿಕ ಆನೆಗಳು
ಸೋಮವಾರ ಕಂಡುಬಂದ ಹಿಂಡಿನಲ್ಲಿ 6ಕ್ಕಿಂತ ಅಧಿಕ ಆನೆಗಳಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ರಾತ್ರಿ ಚಾರ್ಮಾಡಿ ಕಡೆಯಿಂದ ಆಗಮಿಸಿದ ಆನೆಗಳು ಮತ್ತೆ ಚಾರ್ಮಾಡಿ ಅರಣ್ಯದತ್ತ ಹೋಗಿವೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧರ್ಮಸ್ಥಳ ಗ್ರಾಮದ ಬೊಳಿಯಾರು ಪರಿಸರದಲ್ಲಿ ಮರಿಯಾನೆ ಸಹಿತ ಮೂರು ಕಾಡಾನೆಗಳು ಎರಡು ಮೂರು ದಿನಗಳಿಂದ ಸಂಚರಿಸುತ್ತಿದ್ದು, ತೋಟಗಳಿಗೆ ಇಳಿದು ಹಾನಿ ಮಾಡಿವೆ. ಸೋಮವಾರ ರಾತ್ರಿಯ ವೇಳೆ ಆನೆಗಳು ಪೆರಿಯಶಾಂತಿ ಹೆದ್ದಾರಿಯಲ್ಲಿ ನಿಂತಿದ್ದವು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಜನರಲ್ಲಿ ಆತಂಕ
ಒಂದು ವಾರದಿಂದ ತಾಲೂಕಿನಲ್ಲಿ ಕಾಡಾನೆಗಳ ಸಂಚಾರ ವಿಪರೀತವಾಗಿದ್ದು, ಚಾರ್ಮಾಡಿ ಹಾಗೂ ಸುತ್ತಮುತ್ತಲ ಗ್ರಾಮಗಳ ಜನರಲ್ಲಿ ಭೀತಿ ಮೂಡಿಸಿದೆ. ರಾತ್ರಿಯಾದರೆ ಜನರು ಮನೆಗಳಿಂದ ಹೊರಬರಲು ಭಯಪಡುತ್ತಿದ್ದಾರೆ.

ತೋಟದಲ್ಲಿದ್ದ ದನ ಕಾಡಾನೆಗೆ ಬಲಿ
ಕಡಬ/ಸುಬ್ರಹ್ಮಣ್ಯ: ತೋಟದಲ್ಲಿದ್ದ ದನವೊಂದು ಕಾಡಾನೆ ದಾಳಿ ಯಿಂದ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಕೊಣಾಜೆಯಲ್ಲಿ ಸಂಭವಿಸಿದೆ.

ಸಿಆರ್‌ಸಿ ಕಾಲನಿ ಬಳಿಯ ಕೊಣಾಜೆ ದೊಡ್ಡಮನೆಯ ಅಶೋಕ ಅವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು ಸಂಜೆ ಮನೆಯ ವರಿಗೆ ಸಿಕ್ಕಿರಲಿಲ್ಲ. ಬುಧವಾರ ಬೆಳಗ್ಗೆ ಹುಡುಕಾಡಿದಾಗ ತೋಟದಲ್ಲಿ ಗಾಯ
ಗೊಂಡು ಸತ್ತು ಬಿದ್ದಿರುವುದು ಕಂಡುಬಂದಿತು. ತೋಟದಲ್ಲಿ ಪೈಪ್‌ಗಳಗೂ ಹಾನಿಯಾಗಿದೆ. ರಾತ್ರಿ ವೇಳೆ ಕಾಡಾನೆ
ಸಾಗುವಾಗಿ ದನಕ್ಕೆ ಎಡವಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಡಾನೆ ದಾಳಿ ವೇಳೆ ಹೃದಯಾಘಾತದಿಂದ ದನ ಸಾವನ್ನಪ್ಪಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಕಂಡು ಬಂದಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.