ಧರ್ಮಸ್ಥಳ ಲಕ್ಷದೀಪೋತ್ಸವ ಸಂಪನ್ನ
Team Udayavani, Dec 15, 2020, 11:22 PM IST
ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಗೌರಿಮಾರುಕಟ್ಟೆ ಉತ್ಸವದ ಮೆರುಗು.
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸೋಮವಾರ ರಾತ್ರಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಆಗಮಿಸಿದ ಭಕ್ತರು ಉತ್ಸವವನ್ನು ವೀಕ್ಷಿಸಿದರು. ಶಂಖ, ಜಾಗಟೆ, ಕೊಂಬು, ಕಹಳೆ, ವೀರಗಾಸೆ ಮೊದಲಾದ ಸಹಸ್ರಾರು ಜಾನಪದ ಕಲಾವಿದರು ಕಲಾಸೇವೆಯನ್ನು ಅರ್ಪಿಸಿದರು.
ಬೆಂಗಳೂರಿನ ಭಕ್ತರು ಸ್ವಯಂ ಸೇವಕರಾಗಿ ರಾತ್ರಿ ಅನ್ನದಾನದ ವ್ಯವಸ್ಥೆ ಮಾಡಿದರು. ಡಿ. 10ರಿಂದ 14ರ ವರೆಗೆ
ಲಕ್ಷದೀಪೋತ್ಸವದ ಎಲ್ಲ ಕಾರ್ಯಕ್ರಮಗಳು ಸುಗಮವಾಗಿ, ಸರಳವಾಗಿ ನಡೆದವು. ಕೊರೊನಾ ಕುರಿತು ಸರಕಾರದ ಮಾರ್ಗದರ್ಶಿ ನಿಯಮಗಳನ್ನು ಎಲ್ಲೆಡೆ ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು.
ಎಲ್ಲ ಕಾರ್ಯಕ್ರಮಗಳನ್ನು ಸರಳವಾಗಿ ಆಯೋಜಿಸಿದ್ದು, ಪ್ರತ್ಯಕ್ಷವಾಗಿ ಸೀಮಿತ ಸಂಖ್ಯೆಯ ಜನರು ಭಾಗ
ವಹಿಸಿದ್ದರೂ ಲಕ್ಷಾಂತರ ಮಂದಿ ಮನೆಯಲ್ಲೇ ಕುಳಿತು ಯುಟ್ಯೂಬ್ ಮತ್ತು ಫೇಸ್‌ಬುಕ್‌ನಲ್ಲಿ ಕಾರ್ಯ ಕ್ರಮಗಳನ್ನು ವೀಕ್ಷಿಸಿದರು.
ಗೌರಿ ಮಾರುಕಟ್ಟೆ ಉತ್ಸವ
ಸೋಮವಾರ ರಾತ್ರಿ ನಡೆದ ಶ್ರೀಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವದ ಗೌರಿ ಮಾರುಕಟ್ಟೆ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಸಾಕ್ಷಿಯಾದರು. ದೇವಸ್ಥಾನ ಬಳಿಯಿಂದ ಕ್ಷೇತ್ರದ ಮುಖ್ಯದ್ವಾರದ ಬಳಿ ಇರುವ ಗೌರಿ ಮಾರುಕಟ್ಟೆಗೆ ಶ್ರೀ ಮಂಜುನಾಥ ಸ್ವಾಮಿಯನ್ನು ಬೆಳ್ಳಿಯ ರಥದಲ್ಲಿ ಕುಳ್ಳಿರಿಸಿ ಮೆರವಣಿಗೆಯಲ್ಲಿ ಕರೆತರಲಾಯಿತು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬಸ್ಥರು, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಪಾಲ್ಗೊಂಡರು.
ಸಮವಸರಣ ಪೂಜೆ
ಧರ್ಮಸ್ಥಳದಲ್ಲಿ ಮಂಗಳವಾರ ಸಂಜೆ ಗಂಟೆ 6ರಿಂದ ಸಮವಸರಣ ಪೂಜೆ ನಡೆಯಿತು. ಅಷ್ಟವಿಧಾರ್ಚನೆ ಪೂಜೆ, ಪಂಚನಮಸ್ಕಾರ ಮಂತ್ರ ಪಠಣ, ಜಿನಭಕ್ತಿ ಗೀತೆಗಳ ಗಾಯನ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.