Dharmasthala ಗ್ರಾಮಾಭಿವೃದ್ಧಿ ಯೋಜನೆ; ರಾಜ್ಯಾದ್ಯಂತ 16,529 ಶ್ರದ್ಧಾ ಕೇಂದ್ರಗಳ ಸ್ವಚ್ಛತೆ
Team Udayavani, Jan 10, 2024, 1:30 AM IST
ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾ ಕೇಂದ್ರಗಳು ಗ್ರಾಮಗಳ ಪ್ರಮುಖ ಭಾಗವಾಗಿದ್ದು ಇವುಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಪರಿಸರ ಸ್ವಚ್ಛತಾ ಮನೋಭಾವವು ಸಾರ್ವತ್ರಿಕವಾಗಿರುತ್ತ ದೆ ಎಂಬ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಚಿಂತನೆ ಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ರಾಜ್ಯಾದ್ಯಂತ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನ ಈ ವರ್ಷವೂ ಆರಂಭಿಸಲಾಗಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.
ವಷìದಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ಮಕರ ಸಂಕ್ರಾಂತಿ ಸಂದರ್ಭ ಸಪ್ತಾಹದ ಮೂಲಕ ಸ್ವಯಂ ಸೇವಕರು ಶ್ರದ್ಧಾ ಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ, ಚರ್ಚ್‌ಗಳ ಸ್ವಚ್ಛತೆಯನ್ನು ಕೈಗೊಳ್ಳಲಿದ್ದಾರೆ. ಈ ಬಾರಿ ಮಕರ ಸಂಕ್ರಾತಿಗಿಂತ ಮೊದಲು ರಾಜ್ಯದ ಎಲ್ಲ ಶ್ರದ್ಧಾಕೇಂದ್ರಗಳು ಸ್ವಚ್ಛ ಹಾಗೂ ಪಾವಿತ್ರ್ಯತೆಯಿಂದ ಕೂಡಿರಬೇಕೆಂಬ ಉದ್ದೇಶದಿಂದ ಜ. 7ರಿಂದ 13ರ ವರೆಗೆ ಸ್ವಚ್ಛತಾ ಸಪ್ತಾಹವನ್ನು ನಡೆಸಲಾಗುತ್ತಿದೆ.
4,13,010 ಮಂದಿ ಭಾಗಿ
ರಾಜ್ಯದಾದ್ಯಂತ 16,529 ಶ್ರದ್ಧಾ ಕೇಂದ್ರಗಳನ್ನು ಗುರುತಿಸಲಾಗಿದ್ದು ಸುಮಾರು 4,13,010 ಸ್ವಯಂ ಸೇವಕ ರು, ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನ ಜಾಗೃತಿ ಸದಸ್ಯರು, ನವಜೀವನ ಸಮಿತಿ ಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾಮ ಪಂಚಾಯತ್‌ನ ಸದಸ್ಯರು ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ನಮ್ಮ ನಡಿಗೆ ಶ್ರದ್ಧಾಕೇಂದ್ರದ ಸ್ವಚ್ಛತೆಯೆಡೆಗೆ ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಶ್ರದ್ಧಾಕೇಂದ್ರಗಳ ಶುಚಿತ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್. ಎಚ್. ಮಂಜುನಾಥ್ ತಿಳಿಸಿದ್ದಾರೆ.
ಸ್ವಚ್ಛತಾ ಕಾರ್ಯಕ್ರಮಗಳ ವಿವರ
ದೇವಸ್ಥಾನದ ಸುತ್ತಮುತ್ತಲಿನ ಗಿಡ ಘಂಟಿ ತೆರವು, ಮಂದಿರ, ಮಸೀದಿ, ಚರ್ಚ್‌ಗಳ ಆವರಣ ಸ್ವಚ್ಛತೆ, ಒಳಾಂಗಣ ಸ್ವಚ್ಛತೆಗೆ ಆದ್ಯತೆ. ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವಥ ಕಟ್ಟೆ/ಅರಳಿಕಟ್ಟೆ ಸ್ವಚ್ಛತೆ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ನಾನಕಟ್ಟೆ, ನದಿ ತೀರಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡು ಪ್ಲಾಸ್ಟಿಕ್, ಬಟ್ಟೆಬರೆ ಕಸಗಳನ್ನು ನದಿಗೆ ಎಸೆಯದಂತೆ ಅರಿವು ಮೂಡಿಸುವುದು, ವಿಶೇಷ ಕಾರ್ಯಕ್ರಮದ ದಿನ ಸ್ವಚ್ಛತೆಗಾಗಿ ವಿಶೇಷ ಸ್ವಚ್ಛತಾ ತಂಡ ರಚಿಸುವುದು. ಸ್ವಚ್ಛತೆಯ ಬಗ್ಗೆ ನಿಗಾ ವಹಿಸುವ ಆಸಕ್ತ ಸ್ವಯಂಸೇವಕರ ಕಾವಲು ಸಮಿತಿ ರಚನೆ ಮಾಡುವುದು. ತ್ಯಾಜ್ಯಗಳನ್ನು ಬಿಸಾಡಲು ಬಿದಿರಿನ ಬುಟ್ಟಿ, ಕಸದ ಬುಟ್ಟಿ, ತಗಡಿನ ಡಬ್ಬ ಇತ್ಯಾದಿಗಳನ್ನು ಇಟ್ಟು ಕಸವನ್ನು ಅಲ್ಲಿಯೇ ಹಾಕುವಂತೆ ಭಕ್ತರಿಗೆ ಸೂಚನೆ ನೀಡುವ ಫಲಕಗಳನ್ನು ಹಾಕಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.