Belthangady ಪಾನಮತ್ತ ವ್ಯಕ್ತಿಯಿಂದ ಪತ್ನಿ, ಮಗಳ ಮೇಲೆ ಹಲ್ಲೆ
Team Udayavani, Dec 20, 2023, 12:40 AM IST
ಬೆಳ್ತಂಗಡಿ: ಪಾನಮತ್ತ ವ್ಯಕ್ತಿಯೊಬ್ಬ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಶಿಶಿಲದಲ್ಲಿ ಸಂಭವಿಸಿದ್ದು ಸ್ಥಳೀಯರ ಸಹಕಾರದೊಂದಿಗೆ ಹಲ್ಲೆಗೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಶಿಲ ಗ್ರಾಮದ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ (56) ಹಲ್ಲೆ ನಡೆಸಿದ ಆರೋಪಿ. ಸೋಮವಾರ ತಡರಾತ್ರಿ ಪಾನಮತ್ತನಾಗಿ ಮನೆಗೆ ಬಂದ ಸುರೇಶ್ ತನ್ನ ಪತ್ನಿ ಮೋಹಿನಿ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ.
ಪತ್ನಿಯ ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು ಒಂದು ಕಣ್ಣಿಗೆ ಸಂಪೂರ್ಣ ಹಾನಿಯಾಗಿದೆ. ಮಗಳ ತಲೆಗೂ ಹಲ್ಲೆ ನಡೆಸಿದ್ದಾನೆ.
ತೀವ್ರವಾಗಿ ಹಲ್ಲೆಗೆ ಒಳಗಾದ ತಾಯಿ ಹಾಗೂ ಮಗಳು ಮನೆಯಿಂದ ಓಡಿದ್ದಾರೆ. ಮಗಳು ನೆರೆಮನೆಗೆ ಬಂದು ವಿಷಯ ತಿಳಿಸಿದಾಗಲೇ ಇತರರಿಗೆ ಮಾಹಿತಿ ಲಭಿಸಿದ್ದು ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು ರಾತ್ರಿ ಹುಡುಕಾಟ ನಡೆಸಿದರೂ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಪತ್ತೆಯಾಗಿರಲಿಲ್ಲ ಮಂಗಳವಾರ ಬೆಳಗ್ಗೆ ಹುಡುಕಾಟ ನಡೆಸಿದಾಗ ಸ್ಥಳೀಯ ಮನೆಯೊಂದರ ಕೊಟ್ಟಿಗೆಯಲ್ಲಿ ಅಸ್ವಸ್ಥರಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯ ಬಂಧನ
ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಬಳಿಕ ಅಲ್ಲಿಂದ ಪರಾರಿಯಾಗಿದ್ದ ಆರೋಪಿ ಸುರೇಶ್ ಗೌಡನನ್ನು ಧರ್ಮಸ್ಥಳ ಪಿಎಸ್ಐ ಅನಿಲ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.