ರೈತರ ಸ್ವಾಭಿಮಾನ ಬದುಕಿಗೆ ಪ್ರೋತ್ಸಾಹ: ನಾಗರಾಜ್
Team Udayavani, Apr 11, 2019, 6:00 AM IST
ವಿವಿಧ ಹಾಲು ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿಗಳ ವಿಚಾರ ವಿಮರ್ಶೆ ಸಭೆ ಜರಗಿತು.
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರು ರೈತರಪರವಾಗಿ ಹೈನುಗಾರಿಕೆಗೆ ಅತ್ಯಂತ ಪ್ರೋತ್ಸಾಹ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಹೈನುಗಾರಿಕೆ ರೈತರ ಸ್ವಾಭಿಮಾನದ ಬದುಕು ಕಟ್ಟುವಲ್ಲಿ ಹೆಗ್ಗಡೆಯವರ ಕೊಡುಗೆ ಅಪಾರ ಎಂದು ರಾಜ್ಯ ಹಾಲು ಮಹಾಮಂಡಳಿಯ ಅಧ್ಯಕ್ಷ ಬಿ. ನಾಗರಾಜು ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ವಿವಿಧ ಹಾಲು ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿಗಳ ವಿಚಾರ ವಿಮರ್ಶೆ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಅತ್ಯಂತ ಕಷ್ಟದ ಕಾಲದಲ್ಲಿದ್ದಾಗ 4,000ಕ್ಕೂ ಹೆಚ್ಚು ಹಾಲು ಉತ್ಪಾದಕ ಸಹಕಾರಿ ಸಂಘಗಳ ಕಟ್ಟಡಗಳಿಗೆ 18 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿರುವುದೇ ಇದಕ್ಕೆ ಸಾಕ್ಷಿ. ಅದಕ್ಕಾಗಿ ರಾಜ್ಯದ ಹೈನುಗಾರಿಕೆ ರೈತರ ಮತ್ತು ಒಕ್ಕೂಟದ ಪರವಾಗಿ ಹೆಗ್ಗಡೆಯವರನ್ನು ಅಭಿನಂದಿಸುತ್ತೇನೆ ಎಂದರು.
ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ಮಾತನಾಡಿ, ರೈತರಿಗೆ ಒಕ್ಕೂಟ ದಿಂದ ನೀಡುವ ಸಹಕಾರ ಅಭಿನಂದ ನೀಯ. ಎಲ್ಲ ಹಾಲು ಉತ್ಪಾದಕ ಸಹಕಾರ ಸಂಘಗಳು ಅತ್ಯಂತ ಪಾರದರ್ಶಕತೆ ಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು ಮಾದರಿಯಾಗಿದೆ. ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷರ ಸೇವೆ ಅಭಿನಂದನೀಯ ಎಂದರು.
ಯೋಜನೆಯ ಸಮುದಾಯ ಅಭಿವೃದ್ಧಿ ನಿರ್ದೇಶಕ ಬಿ. ಜಯರಾಮ ನೆಲ್ಲಿತ್ತಾಯ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಮಹಾ ಮಸ್ತಕಾಭಿಷೇಕ ಸಮಯದಲ್ಲಿ ವಿವಿಧ ಹಾಲು ಉತ್ಪಾದಕ ಸಹಕಾರಿ ಸಂಘಗಳಿಂದ, ರಾಜ್ಯದ ಹಾಲು ಒಕ್ಕೂಟದಿಂದ ನೀಡಿದ ಸಹಕಾರ ಪ್ರಶಂಸನೀಯ. ಈ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರಾಜ್ಯದ ಹಾಲು ಒಕ್ಕೂಟ ಮಹಾಮಂಡಳದ ಅಧ್ಯಕ್ಷರಿಗೆ, ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.