Forest Department ದೇಯಿಬೈದೆತಿ ಔಷಧೀಯ ವನ ಅಭಿವೃದ್ಧಿಗೆ ಕ್ರಮ
Team Udayavani, Nov 14, 2023, 9:11 PM IST
ಬಡಗನ್ನೂರು: ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಪುತ್ತೂರು ಉಪ ವಿಭಾಗ, ಪುತ್ತೂರು ವಲಯ, ಗ್ರಾಮ ಅರಣ್ಯ ಸಮಿತಿ ಬಡಗನ್ನೂರು ಇದರ ಮಹಾಸಭೆ ಮತ್ತು ಹೊಸ ನಿರ್ವಹಣ ಸಮಿತಿ ಆಯ್ಕೆ ಪ್ರಕ್ರಿಯೆ ಪಟ್ಟೆ ಬಡಗನ್ನೂರು ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ಮಾತನಾಡಿ, ಮುಡಿಪಿನಡ್ಕ ಶ್ರೀ ದೇಯಿಬೈದೆತಿ ಔಷಧೀಯ ಉದ್ಯಾನವನ ಅಭಿವೃದ್ಧಿ ಪಡಿಸುವ ಬಗ್ಗೆ ಈಗಾಗಲೇ ಮೇಲಾಧಿಕಾರಿ ಯವರಿಂದ ಅನುಮತಿ ದೊರಕಿದೆ. ಮಕ್ಕಳಿಗೆ ಜಾರುಬಂಡಿ, ಹಾಗೂ ಇನ್ನಿತರ ಸೌಲಭ್ಯಗಳನ್ನು ಅಳವಡಿಸಲಾಗುವುದು. ಮುಕ್ತ ಅವಕಾಶ ನೀಡಲಾಗುವುದು. ಹಳ್ಳಿ ಜನರು ಸ್ವಾವಲಂಬಿ ಜೀವನ ನಡೆಸುವ ಉದ್ದೇಶದಿಂದ ಗ್ರಾಮಾರಣ್ಯ ಸಮಿತಿ ಹುಟ್ಟು ಹಾಕಲಾಯಿತು ಎಂದರು.
ಕಾರ್ಯಕ್ರಮವನ್ನು ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ಎಂ. ಉದ್ಘಾಟಿಸಿ ಮಾತನಾಡಿ ಗ್ರಾಮಾರಣ್ಯ ಸಮಿತಿ ಹತ್ತು ಹಲವು ಸಮಾಜಮುಖೀ ಕಾರ್ಯ ಮಾಡುತ್ತಾ ಬರುತ್ತಿದೆ. ಅರಣ್ಯ ಇಲಾಖೆ ಅಡಿಯಲ್ಲಿ ಸ್ವಸಹಾಯ ಸಂಘವನ್ನು ರಚಿಸಿಕೊಂಡು ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ ಇದು ಬಡವರ ಪಾಲಿಗೆ ಅಶಾದೀಪವಾಗಿದೆ ಎಂದರು.
ಪುತ್ತೂರು ವಲಯ ಅರಣ್ಯ ಅಧಿಕಾರಿ ಕಿರಣ್ ಬಿ. ಎಂ., ಪಟ್ಟೆ ಶ್ರೀಕೃಷ್ಣ ಹಿ.ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಎನ್. ಶುಭಹಾರೈಸಿದರು.
ಬಡಗನ್ನೂರು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷೆ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.ಪಾಣಾಜೆ ವಲಯ ಉಪ ಅರಣ್ಯಾಧಿಕಾರಿ ಪ್ರಕಾಶ್ ರೈ ಸ್ವಾಗತಿಸಿದರು. ಗಸ್ತು ಅರಣ್ಯ ಪಾಲಕ ಲಿಂಗರಾಜು ವರದಿ ಮಂಡಿಸಿ ವಂದಿಸಿದರು.
ಗ್ರಾಮಾರಣ್ಯ ಸಮಿತಿ ಸದಸ್ಯ ಕೇಶವ ಪ್ರಸಾದ್ ನಿರೂಪಿಸಿದರು. ಬೆಟ್ಟಂಪ್ಪಾಡಿ ಗಸ್ತು ಅರಣ್ಯ ಪಾಲಕ ಸುಧೀರ್ ಹೆಗ್ಡೆ, ನೆಟ್ಟಣಿಗೆ ಮೂಟ್ನೂರು ಗಸ್ತು ಅರಣ್ಯ ಪಾಲಕ ಉಮೇಶ್, ಅರಣ್ಯ ವೀಕ್ಷಕರಾದ ದೇವಪ್ಪ ಅರಿಯಡ್ಕ, ವೆಂಕಪ್ಪ ಗೌಡ ಬಡಗನ್ನೂರು, ಹಾಗೂ ಚಾಲಕ ಜಗ್ಗದೀಶ್ ಮತ್ತಿತರರಿದ್ದರು.
ಪುತ್ತೂರು ತಾಲೂಕು ಕಂದಾಯ ನಿರೀಕ್ಷ ಗೋಪಾಲ ಚುನಾವಣಾಧಿಕಾರಿದ್ದರು. ಗ್ರಾಮಾರಣ್ಯ ಸಮಿತಿ ಅಧ್ಯಕ್ಷರಾಗಿ ಸವಿತಾ ಗೆಜ್ಜೆಗಿರಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.