Uppinangady ಕಾಮಗಾರಿ ವೇಳೆ ನೀರಿನ ಪೈಪ್ ಗಳಿಗೆ ಹಾನಿ ಸ್ಥಳೀಯರಿಂದ ಕಾಮಗಾರಿಗೆ ತಡೆ
Team Udayavani, Oct 28, 2023, 9:38 PM IST
ಉಪ್ಪಿನಂಗಡಿ: ಹೆದ್ದಾರಿ ಅಗಲೀಕರಣದ ಕಾಮಗಾರಿಯ ವೇಳೆ ಕುಡಿಯುವ ನೀರಿನ ಪೈಪು ಗಳನ್ನು ಹಾನಿಗೊಳಿಸಿದ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ನೀರಿಲ್ಲದೆ ಸಂಕಷ್ಟಗೀಡಾದ ಮಂದಿ ಶನಿವಾರ ಆಕ್ರೋಶಗೊಂಡು ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.
ಉಪ್ಪಿನಂಗಡಿಯ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಹಲವೆಡೆಗೆ ಸರಬರಾಜಾಗುವ ನೀರಿನ ಪೈಪು ಗಳು ಕಾಮಗಾರಿಯ ವೇಳೆ ಹಾನಿಯಾಗಿದ್ದವು. ಇದನ್ನು ಸರಿಪಡಿಸಬೇಕೆಂದು ಪಂಚಾಯತ್ ಆಡಳಿತವು ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳನ್ನು ಒತ್ತಾಯಿಸಿತ್ತು. ಸ್ಪಂದಿಸುವ ಭರವಸೆ ನೀಡಿದ್ದರೂ ಆಬಳಿಕ ಮೌನ ವಹಿಸಿದ್ದರು. ಇದರಿಂದಾಗಿ ಸತತ ನಾಲ್ಕು ದಿನ ನೀರಿಲ್ಲದೆ ಉಪ್ಪಿನಂಗಡಿ ಪೇಟೆಯ ಜನತೆ ಸಮಸ್ಯೆಗೀಡಾದರು.
ಈ ನಡುವೆ ಶನಿವಾರ ಸ್ಥಳೀಯರು ನೀರಿನ ಪೈಪುಗಳನ್ನು ಸರಿಪಡಿಸದೆ ಕಾಮಗಾರಿ ಮುಂದುವರಿಸಲು ಅವಕಾಶ ನೀಡಬಾರದೆಂದು ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್ ನೀರಿನ ಪೈಪುಗಳನ್ನು ಆದ್ಯತೆಯ ಮೇರೆಗೆ ಸರಿಪಡಿಸಿಕೊಡಬೇಕೆಂದು ಒತ್ತಾಯಿಸಿದರು.
ಮಾತ್ರವಲ್ಲದೇ ಜಿ.ಪಂ. ಸಿಇಒ ಅವರಿಗೆ ಸಮಸ್ಯೆಯ ತೀವ್ರತೆಯನ್ನು ತಿಳಿಸಲಾಯಿತು. ಆಬಳಿಕ ಎಚ್ಚೆತ್ತ ಜಿಲ್ಲಾಡಳಿತ ಸಂಬಂಧಿತ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿತು. ಅದರಂತೆ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ತಾಕೀತು ಮಾಡಿತು. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಕೆಎನ್‌ಆರ್ ಸಂಸ್ಥೆಯ ಅಧಿಕಾರಿಗಳು ಹಾನಿಗೀಡಾದ ಪೈಪುಗಳನ್ನು ರವಿವಾರದೊಳಗೆ ಸರಿಪಡಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.