ನಾಡ ಕಚೇರಿ ಕಟ್ಟಡಕ್ಕೆ ಹಸಿರು ನಿಶಾನೆ
Team Udayavani, Jul 22, 2018, 2:45 PM IST
ಉಪ್ಪಿನಂಗಡಿ: ಹೋಬಳಿ ಮಟ್ಟದ ನಾಡಕಚೇರಿ ನೂತನ ಕಟ್ಟಡಕ್ಕೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಪುತ್ತೂರು ತಾಲೂಕಿನ ಹಲವು ಗ್ರಾಮ ವ್ಯಾಪ್ತಿಯ ಈ ನಾಡಕಚೇರಿಯ ಕಟ್ಟಡ ನಾದುರಸ್ತಿಯಲ್ಲಿರುವ ಬಗ್ಗೆ ಮನವರಿಕೆಯಾಗಿದೆ. ಕಂದಾಯ ಇಲಾಖೆ ಬೇಡಿಕೆಯಂತೆ ಹೆಚ್ಚುವರಿ ಅನುದಾನವನ್ನು ಬಜೆಟ್‌ನಲ್ಲಿ ಕಾದಿರಿಸಲಾಗಿದೆ. ನಾಡಕಚೇರಿ ಕಟ್ಟಡಕ್ಕೆ ಮುಕ್ತಿ ನಿಚ್ಚಳಗೊಂಡಿದೆ.
ಮಳೆಗಾಲ ಮುಗಿದ ಬಳಿಕ ನೂತನ ಕಟ್ಟಡದ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ. ಛಾವಣಿ ಸೋರಿಕೆಯಿಂದ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಾಂತರಕ್ಕೆ ಬದಲಿ ಸರಕಾರಿ ಕಟ್ಟಡ ಹುಡುಕಾಟದಲ್ಲಿ ತೊಡಗಿದ್ದಾರೆ. ನಾಡಕಚೇರಿ ಅವ್ಯವಸ್ಥೆಗಳ ಕುರಿತು ‘ಉದಯವಾಣಿ’ ಸುದಿನ ಸಚಿತ್ರ ವರದಿ ಪ್ರಕಟಿಸಿತ್ತು. ನೂತನ ಕಟ್ಟಡದ ಕಾಮಗಾರಿಯು 20 ಲ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ.
ಗ್ರಾ.ಪಂ.ನಿಂದ ನಿರ್ಣಯ
ಗ್ರಾ.ಪಂ. ಕಚೇರಿಯ ಕಟ್ಟಡದಲ್ಲಿ ನಾಡಕಚೇರಿಗೆ ಸ್ಥಳಾವಕಾಶ ಕೋರಲಾಗಿತ್ತು. ಗ್ರಾ.ಪಂ. ಆಡಳಿತ ಹಳೆಯ ನಾಡ ಕಚೇರಿಯ ನೆಲ ಅಂತಸ್ತನ್ನು ಪಂಚಾಯತ್ ವಾಣಿಜ್ಯ ಸಂಕೀರ್ಣ ರಚಿಸಲು ಒದಗಿಸಿದರೆ ಮಾತ್ರ ಮೇಲಂತಸ್ತಿನಲ್ಲಿ ನಾಡಕಚೇರಿಗೆ ಸ್ಥಳ ನೀಡಲಾಗುವುದು ಎನ್ನುವ ನಿರ್ಣಯ ಮಾಡಿದೆ. ಜಿಲ್ಲಾಧಿಕಾರಿ ಜತೆ ಒಪ್ಪಂದದ ಚರ್ಚೆಗೆ ದಿನ ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.