ಮಹಿಳೆ ಜಾಗೃತವಾದಲ್ಲಿ ಸಶಕ್ತೀಕರಣಕ್ಕೆ ಅರ್ಥ: ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ


Team Udayavani, Mar 9, 2023, 6:02 AM IST

heggade

ಬೆಳ್ತಂಗಡಿ: ಮಹಿಳಾ ಸಶಕ್ತೀಕರಣ ಅಂದರೆ ಮಹಿಳೆಯರಲ್ಲಿರುವ ಶಕ್ತಿ-ಸಾಮರ್ಥ್ಯ ಮತ್ತು ಕೌಶಲದೆಡೆಗೆ ಅವರಿಗೆ ಅರಿವು, ಜಾಗೃತಿ ಮೂಡಿಸಿ ಸಮಾಜದ ಮುಖ್ಯವಾಹಿನಿಗೆ ತರುವುದಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಸಶಕ್ತೀಕರಣಕ್ಕೆ ಶ್ರೇಷ್ಠ ಅವಕಾಶ, ಪ್ರೇರಣೆ ಮತ್ತು ನಿರಂತರ ಮಾರ್ಗದರ್ಶನ ನೀಡುತ್ತಿದೆ ಎಂದು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಉದ್ದಿಮೆದಾರರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ, ಇಂದು ಸರಕಾರ ಮತ್ತು ಸಮಾಜದಿಂದ ಸಿಗುವ ಅವಕಾಶಗಳು, ಶಿಕ್ಷಣ ಹಾಗೂ ಸಾಲ ಸೌಲಭ್ಯದ ಸದುಪಯೋಗ ಪಡೆದು ಮಹಿಳೆಯರು ಸ್ವಾವಲಂಬಿಗಳಾಗಿ ಉತ್ತಮ ವ್ಯವಹಾರದೊಂದಿಗೆ ಯಶಸ್ವಿ ಉದ್ಯಮಿಗಳಾಗಿ ಮಿಂಚುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಮೃತ ಜೀವನ ಪ್ರಯಾಸ್‌ ಚಿಂತನ ಕೃತಿ ಬಿಡುಗಡೆಗೊಳಿಸಿದ ಸಿಡ್ಬಿ ಅಧ್ಯಕ್ಷ ಶಿವ ಸುಬ್ರಹಮಣ್ಯ ರಾಮನ್‌ ಮಾತನಾಡಿ, ಸಿಡ್ಬಿಯ ಪ್ರಯಾಸ್‌ಯೋಜನೆಯಡಿ ಉದ್ದಿಮೆ ಆಸಕ್ತರಿಗೆ ಕಡಿಮೆ ಬಡ್ಡಿದರದಲ್ಲಿ ಉತ್ತಮ ಸಾಲ ಒದಗಿಸುತ್ತಿದೆ. ಮಹಿಳಾ ಉದ್ದಿಮೆದಾರರು ಉದ್ಯಮ ನೋಂದಾವಣೆ ಮಾಡಿಕೊಂಡು ಸರಕಾರಕ್ಕೆ ನೀಡುವ ತೆರಿಗೆಯನ್ನು ಸಕಾಲದಲ್ಲಿ ಪಾವತಿಸಬೇಕು. ಎಲ್ಲರೂ ಸ್ವಾವಲಂಬನೆಯೊಂದಿಗೆ ಜೀವನ ಮಟ್ಟ ಸುಧಾರಣೆ ಕಂಡುಕೊಳ್ಳಬೇಕು ಎಂದರು.

ಮಂಗಳೂರಿನ ಅನಂತ ಭಟ್‌, ಡ್ಯಾಫಿನಿ ಸ್ಟೆಲ್ಲಾ ಡಿ’ಸೋಜಾ, ಸಿರಿ ಸಂಸ್ಥೆಯ ಪ್ರಸನ್ನ ಯು. ತೆರಿಗೆ ಪಾವತಿ ಮತ್ತು ಲೆಕ್ಕಪತ್ರ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಡಾ| ಹೇಮಾವತಿ ವೀ.ಹೆಗ್ಗಡೆ, ಸಿಡ್ಬಿಯ ಮುಖ್ಯ ಮಹಾಪ್ರಬಂಧಕ ರವಿತ್ಯಾಗಿ ಮತ್ತು ಉಪಮಹಾಪ್ರಬಂಧಕ ನಿತಿನ್‌ ಶುಕ್ಲಾ ಉಪಸ್ಥಿತರಿದ್ದರು.

ಬಂಟ್ವಾಳದ ಯಶಸ್ವಿ ಮಹಿಳಾ ಉದ್ಯಮಿ ಯೋಗಿತಾ ತಮ್ಮ ಯಶೋಗಾಥೆಯನ್ನು ವಿವರಿಸಿದರು. 350 ಮಹಿಳಾ ಉದ್ಯಮಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದರು.
ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್‌. ಎಚ್‌. ಮಂಜುನಾಥ್‌ ಸ್ವಾಗತಿಸಿದರು. ಶಿವಾನಂದ ಆಚಾರ್ಯ ವಂದಿಸಿದರು. ಪೂಜಾ ಪಕ್ಕಳ ನಿರ್ವಹಿಸಿದರು.

1000 ಕೋಟಿ ರೂ. ಸಾಲ ಮಂಜೂರಾತಿ ಪತ್ರ ಹಸ್ತಾಂತರ
ಅಮೃತ ಜೀವನ ಪ್ರಯಾಸ್‌ ಚಿಂತನ ಕೃತಿ ಬಿಡುಗಡೆಗೊಳಿಸಿದ ಸಿಡ್ಬಿ ಅಧ್ಯಕ್ಷ ಶಿವ ಸುಬ್ರಹಮಣ್ಯ ರಾಮನ್‌ 1000 ಕೋಟಿ ರೂ. ಸಾಲ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌.ಮಂಜುನಾಥರಿಗೆ ನೀಡಿದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

23-balindra

Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

21-ptr

Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!

20-kadaba

ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.