ಧರ್ಮಸ್ಥಳ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ ಯುವಕ

Team Udayavani, Sep 29, 2022, 1:03 AM IST

ಧರ್ಮಸ್ಥಳ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ ಯುವಕ

ಬೆಳ್ತಂಗಡಿ: ಹಾಸನ ಜಿಲ್ಲೆಯ ಅರಕಲಗೂಡಿನ ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್‌ ಪುರದ ನಿವಾಸಿ ಸುನಿಲ್‌ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ದೇವರ ದರ್ಶನ ಮುಗಿಸಿ ಮಧ್ಯಾಹ್ನದ ಅನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ವಿಷ ಪದಾರ್ಥ ಕುಡಿಯುತ್ತಾ ತನ್ನ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ, ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದರು.

ತತ್‌ಕ್ಷಣ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಅನಿಲ್‌ ಕುಮಾರ್‌ ಮತ್ತು ಸಿಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್‌ನನ್ನು ಪತ್ತೆ ಮಾಡಿದ್ದರು. ಉಜಿರೆ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದಾರೆ.

ದಂಪತಿ ಕಲಹ ಕಾರಣ?
ಸುನಿಲ್‌ ಊರಿನಲ್ಲಿ ಪಾದರಕ್ಷೆಯ ಮಳಿಗೆಯನ್ನು ಹೊಂದಿದ್ದು, ಮದುವೆ ಯಾಗಿ ಮೂರು ತಿಂಗಳ ಮಗು ಕೂಡ ಇದೆ. ದಂಪತಿ ನಡುವೆ ಉಂಟಾದ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನಿಸಿ ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

4

Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಕಸದ ತೊಟ್ಟಿಯಾದ ಕನ್ನಡ ಕುಮೇರು ರಸ್ತೆ

2

Sullia: ಬೆಳ್ಳಾರೆ-ದರ್ಖಾಸು ರಸ್ತೆ; ವಿಸ್ತರಣೆ ಸಹಿತ ಅಭಿವೃದ್ಧಿ ಆರಂಭ

1

Bantwal: ಫರಂಗಿಪೇಟೆ; ಬೇಕು ಸುರಕ್ಷಿತ ಸಂಚಾರ ವ್ಯವಸ್ಥೆ

8-tollgate-1

Video Viral; ಬ್ರಹ್ಮರಕೂಟ್ಲು: ಲಾರಿ ಚಾಲಕ- ಟೋಲ್ ಸಿಬಂದಿ ಗಲಾಟೆ

4

ಗಮನ ಸೆಳೆಯುತ್ತಿದೆ ಪೆರುವಾಜೆ ಜಲದುರ್ಗೆ ಸಾಗುವ ರಥಬೀದಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.