8 ವಿದ್ಯುತ್‌ ಕಂಬಗಳು ಧರಾಶಾಯಿ

ಕೊಳ್ನಾಡು: ಎಚ್‌.ಟಿ. ಲೈನ್‌ ಮೇಲೆ ಬಿದ್ದ ಮರ

Team Udayavani, Jul 24, 2019, 5:00 AM IST

x-15

ವಿಟ್ಲ: ಕೊಳ್ನಾಡು ಗ್ರಾಮದ ಕರೈಯಲ್ಲಿ ಭಾರೀ ಗಾಳಿ-ಮಳೆಗೆ ಬೃಹತ್‌ ಮರವೊಂದು ವಿದ್ಯುತ್‌ ತಂತಿಯ ಮೇಲೆ ಬಿದ್ದು 8 ವಿದ್ಯುತ್‌ ಕಂಬಗಳು ಧರಾಶಾಯಿಯಾಗಿ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಮಂಗಳವಾರ ಸಂಭವಿಸಿದೆ.

ಕೊಳ್ನಾಡು ಗ್ರಾಮದ ಕರೈ ಜಂಕ್ಷನ್‌ ಸುತ್ತಮುತ್ತಲಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಮತ್ತು ಮರ ಪಕ್ಕದಲ್ಲಿ ಹಾದು ಹೋಗಿದ್ದ ಎಚ್‌.ಟಿ. ಲೈನ್‌ ಮೇಲೆ ಮರ ಬಿದ್ದಿದೆ. ಈ ರಭಸಕ್ಕೆ 8 ವಿದ್ಯುತ್‌ ಕಂಬಗಳು ಉರುಳಿದ್ದು, ಇನ್ನೂ ಕೆಲವು ಕಂಬಗಳು ರಸ್ತೆಗೆ ವಾಲಿ ನಿಂತಿವೆ. ಪರಿಣಾಮವಾಗಿ ವಿಟ್ಲ ಸಾಲೆತ್ತೂರು ರಸ್ತೆ ಸಂಚಾರ ಅರ್ಧ ಗಂಟೆ ಕಾಲ ಸ್ಥಗಿತಗೊಂಡಿತ್ತು. ವಾಹನಗಳನ್ನು ಬೇರೆ ರಸ್ತೆ ಮೂಲಕ ಕಳುಹಿಸಲಾಯಿತು.

ತೆರವು ಕಾರ್ಯಾಚರಣೆ
ಕೊಳ್ನಾಡು ಗ್ರಾಮ ಪಂಚಾಯತ್‌, ಅರಣ್ಯ ಇಲಾಖೆ ಹಾಗೂ ಕರೈ ಫ್ರೆಂಡ್ಸ್‌ ತಂಡದ ಕಾರ್ಯಕರ್ತರು ಜತೆಯಾಗಿ ಕಾರ್ಯಾಚರಣೆ ನಡೆಸಿ ಮರ ಹಾಗೂ ವಿದ್ಯುತ್‌ ಕಂಬಗಳನ್ನು ರಸ್ತೆಯಿಂದ ತೆರವುಗೊಳಿಸಿದರು.

ಕೊಳ್ನಾಡು ಗ್ರಾಮ ಪಂಚಾಯತ್‌ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಅವರು ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದು, ಕಂಬಗಳ ಸ್ಥಳಾಂತರ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಜಿಲ್ಲಾ ಪಂಚಾಯತ್‌ ಸದಸ್ಯ ಎಂ.ಎಸ್‌.ಮಹಮ್ಮದ್‌, ಕೊಳ್ನಾಡು ಗ್ರಾಮ ಪಂಚಾಯತ್‌ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಸದಸ್ಯ ಪವಿತ್ರ ಪೂಂಜ, ಮೆಸ್ಕಾಂ ಶಾಖಾಧಿಕಾರಿ ಪ್ರಸನ್ನ ಮೊದಲಾದವರು ಭೇಟಿ ನೀಡಿ ತುರ್ತು ಕಾಮಗಾರಿಗೆ ಕ್ರಮಕೈಗೊಂಡಿದ್ದಾರೆ.

ಇಲಾಖೆಗಳ ನಿರ್ಲಕ್ಷ್ಯ
ಸುರತ್ಕಲ್‌-ಸಾಲೆತ್ತೂರು-ಕಬಕ ರಾಜ್ಯ ಹೆದ್ದಾರಿಯ ಕಾಮಗಾರಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದೆ. ಈ ಸಂದರ್ಭ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಹಾಗೂ ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸಲು ಕೊಳ್ನಾಡು ಗ್ರಾ.ಪಂ. ನಿರ್ಣಯ ಕೈಗೊಂಡು ಪತ್ರ ಬರೆಯಲಾಗಿತ್ತು. ಆದರೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ನಿರ್ಲಕ್ಷ್ಯ ವಹಿಸಿದ್ದು, ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಲೋಕೋಪಯೋಗಿ ಇಲಾಖೆಯಲ್ಲಿ ವಿಚಾರಿಸಿದಾಗ ಈಗಾಗಲೇ ಮೆಸ್ಕಾಂ ಇಲಾಖೆಗೆ 64 ಲಕ್ಷ ರೂ. ಹಣ ಪಾವತಿಸಲಾಗಿದೆ ಎಂದು ತಿಳಿಸಿದೆ. ಆದರೆ ಮೆಸ್ಕಾಂ ಇಲಾಖೆಯವರು ನಮಗೆ ಹಣ ಪಾವತಿಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಎರಡು ಇಲಾಖೆಗಳ ಹೊಂದಾಣಿಕೆ ಸಮಸ್ಯೆಯಿಂದ ಕಂಬಗಳ ಸ್ಥಳಾಂತರ ವಾಗಿಲ್ಲ ಎಂದು ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಉದಯವಾಣಿಗೆ ತಿಳಿಸಿದ್ಧಾರೆ.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.