ಪುತ್ತೂರು: ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋದ ಮನೆ
Team Udayavani, Jan 30, 2021, 3:53 PM IST
ಪುತ್ತೂರು: ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಮನೆ ಪೂರ್ತಿ ಸುಟ್ಟು ಹೋದ ಘಟನೆ ಜ.30ರಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಾಲಿಂಗೇಶ್ವರ ದೇವಾಸ್ಥಾನದ ದೇವಮಾರು ಗದ್ದೆಯ ಸಮೀಪದ ಮನೆಯಲ್ಲಿ ನಡೆದಿದೆ.
ಪ್ಲಾಸ್ಟಿಕ್ ಬಕೆಟ್ ಹಾಗೂ ಇತರ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದ ವ್ಯಕ್ತಿಗಳು ಈ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ:ಕರ್ತವ್ಯದ ವೇಳೆಯಲ್ಲೇ ಮಂಗಳೂರು ಸಿಸಿಬಿ ಪೊಲೀಸರ ಎಣ್ಣೆಪಾರ್ಟಿ! ವಿಡಿಯೋ ವೈರಲ್
ಬೆಂಕಿ ಅವಘಡ ನಡೆದ ವಿಚಾರ ತಿಳಿಯುತ್ತಲೇ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದರು. ಹೀಗಾಗಿ ಯಾವುದೇ ಸಾವು ನೋವು ಉಂಟಾಗಿಲ್ಲ. ಆದರೆ ಮನೆಯೊಳಗಡೆ ಶೇಖರಿಸಿದ್ದ ಪ್ಲಾಸ್ಟಿಕ್ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿ ಅಪಾರ ನಷ್ಟ ಉಂಟಾಗಿದೆ.
ಇದನ್ನೂ ಓದಿ:ಗಾಂಧೀಜಿಯನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ಮಂದಿ ಹೆಚ್ಚಾಗಿದ್ದಾರೆ: ಸಿದ್ದರಾಮಯ್ಯ
ಘಟನಾ ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕದಳದ ಎರಡು ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಪುತ್ತೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.