Dharmasthala; ಯಾತ್ರಾರ್ಥಿಗಳ ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ
ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ
Team Udayavani, Aug 28, 2023, 6:47 PM IST
ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಗದಗ ಮೂಲದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ (38) ಎಂಬವರು ಆ.26 ರಂದು ಬೆಳಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತಮ್ಮ ಕಾರಿನಲ್ಲಿ ಬಂದಿದ್ದರು. ಕಾರನ್ನು ಲಾಕ್ ಮಾಡಿ ದೇವಸ್ಥಾನದ ಹತ್ತಿರ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಕೃತ್ಯವಾಗಿದೆ.
ದರುಶನ ಮುಗಿಸಿ ಹಿಂತಿರುಗಿದ ವೇಳೆ ನಿಲ್ಲಿಸಿದ್ದ ಕಾರಿನ ಗ್ರಾಸನ್ನು ಯಾರೋ ಕಳ್ಳರು ಒಡೆದು ಅದರಲ್ಲಿದ್ದ ವಸ್ತುಗಳನ್ನು ಕಳವುಗೈದಿದ್ದಾರೆ. ಕಾರಿನಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ 40 ಗ್ರಾಂ. ತೂಕದ ಮಾಂಗಲ್ಯ ಸರ ಅಂದಾಜು ಮೌಲ್ಯ 1,96,000 ರೂ. ಮತ್ತು 1 ಮೊಬೈಲ್ ಮೊಬೈಲ್ ಅಂದಾಜು ಮೌಲ್ಯ 4,000 ರೂ. ಇನ್ನು ಕಳವವಾದ ವಸ್ತುಗಳ ಒಟ್ಟು ಮೌಲ್ಯ 2,00,000 ರೂ. ಆಗಿರಬಹುದು ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.