ಉಪ್ಪಿನಂಗಡಿಯಲ್ಲಿ ಅಪಘಾತ; ಉದ್ವಿಗ್ನ ಸ್ಥಿತಿ: ಗಾಯಾಳು ಆಸ್ಪತ್ರೆಗೆ ಸಾಗಿಸಲು ನೆರವಾದ ಡಿಸಿ
Team Udayavani, Jun 18, 2022, 1:41 PM IST
ಅಪಘಾತಕ್ಕೆ ಕಾರಣವಾದ ಲಾರಿ, ಒಳ ಚಿತ್ರದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ
ಉಪ್ಪಿನಂಗಡಿ: ಇಲ್ಲಿ ಶನಿವಾರ ಪೆರ್ನೆ ಬಳಿ ಹೆದ್ದಾರಿ ಗುತ್ತಿಗೆ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೆರವಾಗಿದ್ದಾರೆ.
ಅಪಘಾತದ ಬಳಿಕ ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು, ಈ ವೇಳೆ ಸ್ಥಳಕ್ಕೆ ಆಲಂಕಾರು ಕಡೆಗೆ ಗ್ರಾಮ ವಾಸ್ತವ್ಯಕ್ಕೆ ತೆರಳುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆಗಮಿಸಿದ್ದು, ವಾಹನದಿಂದ ಇಳಿದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಅಪಘಾತದಲ್ಲಿ ಸಹ ಸವಾರೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಲಾರಿ ಚಾಲಕ ಪರಾರಿಯಾಗಿದ್ದ. ವಿಚಾರ ತಿಳಿದು ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು.
ಜಿಲ್ಲಾಧಿಕಾರಿಯ ಮಾನವೀಯತೆ ಮತ್ತು ಕಾರ್ಯ ದಕ್ಷತೆಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.