ಅತಿಯಾದ ಆತ್ಮ ವಿಶ್ವಾಸದಿಂದ ಅಪಾಯ: ಶರತ್
Team Udayavani, Jun 13, 2018, 1:22 PM IST
ಸುಳ್ಯ : ಆತ್ಮವಿಶ್ವಾಸ ಇರಬೇಕು. ಆದರೆ ಅತಿಯಾದ ಆತ್ಮವಿಶ್ವಾಸ ಹೊಂದಿದ್ದಲ್ಲಿ ಅದರಿಂದ ಆಪತ್ತು ಕಟ್ಟಿಟ್ಟ ಬುತ್ತಿ ಎಂದು ನಿವೃತ್ತ ಯೋಧ ಶರತ್ ಭಂಡಾರಿ ನುಡಿದರು. ಕೆವಿಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಸೋಮವಾರ ನಡೆದ ಬೀಳ್ಗೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕರ್ತವ್ಯಕ್ಕೆ ಪ್ರೀತಿ, ನಿಷ್ಠೆ ಇರಲಿ. ಅದು ನಿಮ್ಮನ್ನು ಉನ್ನತ್ತಿಗೆ ಕೊಂಡೊಯ್ಯುತ್ತದೆ ಎಂದ ಅವರು, ಸಮಯ ಪ್ರಜ್ಞೆ, ಪ್ರಾಮಾಣಿಕತೆ ಮುಖ್ಯ ಧ್ಯೇಯವಾಗಿದ್ದರೆ, ಯಶಸ್ಸು ನಿಮ್ಮದಾಗುತ್ತದೆ. ಅದರ ಜತೆಗೆ ದೇಶ ಪ್ರೀತಿ, ಪರಿಸರ ಪ್ರೇಮವು ಜತೆಗಿರಲಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸಂದರ್ಭ ಅವರು ಕಾಲೇಜಿನ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಕೆವಿಜಿ ಕಾನೂನು ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪಡ್ಡಂಬೈಲು ವೆಂಕಟರಮಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ| ಎನ್.ಎ. ಜ್ಞಾನೇಶ್, ಸುಧನ್ವಕೃಷ್ಣ, ಕಾಲೇಜು ಮ್ಯಾಗಜೀನ್ ಸಂಪಾದಕರಾದ ಡಾ| ಕೇಶವೇಣಿ ಎನ್. ಉಪಸ್ಥಿತರಿದ್ದರು. ಸಾಧಕ ವಿದ್ಯಾರ್ಥಿಗಳಾದ ಹೇಮಂತ್ ಕುಮಾರ್ ಎಸ್.ಡಿ., ಸಿನಾನ್ ಎಸ್. ಎಂ., ಡೀನ್ ಪೌಲ್ ಥೋಮಸ್, ಅಜ್ಮಲ ಇಬ್ರಾಹಿಂ ಬಿ.ಎಂ., ಅನ್ವಿತಾ ಯು.ಎಂ. ಅವರನ್ನು ಅಭಿನಂದಿಸಲಾಯಿತು.
ಡಾ| ಲೇಖಾ ಬಿ.ಎಂ. ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ಡಾ| ಎಸ್. ಗೋವಿಂದ ಭಟ್ ಸ್ವಾಗತಿಸಿದರು. ಡಾ| ಶ್ರೀಧರ ಕೆ. ವಂದಿಸಿದರು. ಸ್ಪರ್ಶ ಬಿ.ಪಿ. ಮತ್ತು ಶ್ರುತಿ ಪಿ.ಜೆ. ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.