ಚರಂಡಿ ಅವ್ಯವಸ್ಥೆ: ಕೃತಕ ನೆರೆ


Team Udayavani, Jun 13, 2019, 5:00 AM IST

t-22

ಬಂಟ್ವಾಳ: ತಡವಾದರೂ ಮಳೆ ಬಂತು. ಈ ಬಾರಿಯೂ ಬಿ.ಸಿ. ರೋಡ್‌ ಸರ್ವೀಸ್‌ ರಸ್ತೆಯಲ್ಲಿ ಮಳೆ ನೀರು ಹರಿಯಲಾಗದೆ ತುಂಬಿಕೊಂಡು ಕೃತಕನೆರೆ ಸೃಷ್ಟಿಯಾಗಿದೆ. ಅಸಮರ್ಪಕ ಕಾಂಕ್ರೀಟ್, ಚರಂಡಿಗೆ ನೀರು ಹರಿಯಲು ಎಲ್ಲೂ ಅವಕಾಶ ಇಡದಿರುವುದು, ಒಳ ಚರಂಡಿಗೆ ಸೂಕ್ತ ಸಂಪರ್ಕ ಕಲ್ಪಿಸದೇ ಇರುವುದರಿಂದ ಮಳೆ ನೀರು ಸರಾಗವಾಗಿ ಹರಿ ಯಲು ಅಡ್ಡಿಯಾಗುತ್ತಿದೆ. ಕಳೆದ ಮಳೆಗಾಲದಲ್ಲಿಯೂ ಈ ಪರಿಸರದಲ್ಲಿ ಇದೇ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಮಳೆಗಾಲ ಆರಂಭವಾಗುವ ಮುನ್ನವೇ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕಿತ್ತು.

ಬಂಟ್ವಾಳ ಪುರಸಭೆಯ ಸುಪರ್ದಿ ಯಲ್ಲಿರುವ ಈ ಸರ್ವಿಸ್‌ ರಸ್ತೆಯಲ್ಲಿ ಚರಂಡಿ ನಿರ್ಮಾಣ ಮಾಡುವ ಬಗ್ಗೆ ಕಳೆದ ಮಾರ್ಚ್‌-ಎಪ್ರಿಲ್ನಲ್ಲಿ ವಿವರವಾದ ವರದಿ ಪ್ರಕಟವಾಗಿತ್ತು. ಮಳೆಗಾಲ ತಡವಾಗಿ ಆರಂಭವಾದರೂ ಸುರಿಯುವ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆಯನ್ನು ಇನ್ನೂ ಕಲ್ಪಿಸಲು ಸಾಧ್ಯವಾಗಿಲ್ಲ.

ವಿವಿಧೆಡೆಗಳಿಂದ ಬರುವ ಬಸ್‌ಗಳು ಪ್ರಯಾಣಿಕರನ್ನು ಇಳಿಸಿಸುವುದು ಇದೇ ಸ್ಥಳದಲ್ಲಿ. ಮಹಿಳೆಯರು, ಮಕ್ಕಳು, ಹಿರಿಯರು ರಸ್ತೆಯಲ್ಲಿ ಇರುವ ನೀರಿನ ಎತ್ತರ ತಿಳಿಯದೆ ಬಟ್ಟೆ ಎತ್ತಿಕೊಂಡು ನಡೆಯಬೇಕು. ಕೊಳಕು ಕೆಸರು ನೀರಿನಲ್ಲಿ ಕಾಲು ಇಡುವುದೇ ವಾಕರಿಕೆ ಬರುವಂತಿರುತ್ತದೆ. ಮಳೆಗಾಲ ಆರಂಭವಾಗುವ ಮುನ್ನವೇ ಚರಂಡಿ ಕೆಲಸ ಮಾಡಿದ್ದರೆ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ. ಸರ್ವೀಸ್‌ ಬಸ್‌ ನಿಲ್ದಾಣದಲ್ಲಿ ನೀರು ನಿಂತು ಕೃತಕ ನೆರೆಯಂತಾಗುತ್ತದೆ. ಬಸ್‌ ನಿಲ್ಲಿಸಲು ಅಥವಾ ಪ್ರಯಾಣಿಕರು ಬಸ್‌ಗೆ ಹತ್ತಿ-ಇಳಿಯಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಪುರಸಭೆ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದೇ ಎಂದು ಜನ ಕಾದಿದ್ದಾರೆ.

 ಚರಂಡಿ ನಿರ್ವಹಣೆಗೆ ಸೂಚನೆ
ಬಿ.ಸಿ. ರೋಡ್‌ ಸರ್ವೀಸ್‌ ರಸ್ತೆಯಲ್ಲಿ ಮಳೆಯ ನೀರು ಹರಿದು ಹೋಗುವಲ್ಲಿ ಆಗಿರುವ ಸಮಸ್ಯೆ ಗಮನಿಸಲಾಗಿದೆ. ಬೇಸಗೆಯಲ್ಲಿ ಚರಂಡಿ ದುರಸ್ತಿ, ರಸ್ತೆ ಕಾಂಕ್ರೀಟ್‌ ಕಾಮಗಾರಿ ಸಂದರ್ಭ ಮಣ್ಣು, ಮರಳು, ಪ್ಲಾಸ್ಟಿಕ್‌ ತ್ಯಾಜ್ಯಗಳು ಬದಿಯಲ್ಲಿ ಸಿಕ್ಕಿಕೊಂಡು ನೀರು ವೇಗವಾಗಿ ಬಸಿದು ಹೋಗುವುದಕ್ಕೆ ಸಾಧ್ಯವಾಗಿಲ್ಲ. ಅದನ್ನು ತೆರವು ಮಾಡುವ ಕ್ರಮವನ್ನು ಮಾಡಲಾಗುವುದು. ಚರಂಡಿ ದುರಸ್ತಿಯನ್ನು ನಿರ್ವಹಿಸುವುದಕ್ಕೆ ಸೂಚನೆ ನೀಡಲಾಗಿದೆ.
 - ಡೊಮೆನಿಕ್‌ ಡಿ’ಮೆಲ್ಲೊ, ಎಂಜಿನಿಯರ್‌, ಬಂಟ್ವಾಳ ಪುರಸಭೆ

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.