ತುಂಬಿ ಹರಿಯುತ್ತಿದೆ ನೇತ್ರಾವತಿ: ಬಂಟ್ವಾಳದ ತಗ್ಗು ಪ್ರದೇಶಗಳು ಮುಳುಗಡೆ, ಸಂಚಾರ ಅಸ್ತವ್ಯಸ್ತ
Team Udayavani, Aug 8, 2020, 12:32 PM IST
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದ್ದು, ಬಂಟ್ವಾಳ ತಾಲೂಕಿನ ನದಿ ಪಾತ್ರದ ಬಹುತೇಕ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆ ಪ್ರದೇಶದಲ್ಲಿ ತಗ್ಗು ಪ್ರದೇಶದ ಅಂಗಡಿ ಮುಂಗಟ್ಟುಗಳು ಮುಳುಗಡೆಯಾಗಿದೆ. ಬಂಟ್ವಾಳ-ಜಕ್ರಿಬೆಟ್ಟು ರಸ್ತೆಯಲ್ಲಿ ಪ್ರವಾಹ ನೀರು ತುಂಬಿದ್ದು, ಸಂಚಾರ ಬಂದ್ ಮಾಡಲಾಗಿದೆ. ಗೂಡಿನಬಳಿ ಪ್ರದೇಶದಲ್ಲೂ ರಸ್ತೆಗೆ ನೀರು ನುಗ್ಗಿದ್ದು, ಬಂಟ್ವಾಳ-ಗೂಡಿನಬಳಿ ಸಂಚಾರ ಬಂದ್ ಆಗಿದೆ. ಆಲಡ್ಕ ಪ್ರದೇಶದಲ್ಲಿ ಮನೆಗಳೂ ಜಲಾವೃತವಾಗಿದ್ದು, ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ.
ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಸೀದಿಯ ಆವರಣ ಸಂಪೂರ್ಣ ಮುಳುಗಡೆಯಾಗಿದೆ. ಮೆಲ್ಕಾರ್-ಪಾಣೆಮಂಗಳೂರು ಸಂಚಾರ ಬಂದ್ ಆಗಿದೆ. ತಾಲೂಕಿನ ಬಂಟ್ವಾಳ, ಪಾಣೆಮಂಗಳೂರು, ಬರಿಮಾರು, ನರಿಕೊಂಬು, ಶಂಭೂರು, ಸರಪಾಡಿ, ಮಣಿನಾಲ್ಕೂರು, ಕಡೇಶ್ವಾಲ್ಯ, ನರಿಕೊಂಬು ಪ್ರದೇಶಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.